ಚಿತ್ರದುರ್ಗ [ಡಿ.16]: ಚಿತ್ರದುರ್ಗದ ಮುರುಘಾಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. 

ಚಿತ್ರದುರ್ಗದಲ್ಲಿ ಮುರುಘಾಶರಣದ ಭೇಟಿ ಬಳಿಕ ಮಾತನಾಡಿದ ನಳಿನ್ ಕುಮಾರ್, ರಾಜ್ಯದಲ್ಲಿ ಸಂಪುಟ ವಿಸ್ತರಣೆ ಸ್ಥಾನ ಮಾನ ನೀಡುವುದು ಮುಖ್ಯಮಂತ್ರಿ ಅವರ ಪರಮಾಧಿಕಾರ ಎಂದರು. 

ಇನ್ನು ಸಚಿವ ಸಂಪುಟ ವಿಸ್ತರಣೆಯಲ್ಲಿ ನನ್ನ ಯಾವುದೇ ಹಸ್ತಕ್ಷೇಪ ಇಲ್ಲ. ಈ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಾಗುತ್ತದೆ. ಶಾಸಕರಾದವರಿಗೆ ಸಚಿವರಾಗುವ ಆಸೆ ಸಹಜವಾಗಿಯೇ ಇರುತ್ತದೆ. ಆದ್ದರಿಂದ ಎಲ್ಲಾ ಜಿಲ್ಲೆಗಳಿಗೂ ನಾವು ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು. 

ಸಂಘಟನೆ ಬಲವರ್ಧನೆಗೆ ಹೆಚ್ಚು ಒತ್ತು ನೀಡಬೇಕಿದೆ: ಕಟೀಲ್‌...

ಇನ್ನು ಪೌರತ್ವ ತಿದ್ದುಪಡಿ ಕಾಯ್ದೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕಟೀಲ್, ಈಗಾಗಲೇ ಪಕ್ಷ ದಿವಾಳಿಯಾಗಿದೆ. ಅಂದು ಬ್ರಿಟಿಷರು ನಮ್ಮನ್ನು ಒಡೆದು ಆಳ್ವಿಕೆ ಮಾಡುತ್ತಿದ್ದರು. ಅವರು ದೇಶ ಬಿಟ್ಟು ಹೋದ ಮೇಲೆ ಇದನ್ನು ಕಾಂಗ್ರೆಸ್ ಪಾಲಿಸಿದೆ ಎಂದರು. 

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ. ಅಲ್ಪಸಂಖ್ಯಾತರು ಗಟ್ಟಿಯಾಗುತ್ತಾರೆ. ಬಿಜೆಪಿ ಮೇಲೆ ಮುಸ್ಲಿಮರಿಗೆ ಈಗ ನಂಬಿಕೆ ಹೆಚ್ಚಿದೆ. ಈಗ ಕಾಂಗ್ರೆಸ್ ಪಕ್ಷಕ್ಕೆ ಅಲ್ಪಸಂಖ್ಯಾತರಾಗುವ ಭಯ ಬಂದಿದೆ ಎಂದು ಚಿತ್ರದುರ್ಗದಲ್ಲಿ ನಳಿನ್ ಕುಮಾರ್ ಕಟೀಲ್ ಹೇಳಿದರು.