Asianet Suvarna News Asianet Suvarna News

'ಯಡಿಯೂರಪ್ಪ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮದಿಂದ ಕೊರೋನಾ ನಿಯಂತ್ರಣ'

ಕೊರೋನಾ ವಾರಿಯರ್ಸ್‌ಗಳಿಗೆ ವೇತನ ಪರಿಷ್ಕರಿಸಲು ಚಿಂತನೆ ನಡೆಸಿದ ಸಿಎಂ ಯಡಿಯೂರಪ್ಪ| ಸಿರುಗುಪ್ಪ ತಾಲೂಕಿನಾದ್ಯಂತ 265 ಆಶಾ ಕಾರ್ಯಕರ್ತೆಯರು ಸೇರಿದಂತೆ ಪೌರಕಾರ್ಮಿಕರಿಗೆ, ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಪ್ರೋತ್ಸಾಹ ಧನದೊಂದಿಗೆ ಸನ್ಮಾನ| ಕೊರೋನಾ ವಾರಿಯರ್ಸ್‌ಗೆ ಸನ್ಮಾನ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್‌| 

BJP State President Nalin Kumar Kateel Talks Over Coronavirus
Author
Bengaluru, First Published Aug 15, 2020, 11:33 AM IST

ಸಿರುಗುಪ್ಪ(ಆ.15): ಮುಖ್ಯಮಂತ್ರಿಗಳು ರಾಜ್ಯದಲ್ಲಿ ಲಾಕ್‌ಡೌನ್‌ ವಿಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದ ಕೊರೋನಾ ನಿಯಂತ್ರಣದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ತಿಳಿಸಿದ್ದಾರೆ. 

ನಗರದ ಅಭಯಾಂಜನೇಯ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಗುರುವಾರ ಕೊರೋನಾ ವಾರಿಯರ್ಸ್‌ಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕೊರೋನಾ ವಾರಿಯ​ರ್‍ಸ್ಗಳಾದ ಆಶಾ, ಆರೋಗ್ಯ ಮತ್ತು ಪೌರಕಾರ್ಮಿಕರನ್ನು ಸನ್ಮಾನಿಸಿ ಮಾತನಾಡಿದರು.

ಪ್ರಪಂಚದಾದ್ಯಂತ ಕೊರೋನಾ ವೈರಸ್‌ ಹರಡುವ ಪ್ರಾರಂಭದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್‌ಡೌನ್‌ ಘೋಷಿಸುವ ಮೂಲಕ ದೇಶದಲ್ಲಿ ಕೊರೋನಾ ಹೆಚ್ಚಿನ ಪ್ರಮಾಣದಲ್ಲಿ ವ್ಯಾಪಿಸದಂತೆ ತಡೆಯಲು ಸಾಧ್ಯವಾಯಿತು. ಪ್ರಧಾನಿಯವರು ಕೊರೋನಾ ವಾರಿಯ​ರ್ಸ್‌ಗಳ ಸೇವೆಯನ್ನು ಗುರುತಿಸಿ ದೇಶದ ಜನರು ಗೌರವಿಸುವಂತೆ ಮಾಡಿದ್ದಾರೆ ಎಂದರು.

'ಬೆಂಗಳೂರು ಹಿಂಸಾಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಾರಣಿಕರ್ತ'

ಶಾಸಕ ಎಂ.ಎಸ್‌. ಸೋಮಲಿಂಗಪ್ಪ ಮಾತನಾಡಿ, ರಾಜ್ಯದಲ್ಲಿ ಕೊರೋನಾ ವೈರಸ್‌ ಹರಡುವುದನ್ನು ತಡೆಯುವಲ್ಲಿ ಕೊರೋನಾ ವಾರಿಯ​ರ್ಸ್‌ಗಳ ಕಾರ್ಯ ಶ್ಲಾಘನೀಯವಾಗಿದ್ದು, ಅವರು ತಮ್ಮ ಜೀವದ ಹಂಗನ್ನು ತೊರೆದು ವೈರಾ​ಣು ಹರಡುವುದನ್ನು ತಡೆಯಲು ಶ್ರಮವಹಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕೊರೋನಾ ವಾರಿಯರ್ಸ್‌ಗಳಿಗೆ ವೇತನ ಪರಿಷ್ಕರಿಸಲು ಚಿಂತನೆ ನಡೆಸಿದ್ದಾರೆ. ತಾಲೂಕಿನಾದ್ಯಂತ 265 ಆಶಾ ಕಾರ್ಯಕರ್ತೆಯರು ಸೇರಿದಂತೆ ಪೌರಕಾರ್ಮಿಕರಿಗೆ, ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಪ್ರೋತ್ಸಾಹ ಧನದೊಂದಿಗೆ ಸನ್ಮಾನಿಸಲಾಗುವುದು ಎಂದರು. ಸಂಸದ ವೈ. ದೇವೇಂದ್ರಪ್ಪ, ಕರಡಿ ಸಂಗಣ್ಣ, ಶಾಸಕ ಮಾಲೀಕಯ್ಯ ಗುತ್ತೇದಾರ, ತಾಲೂಕು ಬಿಜೆಪಿ ಅಧ್ಯಕ್ಷ ಆರ್‌.ಸಿ. ಪಂಪನಗೌಡ, ಎಂ.ಎಸ್‌. ಸಿದ್ದಪ್ಪ ಸೇರಿದಂತೆ ಪಕ್ಷದ ಮುಖಂಡರು ಇದ್ದರು.
 

Follow Us:
Download App:
  • android
  • ios