ಈ ಹಿಂದೆ ಪದ್ಮಶ್ರೀ ಪ್ರಶಸ್ತಿಗೆ ದೊಡ್ಡ ಲಾಭಿ ನಡೆಯುತ್ತಿತ್ತು. ಈಗ ಜನರ ಭಾವನೆಯಿಂದ ಹೆಸರುವಾಸಿಯಾಗಿರುವವರಿಗೆ ಪ್ರಶಸ್ತಿ ಸಿಕ್ಕಿದೆ. ಎಲೆಮರೆಕಾಯಿಯಾಗಿ ಕೆಲಸ ಮಾಡುತ್ತಿರುವವರಿಗೆ ಪ್ರಶಸ್ತಿ ಹುಡುಕಿಕೊಂಡು ಬರ್ತಿವೆ: ಸಿ.ಟಿ.ರವಿ 

ಚಿಕ್ಕಮಗಳೂರು(ಜ.26): ಮೋದಿ ಬಂದ ಮೇಲೆ ಪದ್ಮಶ್ರೀ ಪ್ರಶಸ್ತಿ ಹಿರಿಮೆ-ಗರಿಮೆ ಹೆಚ್ಚಾಗಿದೆ. ಈಗ ಪದ್ಮಶ್ರೀ ಪ್ರಶಸ್ತಿ ಪೀಪಲ್ ಪ್ರಶಸ್ತಿಯಾಗಿದೆ. ಈ ಹಿಂದೆ ಪದ್ಮಶ್ರೀ ಪ್ರಶಸ್ತಿಗೆ ದೊಡ್ಡ ಲಾಭಿ ನಡೆಯುತ್ತಿತ್ತು. ಈಗ ಜನರ ಭಾವನೆಯಿಂದ ಹೆಸರುವಾಸಿಯಾಗಿರುವವರಿಗೆ ಪ್ರಶಸ್ತಿ ಸಿಕ್ಕಿದೆ. ಎಲೆಮರೆಕಾಯಿಯಾಗಿ ಕೆಲಸ ಮಾಡುತ್ತಿರುವವರಿಗೆ ಪ್ರಶಸ್ತಿ ಹುಡುಕಿಕೊಂಡು ಬರ್ತಿವೆ ಅಂತ ಶಾಸಕ ಸಿ.ಟಿ.ರವಿ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಇಂದು(ಗುರುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಎಂಟು ಗಣ್ಯರಿಗೆ ಪದ್ಮಶ್ರೀ ಲಭಿಸಿದೆ, ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಮುತ್ಸದ್ದಿ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದ ಎಸ್.ಎಂ.ಕೃಷ್ಣ ಗೆ ಪದ್ಮವಿಭೂಷಣ ಪ್ರಶಸ್ತಿಗೆ ಭಾಜಣರಾಗಿದ್ದಾರೆ ಅಂತ ಹೇಳಿದ್ದಾರೆ. 

Padma Awards 2023: ಎಸ್‌ಎಂ ಕೃಷ್ಣಗೆ ಪದ್ಮವಿಭೂಷಣ, ಎಸ್‌ಎಲ್‌ ಭೈರಪ್ಪ, ಸುಧಾಮೂರ್ತಿಗೆ ಪದ್ಮಭೂಷಣ ಗೌರವ!

ಅಹಂಕಾರದ ಅವಶೇಷವೂ ಇಲ್ಲದೆ, ಶ್ರೀಮಂತಿಕೆಯನ್ನ ಸೇವೆಗೆ ಉಪಯೋಗಿಸಿದವರು ಸುಧಾಮೂರ್ತಿಯವರು, ಸಾಹಿತ್ಯ ಕ್ಷೇತ್ರದಲ್ಲಿ ತನ್ನದೆ ಆದ ಚಾಪು‌ಮೂಡಿಸಿದವರು ಎಸ್.ಎಲ್.ಭೈರಪ್ಪನವರು ಅಂತ ತಿಳಿಸಿದ್ದಾರೆ.