ಮೈಸೂರು (ಫೆ.24): ಸಿದ್ದರಾಮಯ್ಯ ಅವರು ಮೈಸೂರು ಭಾಗ ಹುಲಿ ಅಂತ ಅಬ್ಬರಿಸುತ್ತಿದ್ದರು. ಆ ಹುಲಿಯನ್ನು ಕುಮಾರಸ್ವಾಮಿ ಅವರು ಬೋನಿಗೆ ಹಾಕಿದ್ದಾರೆ ಎಂದು ಮೈಸೂರು - ಕೊಡಗು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದರು. 

"

ಮೈಸೂರಿನಲ್ಲಿಂದು ಮಾತನಾಡಿದ ಸಂಸದ ಪ್ರತಾಪ್ ಸಿಂಗ್ ಇಂದು ನಡೆದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಸಂಬಂಧ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಶಾಂತಕುಮಾರಿ  ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಅವರದ್ದೇ ಪಕ್ಷದ ಅಭ್ಯರ್ಥಿ ಪರವಾಗಿ ಕಾಂಗ್ರೆಸ್ ಸದಸ್ಯ ವೋಟು ಹಾಕಿಲ್ಲ. ಕೈ ಎತ್ತದಂತೆ ಕಟ್ಟಿಹಾಕಿದವರು ಯಾರು ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಮಾಡಿದರು ?

ಮುಂದುವರಿದ JDS-ಕೈ ಮೈತ್ರಿ : ಮೈಸೂರು ಮೇಯರ್ ಆಗಿ ರುಕ್ಮಿಣಿ ಮಾದೇಗೌಡ .

ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಗೆ ನಾವು ಪ್ರಮಾಣಿಕ ಪ್ರಯತ್ನ ಮಾಡಿದ್ದೆವು‌, ಸೋತಿದ್ದೇವೆ.  ಆದರೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿ ಏನು ಎಂಬುದು ಬಯಲಾಗಿದೆ ಎಂದು ಪ್ರತಾಪ್ ಸಿಂಹ ಟಾಂಗ್ ನೀಡಿದರು. 

ಇಂದು ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ನಡೆದಿದ್ದು, ಈ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ ಮೇಯರ್ ಆಗಿ ಆಯ್ಕೆಯಾದರು. ಜೆಡಿಎಸ್‌ಗೆ ಮೇಯರ್ ಸ್ಥಾನ ಲಭಿಸಿದ್ದು, ಕಾಂಗ್ರೆಸ್‌ಗೆ ಉಪಮೇಯರ್‌ ಸ್ಥಾನ ಹಂಚಿಕೆಯಾಯಿತು.