ವಿಜಯಪುರ(ಏ.18): ಕೊರೋನಾ ನಿಯಂತ್ರಿಸಲು ಲಾಕ್‌ಡೌನ್‌ಗಿಂತ ಪರ್ಯಾಯ ಮಾರ್ಗ ಕಂಡುಕೊಳ್ಳುವುದೇ ಹೆಚ್ಚು ಉತ್ತಮ. ಲಾಕ್‌ಡೌನ್‌ನಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.

ಶನಿವಾರ ವಿಜಯಪುರ ನಗರದ ಹೊರ ವಲಯದ ಬುರಣಾಪುರ ಬಳಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಲಾಕ್‌ಡೌನ್‌ನಿಂದ ಬಡವರಿಗೆ ತುಂಬಾ ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ. 

ರಾಜಧಾನಿಯಲ್ಲಿ ಕೊರೋನಾರ್ಭಟ: ಮತ್ತೆ ಬೆಂಗ್ಳೂರು ತೊರೆಯುತ್ತಿರುವ ಜನ..!

ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಮಾಡಲಾಗಿದೆ. ಅಲ್ಲಿ ಯಾವುದೇ ಪ್ರಯೋಜನವಾಗಿಲ್ಲ. ಲಾಕ್‌ಡೌನ್‌ ಬದಲಿಗೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಸರ್ಕಾರ ಚಿಂತನೆ ನಡೆಸುವುದು ಹೆಚ್ಚು ಸೂಕ್ತವಾಗುತ್ತದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.