ಹುಬ್ಬಳ್ಳಿ(ನ.26): ಬಿಜೆಪಿಯವರ ಮಾತಿನಲ್ಲಿ ಆರ್ಭಟವಿದೆ ಹೊರತು ಅಭಿವೃದ್ಧಿ ಕೆಲಸದಲ್ಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಅನರ್ಹ ಶಾಸಕರು ಸೇರಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ, ಪಕ್ಷಾಂತರಿಗಳ ವಿರುದ್ಧ ಜನರು ತಿರುಗಿ ಬಿದ್ದಿದ್ದಾರೆ. ಅನೈತಿಕ ರಾಜಕಾರಣಕ್ಕೆ ಮತದಾರರು ಬೇಸತ್ತಿದ್ದಾರೆ.
ಬಿಜೆಪಿಯವರ ಮಾತಿನಲ್ಲಿ ಆರ್ಭಟವಿದೆ ಹೊರತು ಅಭಿವೃದ್ಧಿ ಕೆಲಸದಲ್ಲಿಲ್ಲ. ಬಿಜೆಪಿಯವರ ಪ್ರತಿಯೊಂದು ಹೆಜ್ಜೆ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂತಿದೆ. ಅವರಿಗೆ ಸಂವಿಧಾನ, ಕಾನೂನು, ನೈತಿಕತೆಯಲ್ಲಿ ನಂಬಿಕೆಯಿಲ್ಲ. ಯಾವುದೇ ಮಾರ್ಗವಾಗಲಿ ಅಧಿಕಾರ ಹಿಡಿಯಬೇಕು ಎಂದು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರಕ್ಕೆ ನಾವೇನು ಮಾಡಬೇಕೆಂದು ಧರ್ಮ ಕಲಿಸುತ್ತದೆ: ಸುಮಿತ್ರಾ ಮಹಾಜನ್

ಹದಿನೈದು ಕ್ಷೇತ್ರಗಳಲ್ಲಿ ಜನರು ಪಾಠ ಕಲಿಸುತ್ತಾರೆ. ಬಿಜೆಪಿ ಸರ್ಕಾರ ರಚನೆಯಾಗಿದ್ದೇ ವಾಮ ಮಾರ್ಗದಿಂದ. ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಹೊಸದೊಂದು ತಿರುವು ಬರಲಿದೆ. ದೇಶವನ್ನು ಲೂಟಿ ಹೊಡೆದು ಬಿಜೆಪಿಯವ್ರು ಮಾತ್ರ ಶ್ರೀಮಂತರಾಗಿದ್ದಾರೆ. ಇಡೀ ದೇಶ ಆರ್ಥಿಕ ಸಂಕಷ್ಟದಲ್ಲಿದೆ ಎಂದಿದ್ದಾರೆ.

ಪ್ರತಿ ಶಾಸಕನಿಗೆ 100 ಕೋಟಿ

ಮಹಾರಾಷ್ಟ್ರದಲ್ಲಿ ಪ್ರತಿಯೊಬ್ಬ ಶಾಸಕರಿಗೆ ನೂರು ಕೋಟಿ ರೂಪಾಯಿ ಆಫರ್ ಕೊಟ್ಟಿದ್ದಾರೆ. ರಾಜ್ಯದಲ್ಲಿಯೂ ತಲಾ ಇಪ್ಪತ್ತೈದು ಕೋಟಿ ಕೊಟ್ಟು ಶಾಸಕರನ್ನು ಖರೀದಿಸಿದ್ದಾರೆ. ರಾಜ್ಯದ ಶಾಸಕರು ಈಗ ನಮಗೂ ನೂರು ಕೋಟಿ ಕೊಡಿ ಎಂದು ಬಿಜೆಪಿ ನಾಯಕರನ್ನು ಕೇಳುತ್ತಿದ್ದಾರಂತೆ. ಇನ್ನೂ ಸ್ವಲ್ಪ ಶಾಸಕರನ್ನು ಹಿಡಿದುಕೊಂಡು ಬರುತ್ತೇವೆಂದು ಲಿಂಬಾವಳಿ ಹೇಳುತ್ತಿದ್ದಾರೆ. ಹೀಗಾದ್ರೆ ಚುನಾವಣೆಗೆ ಯಾಕೆ ಹೋಗಬೇಕು, ಜನರು ಮತ ಯಾಕೆ ಹಾಕಬೇಕು? ಎಂದು ಪ್ರಶ್ನಿಸಿದ್ದಾರೆ.

ಗದಗದಲ್ಲಿ ಸರ್ವ ಕಾಲಿಕ ದಾಖಲೆ ಕಂಡ ಈರುಳ್ಳಿ ಬೆಲೆ

ಬಿಜೆಪಿಯವರದ್ದು ಕೇವಲ ನಾಟಕ, ಕಪಟತನ, ಸುಳ್ಳು ಹೇಳುವ ರಾಜಕೀಯ. ಭ್ರಷ್ಟರೆಲ್ಲ ಬಿಜೆಪಿ ಸೇರಿದ್ರೆ ಸಾಚಾಗಳಾಗುತ್ತಾರೆ ಅನ್ನೋದು ಬಿಜೆಪಿ ಸ್ಕೀಮ್. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ನಿರ್ಧಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು. ಪಕ್ಷದ ಹಿತದೃಷ್ಟಿಯಿಂದ ತೆಗೆದುಕೊಳ್ಳುವ ಎಲ್ಲಾ ತೀರ್ಮಾನಕ್ಕೂ ನಾವು ಬದ್ಧರಾಗಿರುತ್ತೇವೆ. ಸಧ್ಯಕ್ಕೆ ಯಾವುದೇ ಬದಲಾವಣೆ ಇಲ್ಲ, ಉಪ ಚುನಾವಣೆಯ ಗೆಲುವೊಂದೇ ನಮ್ಮ ಗುರಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈರುಳ್ಳಿಯಿಂದ ಕಮರಿದ ಬದುಕು ಬೀನ್ಸ್‌ನಿಂದ ಅರಳಿತು!