ಕಾಫಿಯನ್ನೇ ಕುಡಿಯಲ್ಲ, ಇನ್ನು ಡ್ರಿಂಕ್ಸ್ ಹೇಗೆ ಮಾಡ್ತಾರೆ, ಸಿ.ಟಿ.ರವಿಗೆ ಪತ್ನಿ ಫುಲ್ ಮಾರ್ಕ್ಸ್
ಚಿಕ್ಕಮಗಳೂರು ಬಿಜೆಪಿ ಶಾಸಕ ಸಿ.ಟಿ.ರವಿ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಈ ಬಗ್ಗೆ ಅವರ ಪತ್ನಿ ಪ್ರತಿಕ್ರಿಯಿಸಿದ್ದು ಹೀಗೆ.
ಚಿಕ್ಕಮಗಳೂರು, (ಫೆ.19): ನನ್ನ ಪತಿ ಕಾಫಿಯನ್ನೇ ಕುಡಿಯಲ್ಲ, ಇನ್ನು ಡ್ರಿಂಕ್ಸ್ ಹೇಗೆ ಮಾಡ್ತಾರೆ ಎಂದು ಸಿಟಿ ರವಿ ಪತ್ನಿ ಪಲ್ಲವಿ ಪ್ರಶ್ನಿಸಿದ್ದಾರೆ.
ಪತಿ ಸಿ.ಟಿ.ರವಿ ಕಾರು ಅಪಘಾತ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಇಬ್ಬರು ಯುವಕರು ಜೀವ ಕಳೆದುಕೊಂಡಿದ್ದಾರೆ, ಅದು ನಿಜವಾಗಿಯೂ ಬೇಸರದ ವಿಷಯ. ಈ ಅಪಘಾತ ಆಕಸ್ಮಿಕ, ಈ ಅಪಘಾತದಿಂದ ನಮಗೆ ನೋವಾಗಿದೆ.
ಮೃತ ಕುಟುಂಬಸ್ಥರ ಮನೆಗೆ ಹೋಗಿ ಸಾಂತ್ವಾನ ಹೇಳುತ್ತೇವೆ. ನಮ್ಮ ಕೈಯಲ್ಲಿ ಏನಾಗುತ್ತೋ ಆ ರೀತಿಯ ಸಹಾಯ ಮಾಡ್ತೇವೆ ಎಂದು ಹೇಳಿದರು.
ಶಾಸಕ ಸಿ.ಟಿ. ರವಿ ಕಾರು ಅಪಘಾತ : ಇಬ್ಬರು ದುರ್ಮರಣ
ನನ್ನ ಪತಿ ಮದ್ಯ ಸೇವಿಸಿದ್ದಾರೆ ಅನ್ನೋದು ಶುದ್ಧ ಸುಳ್ಳು. ಮಾಧ್ಯಮದಲ್ಲಿ ಮದ್ಯ ಸೇವಿಸಿದ್ದಾರೆ ಅನ್ನೋದನ್ನ ನೋಡಿ ಬೇಸರವಾಗಿ, ಶಾಕ್ ಆಯ್ತು. ಅವರು ನೀರು ಕುಡಿಯೋದು ಬಿಟ್ರೆ, ಬೇರೆ ಏನನ್ನು ಕುಡಿದಿರೋದು ನನಗೆ ಗೊತ್ತಿಲ್ಲ ಎಂದು ಪತಿ ಪರ ಬ್ಯಾಟಿಂಗ್ ಮಾಡಿದ್ದಾರೆ.
ನನ್ನ ಪತಿ ಕಾರು ಡ್ರೈವ್ ಮಾಡೋದು ಬಿಟ್ಟು 15 ವರ್ಷ ಆಗಿದೆ. ಘಟನೆಯಲ್ಲಿ ಅವರಿಗೆ ಸ್ವಲ್ಪ ಎದೆಗೆ ಪೆಟ್ಟು ಬಿದ್ದಿದೆ ಎಂದರು.
ಸೋಮವಾರ ತಡರಾತ್ರಿ ತುಮಕೂರು-ಕುಣಿಗಲ್ ರಸ್ತೆಯಲ್ಲಿ ಸಿ.ಟಿ. ರವಿ ಅವರ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.