ಶಿರಸಿ (ಮಾ.07): ಕೇಂದ್ರದ ಮಾಜಿ ಸಚಿವ, ಸಂಸದ ಅನಂತ ಕುಮಾರ್‌ ಹೆಗಡೆ ಕಾಲಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ. 

ಕೆಲ ಕಾಲ ಅವರು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಸಾರ್ವಜನಿಕರ ಭೇಟಿಗೆ ಲಭ್ಯವಾಗುವುದಿಲ್ಲ ಎಂದು ಅವರ ಆಪ್ತ ಕಾರ್ಯದರ್ಶಿ ಸುರೇಶ್‌ ಶೆಟ್ಟಿತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ಅನಂತ ಕುಮಾರ್‌ ಹೆಗಡೆ ಅವರಿಗೆ ಕಳೆದ ಹಲವು ವರ್ಷಗಳಿಂದ ತೀವ್ರ ತರವಾದ ಬೆನ್ನು ನೋವು ಮತ್ತು ಕಾಲು ನೋವು ಕಾಡುತ್ತಿತ್ತು. 

ಅನಂತಕುಮಾರ್ ಹೆಗಡೆ ಪುಸ್ತಕ ಓದಲಿ: ಸಂಸದರಿಗೆ ನೂತನ ಮೇಯರ್ ಟಾಂಗ್ ...

ಇತ್ತೀಚೆಗೆ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಿಸಿದ ವೈದ್ಯರು ತಕ್ಷಣವೇ ಕಾಲಿಗೆ ಸೂಕ್ತ ಶಸ್ತ್ರ ಚಿಕಿತ್ಸೆ ನಡೆಸುವಂತೆ ಸೂಚಿಸಿದ್ದರು. ಕೆಲ ದಿನಗಳ ಹಿಂದೆ ಮಂಗಳೂರಿನಲ್ಲಿ ಈ ಶಸ್ತ್ರ ಚಕಿತ್ಸೆ ನಡೆಸಲಾಗಿದ್ದು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.