Asianet Suvarna News Asianet Suvarna News

ಮುಖ್ಯಮಂತ್ರಿಯೂ ಇಲ್ಲ, ಸಚಿವ ಸ್ಥಾನಾನೂ ಇಲ್ಲ: ಬೆಲ್ಲದ ಹೇಳಿದ್ದಿಷ್ಟು

* ಅಧಿಕಾರ ಸಿಗದಿದ್ದರೇನು ಶಾಸಕನಾಗಿ ಮೊದಲಿನಂತೆ ಕೆಲಸ: ಬೆಲ್ಲದ
* ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅರವಿಂದ ಬೆಲ್ಲದ ಹೇಳಿಕೆ ಪೋಸ್ವ್‌
* ಏನೇ ಬರಲಿ ಎಲ್ಲರೂ ಒಂದಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡೋಣ 
 

BJP MLA Arvind Bellad Talks Over Minister Post grg
Author
Bengaluru, First Published Aug 6, 2021, 8:25 AM IST

ಧಾರವಾಡ(ಆ.06): ಜೀವನದಲ್ಲಿ ಸೋಲು- ಗೆಲುವು ಶಾಶ್ವತವಲ್ಲ. ದೇವರು ಎಲ್ಲವನ್ನೂ ಸಮಯಕ್ಕೆ ತಕ್ಕಂತೆ ಒದಗಿಸುತ್ತಾನೆ. ಈಗಿರುವ ಸಂದರ್ಭದಲ್ಲಿ ಶಾಸಕನಾಗಿ ಕ್ಷೇತ್ರದ ಕೆಲಸವನ್ನು ಮೊದಲಿನಂತೆ ಮಾಡಲು ಸದಾ ಸಿದ್ಧನಿದ್ದೇನೆ ಎಂದು ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹೇಳಿಕೊಂಡಿದ್ದಾರೆ.

ಮುಖ್ಯಮಂತ್ರಿ ಹಾಗೂ ಮಂತ್ರಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೆಲ್ಲದ ಬೆಂಬಲಿಗರು, ಕ್ಷೇತ್ರದ ಕಾರ್ಯಕರ್ತರು, ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ವ್‌ ಮಾಡಿರುವ ಅವರು, ಧಾರವಾಡ ಕ್ಷೇತ್ರ ಶಿಕ್ಷಣ ಕಾಶಿ, ಸುಸಂಸ್ಕೃತ ಕ್ಷೇತ್ರ. ಹೀಗಾಗಿ ನನಗೆ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಕೊರೋನಾ ಸಂದರ್ಭದಲ್ಲಿ ಯಾರೂ ಕೂಡ ಬೀದಿಗಿಳಿದು ಪ್ರತಿಭಟನೆ ನಡೆಸಬಾರದೆಂದು ವಿನಂತಿಸಿಕೊಂಡಿದ್ದಾರೆ.

ಸಚಿವ ಸ್ಥಾನವೂ ಸಿಗದಿದ್ದರೆ ಹೇಗೆ ಮುಖ ತೋರಿಸಲಿ?: ಸಿಎಂ ರೇಸ್‌ನಲ್ಲಿದ್ದ ಶಾಸಕ

ಧಾರವಾಡ- 74 ಮತಕ್ಷೇತ್ರವನ್ನು ಕಳೆದ ಎರಡು ಅವಧಿಯಿಂದ ಪ್ರತಿನಿಧಿಸುತ್ತಿದ್ದೇನೆ. ಕ್ಷೇತ್ರದ ಮತದಾರರ ಪ್ರೀತಿ- ವಿಶ್ವಾಸ, ಬೆಂಬಲದಿಂದ ನನ್ನ ಹೆಸರು ರಾಜ್ಯದ ಅತ್ಯುನ್ನತ ಹುದ್ದೆಯವರೆಗೆ ಪರಿಗಣಿಸಲ್ಪಟ್ಟು ಪ್ರಧಾನಮಂತ್ರಿಗಳ ಗಮನಕ್ಕೆ ಬರುವಂತಾಗಿದೆ. ರಾಜ್ಯದ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸ್ಥಾನಮಾನ ಸಿಗದೇ ಇರುವುದು ತಮ್ಮಂತೆ ನನಗೂ ಬೇಸರ ತಂದಿದೆ. ಆದರೂ ಪಕ್ಷದ ಚೌಕಟ್ಟಿನಲ್ಲಿ ನಾನು ಇದೆಲ್ಲವನ್ನೂ ಸಹಿಸಿಕೊಳ್ಳುತ್ತೇನೆ. ಆದರೆ ನನ್ನ ಕ್ಷೇತ್ರದ ಜನರ ಸೇವೆ ಮಾಡುವಲ್ಲಿ ನನಗೆ ಇವ್ಯಾವವೂ ಅಡೆತಡೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ನಾನು ನಂಬಿಕೊಂಡು ಬಂದ ಸಿದ್ಧಾಂತ, ಸ್ವಚ್ಛ ಮತ್ತು ಭ್ರಷ್ಟಾಚಾರ ರಹಿತ ರಾಜಕೀಯ ಅನುಷ್ಠಾನಕ್ಕೆ ಬದ್ದವಿದ್ದೇನೆ. ಅಲ್ಲದೇ, ಭ್ರಷ್ಟಾಚಾರಿಗಳ ವಿರುದ್ಧ ಈ ಹಿಂದಿನಂತೆಯೇ ಧ್ವನಿ ಎತ್ತುತ್ತೇನೆ. ಏನೇ ಬರಲಿ ಎಲ್ಲರೂ ಒಂದಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡೋಣ ಎಂದು ಬೆಲ್ಲದ ಹೇಳಿಕೊಂಡಿದ್ದಾರೆ.
 

Follow Us:
Download App:
  • android
  • ios