ಸಚಿವ ನಾಗೇಶ್‌ ನಿವಾಸ ಮೇಲೆ ಕಾಂಗ್ರೆಸ್‌ ದಾಳಿ: ಬಿಜೆಪಿ ಕಾರ್ಯಕರ್ತರೂ ಸುಮ್ಮನಿರಲ್ಲ: ಕಟೀಲ್‌

*  ನಾಗೇಶ್‌ ನಿವಾಸದ ಮೇಲೆ ಕಾಂಗ್ರೆಸ್‌- ಎನ್‌ಎಸ್‌ಯುಐ ಕಾರ್ಯಕರ್ತರ ದಾಂಧಲೆ 
*  ಆಂದೋಲನ ಮಾಡುವುದು ಬಿಟ್ಟು ಗೂಂಡಾ ವರ್ತನೆ ಮಾಡಿರುವುದು ಖಂಡನೀಯ
*  ಸಮಗ್ರ ತನಿಖೆಗೆ ಸೂಚನೆ 
 

BJP State President Nalin Kumar Kateel React Congress Activist Attack on BC Nagesh House grg

ಮಂಗಳೂರು(ಜೂ.02): ರಾಜ್ಯದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ನಿವಾಸದ ಮೇಲೆ ಕಾಂಗ್ರೆಸ್‌ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಬುಧವಾರ ದಾಳಿ ನಡೆಸಿ ದಾಂಧಲೆ ನಡೆಸಿದ್ದಾರೆ. ಇದು ಕಾಂಗ್ರೆಸ್‌ನ ಗೂಂಡಾ ಪ್ರವೃತ್ತಿಯನ್ನು ತೋರಿಸುತ್ತದೆ. ಇದು ಹೀಗೆಯೇ ಮುಂದುವರಿದರೆ ಮುಂದೆ ಬಿಜೆಪಿ ಕಾರ್ಯಕರ್ತರು ಸುಮ್ಮನೆ ಕೂರುವುದಿಲ್ಲ ಎಂದು ದ.ಕ. ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಮಂಗಳೂರಿನಲ್ಲಿ ಬುಧವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಸರ್ಕಾರ ಮಾಡಿದ ಕೆಲಸವನ್ನು ವಿರೋಧಿಸುವ ಮತ್ತು ಆಂದೋಲನ ಮಾಡುವ ಅಧಿಕಾರ, ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ ಆಂದೋಲನವನ್ನು ಮಾಡುವುದು ಬಿಟ್ಟು ಗೂಂಡಾ ವರ್ತನೆ ಮಾಡಿರುವುದು ಖಂಡನೀಯ. ಇದು ಆ ಪಕ್ಷದ ಸಂಸ್ಕೃತಿಯನ್ನು ತೋರಿಸುತ್ತದೆ. ಕಾಂಗ್ರೆಸ್‌ನ ಈ ರೀತಿಯ ಗೂಂಡಾ ಪ್ರವೃತ್ತಿಯನ್ನು ನೋಡಿಯೇ ಜನ ಕೇಂದ್ರ ಹಾಗೂ ರಾಜ್ಯದಲ್ಲಿ ಪಕ್ಷವನ್ನು ತಿರಸ್ಕಾರ ಮಾಡಿದ್ದಾರೆ. ಇದೀಗ ಸಚಿವರ ನಿವಾಸದ ಮೇಲೆ ದಾಳಿ ಮಾಡುವುದರ ಮೂಲಕ ಮತ್ತೊಮ್ಮೆ ತಾನು ಗೂಂಡಾ ಪಕ್ಷ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ ಎಂದು ಹೇಳಿದರು.

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ: ಸಚಿವ ನಾಗೇಶ್‌ ಮನೆಗೆ ಮುತ್ತಿಗೆ

ಈ ದಾಳಿ ಒಂದು ವ್ಯವಸ್ಥಿತ ಷಡ್ಯಂತ್ರವಾಗಿದೆ. ಬೆಂಗಳೂರು ಅಲ್ಲದೆ ರಾಜ್ಯದ ಇತರ ಭಾಗಗಳಿಂದಲೂ ದಾಳಿ ನಡೆಸಲು ಕಾರ್ಯಕರ್ತರು ಬಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಕಾಂಗ್ರೆಸ್‌ ಈ ರೀತಿಯ ಕೃತ್ಯಕ್ಕೆ ಇಳಿದಿದೆ. ಜನ ನಿಮ್ಮ ವರ್ತನೆಗೆ ತಕ್ಕ ಉತ್ತರ ನೀಡಲಿದ್ದಾರೆ. ಮುಂದೆ ಈ ತೀತಿಯ ಬೆಳವಣಿಗೆ ಮುಂದುವರಿದರೆ ನಮ್ಮ ಕಾರ್ಯಕರ್ತರು ಸುಮ್ಮನೆ ಕೂರುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಸಮಗ್ರ ತನಿಖೆಗೆ ಸೂಚನೆ: 

ಸಚಿವರ ನಿವಾಸದ ಮೇಲೆ ನಡೆದ ದಾಳಿ ಬಗ್ಗೆ ಸರ್ಕಾರ ಸಮಗ್ರ ತನಿಖೆ ನಡೆಸಿ ಈ ಕೃತ್ಯದ ಹಿಂದಿರುವ ವ್ಯಕ್ತಿಗಳನ್ನು ಬಂಧಿಸಬೇಕು. ಈಗಾಗಲೇ ದಾಳಿ ನಡೆಸಿದ 15 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಗೃಹ ಸಚಿವರನ್ನು ಅಭಿನಂದಿಸುತ್ತೇನೆ. ಎಲ್ಲ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ನಳಿನ್‌ ಕುಮಾರ್‌ ಮನವಿ ಮಾಡಿದರು.
 

Latest Videos
Follow Us:
Download App:
  • android
  • ios