ಮೈಸೂರು ವಿಮಾನ ನಿಲ್ದಾಣ ಅಭಿವೃದ್ಧಿ ಹಾಗೂ ವಿಸ್ತರಣೆಗಾಗಿ ಅಗತ್ಯವಿರುವ ಭೂಮಿಯನ್ನು ಸ್ವಾಧೀನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅನುದಾನ ನೀಡುವಂತೆ ಸಂಸದ ಪ್ರತಾಪ ಸಿಂಹ  ಮನವಿ

ಮೈಸೂರು (ಸೆ.04): ಮೈಸೂರು ವಿಮಾನ ನಿಲ್ದಾಣ ಅಭಿವೃದ್ಧಿ ಹಾಗೂ ವಿಸ್ತರಣೆಗಾಗಿ ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅನುದಾನ ನೀಡುವಂತೆ ಸಂಸದ ಪ್ರತಾಪ ಸಿಂಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಅಂತೆಯೇ ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ರಾಜೀವ್‌ ಗಾಂಧಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಸಂರಕ್ಷಿತ ಪ್ರದೇಶವನ್ನು ಫೀಲ್ಡ್ ಮಾರ್ಷಲ್‌ ಕೆ.ಎಂ.ಕಾರಿಯಪ್ಪ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಸಂರಕ್ಷಿತ ಪ್ರದೇಶ ಎಂದು ಮರುಹೆಸರಿಸುವಂತೆ ಕೋರಿದರು. 

'ನಾಗರಹೊಳೆ ಉದ್ಯಾನಕ್ಕೆ ರಾಜೀವ್ ಗಾಂಧಿ ಬದಲು ಮಾರ್ಷಲ್ ಕಾರಿಯಪ್ಪ ಹೆಸರಿಡಿ'

ಈ ಬಗ್ಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮೈಸೂರು ಕೊಡಗು ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ.