ಹಿಂದೂ ಧಾರ್ಮಿಕ ಆಚರಣೆಗಳಿಗೆ ಕಡಿವಾಣ ಹಾಕೋದು ಕಾಂಗ್ರೆಸ್ ಸರ್ಕಾರದ ಷಡ್ಯಂತರ: ವೇದವ್ಯಾಸ್‌ ಕಾಮತ್

ದೀಪಾವಳಿ ಸಂದರ್ಭದಲ್ಲಿ ಮಾತ್ರ ಪಟಾಕಿ ವಿಷಯದಲ್ಲಿ ಇಲ್ಲ ಸಲ್ಲದ ನಿಯಮಾವಳಿಗಳನ್ನು ಹೇರಿ ಗೊಂದಲಮಯ ವಾತಾವರಣ ಸೃಷ್ಟಿಸುವುದು, ಆ ಮೂಲಕ ಹಿಂದೂ ಧಾರ್ಮಿಕ ಆಚರಣೆಗಳಿಗೆ ಹಂತ ಹಂತವಾಗಿ ಕಡಿವಾಣ ಹಾಕುವುದು ಕಾಂಗ್ರೆಸ್ ಸರ್ಕಾರದ ಷಡ್ಯಂತರ. ಹಿಂದುಗಳ ಹಬ್ಬದ ಸಮಯದಲ್ಲಿಯೇ ಧಿಡೀರನೆ ಚಾಲನೆಗೆ ಬರುವ ನಿಯಮಗಳು, ಕಡಿವಾಣಗಳು ಇನ್ನಿತರ ಯಾವುದೇ ಧರ್ಮಗಳ ಹಬ್ಬದ ಸಂದರ್ಭದಲ್ಲಿ ಕಂಡು ಬರುವುದೇ ಇಲ್ಲ: ಮಂಗಳ‍ೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ 

BJP MLA Vedavyas Kamath Slams Congress Government grg

ಮಂಗಳೂರು(ನ.10): ಹಿಂದುಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿಯೇ ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿಪಡಿಸುವ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರು ಮಾಡಿದೆ ಎಂದು ಮಂಗಳ‍ೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೀಪಾವಳಿ ಸಂದರ್ಭದಲ್ಲಿ ಮಾತ್ರ ಪಟಾಕಿ ವಿಷಯದಲ್ಲಿ ಇಲ್ಲ ಸಲ್ಲದ ನಿಯಮಾವಳಿಗಳನ್ನು ಹೇರಿ ಗೊಂದಲಮಯ ವಾತಾವರಣ ಸೃಷ್ಟಿಸುವುದು, ಆ ಮೂಲಕ ಹಿಂದೂ ಧಾರ್ಮಿಕ ಆಚರಣೆಗಳಿಗೆ ಹಂತ ಹಂತವಾಗಿ ಕಡಿವಾಣ ಹಾಕುವುದು ಕಾಂಗ್ರೆಸ್ ಸರ್ಕಾರದ ಷಡ್ಯಂತರ. ಹಿಂದುಗಳ ಹಬ್ಬದ ಸಮಯದಲ್ಲಿಯೇ ಧಿಡೀರನೆ ಚಾಲನೆಗೆ ಬರುವ ನಿಯಮಗಳು, ಕಡಿವಾಣಗಳು ಇನ್ನಿತರ ಯಾವುದೇ ಧರ್ಮಗಳ ಹಬ್ಬದ ಸಂದರ್ಭದಲ್ಲಿ ಕಂಡು ಬರುವುದೇ ಇಲ್ಲ ಎಂದು ಶಾಸಕರು ಹೇಳಿದರು.

ಧರ್ಮಸ್ಥಳ ಸೌಜನ್ಯಾ ಪ್ರಕರಣ ಆದೇಶದ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಸಿಬಿಐ: ಸಂತೋಷ್‌ರಾವ್‌ನೇ ಅತ್ಯಾಚಾರಿಯಂತೆ!

ಜಿಲ್ಲೆಯಲ್ಲಿ ಪಟಾಕಿ ಮಳಿಗೆ ತೆರೆಯಲು ಈವರೆಗೂ ಇಲ್ಲದಿದ್ದ ಹತ್ತು ಹಲವು ಹೊಸ ನಿಯಮಗಳನ್ನು ಹೇರಲಾಗಿದೆ. ಅದರಲ್ಲೂ ಈ ಬಾರಿ ಕೇವಲ ಮೂರ್ನಾಲ್ಕು ಮೈದಾನದಲ್ಲಿ ಮಾತ್ರ ಪಟಾಕಿ ಅಂಗಡಿಗಳನ್ನು ಹಾಕಲು ಅವಕಾಶ ನೀಡಲಾಗಿದೆ. ಬೈಕಂಪಾಡಿ ಎಪಿಎಂಸಿ, ಕೇಂದ್ರ ಮೈದಾನ, ಪಚ್ಚನಾಡಿ, ಬೋಂದೇಲ್ ಹೀಗೆ ಕೆಲವು ಮೈದಾನಗಳಲ್ಲಿ ಮಾತ್ರ ಪಟಾಕಿ ಅಂಗಡಿಗಳಿಗೆ ಸ್ಥಳ ಗುರುತಿಸಲಾಗಿದೆ. ಆದರೆ ಎಷ್ಟೋ ಕಡೆಗಳಲ್ಲಿ ಮೈದಾನಗಳೇ ಇಲ್ಲ. ಈಗಾಗಲೇ ಜಿಲ್ಲಾಡಳಿತ ಸೂಚಿಸಿರುವ ಕೇವಲ ಮೂರ್ನಾಲ್ಕು ಮೈದಾನಗಳಲ್ಲದೆ, ಹೆಚ್ಚುವರಿ ಮೈದಾನಗಳಲ್ಲಿ ತಾತ್ಕಾಲಿಕ ಪಟಾಕಿ ಮಳಿಗೆ ಹಾಕಲು ಅವಕಾಶ ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಪಾಲಿಕೆ ಆಯುಕ್ತರು ಹಾಗೂ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳಲ್ಲಿ ಮನವಿ ಸಲ್ಲಿಸಲಾಗಿದ್ದು ಅದಕ್ಕೆ ಅವಕಾಶ ಕೊಡುವಂತೆ ಶಾಸಕರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Latest Videos
Follow Us:
Download App:
  • android
  • ios