ಒಳ ಮೀಸಲಾತಿ ವಿಚಾರದಲ್ಲಿ ವಿನಾಕಾರಣ ಆಯೋಗ ರಚನೆ: ಸಿದ್ದು ಸರ್ಕಾರದ ವಿರುದ್ಧ ಹರಿಹಾಯ್ದ ಕೋಟ ಶ್ರೀನಿವಾಸ ಪೂಜಾರಿ
ಸಮುದಾಯವನ್ನು ತಪ್ಪು ದಾರಿಗೆ ಎಳೆಯುವ ಪ್ರವೃತ್ತಿ ಕೈಬಿಡಿ. ಸಿದ್ದರಾಮಯ್ಯನವರು ಗಟ್ಟಿ ನಿರ್ಧಾರ ಕೈಗೊಳ್ಳಬೇಕು. ಹಿಂದಿನ ಸರಕಾರ ಕೈಗೊಂಡಿರುವ ನಿರ್ಧಾರವನ್ನು ಜಾರಿ ಮಾಡುತ್ತೇವೆ ಎನ್ನಬೇಕು. ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಅಧಿಕಾರ ನೀಡಿದೆ. ತಕ್ಷಣ ನಿರ್ಧಾರ ತೆಗೆದುಕೊಂಡು ಒಳ ಮೀಸಲಾತಿ ಜಾರಿಗೆ ತನ್ನಿ ಎಂದು ಆಗ್ರಹಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ(ಅ.30): ಒಳ ಮೀಸಲಾತಿ ವಿಚಾರದಲ್ಲಿ ವಿನಾಕಾರಣ ಆಯೋಗ ರಚನೆ ಮಾಡಲಾಗಿದೆ. ಇದು ಸಿದ್ದರಾಮಯ್ಯ ಸರ್ಕಾರದ ಅನಗತ್ಯ ನಿರ್ಧಾರವಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇಂದು(ಬುಧವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಅವರು, ನಮ್ಮ ಸರ್ಕಾರ ಇದ್ದಾಗ ಒಳ ಮೀಸಲಾತಿ ಜಾರಿಗೆ ತರಲು ನಿರ್ಧಾರ ಕೈಗೊಂಡಿದ್ದೆವು. ಆಗ ರಾಜ್ಯ ಸರ್ಕಾರಕ್ಕೆ ಅಧಿಕೃತವಾದ ಅಧಿಕಾರ ಇರಲಿಲ್ಲ. ಕೇಂದ್ರ ಸರಕಾರದಿಂದ ಅನುಮತಿ ಪಡೆಯಬೇಕೆಂಬ ನಿಯಮ ಇತ್ತು. ಈಗ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಒಳ ಮೀಸಲಾತಿ ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಅವಕಾಶ ಇದೆ. ಈಗ ಮತ್ತೊಂದು ಆಯೋಗ ರಚನೆ ಮಾಡುವ ಅವಶ್ಯಕತೆ ಏನಿದೆ?. ಇದು ಕಾಲಹರಣ ಮಾಡಲು ಸರ್ಕಾರ ಕೈಗೊಂಡ ನಿರ್ಧಾರ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಹೈಕೋರ್ಟ್ ತೀರ್ಪೋ, ಅಜೆಂಡಾವೋ: ಸರ್ಕಾರಕ್ಕೆ ಕೋಟ ಪ್ರಶ್ನೆ
ಸಮುದಾಯವನ್ನು ತಪ್ಪು ದಾರಿಗೆ ಎಳೆಯುವ ಪ್ರವೃತ್ತಿ ಕೈಬಿಡಿ. ಸಿದ್ದರಾಮಯ್ಯನವರು ಗಟ್ಟಿ ನಿರ್ಧಾರ ಕೈಗೊಳ್ಳಬೇಕು. ಹಿಂದಿನ ಸರಕಾರ ಕೈಗೊಂಡಿರುವ ನಿರ್ಧಾರವನ್ನು ಜಾರಿ ಮಾಡುತ್ತೇವೆ ಎನ್ನಬೇಕು. ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಅಧಿಕಾರ ನೀಡಿದೆ. ತಕ್ಷಣ ನಿರ್ಧಾರ ತೆಗೆದುಕೊಂಡು ಒಳ ಮೀಸಲಾತಿ ಜಾರಿಗೆ ತನ್ನಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.