ಹಾವೇರಿ[ಫೆ.29]: ಎಲ್ಲ ಹಿರಿಯರು, ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಗೌರವ ಕೊಡಬೇಕು. ಅವರಿಗೆ ಗೌರವ ಕೊಡುವುದು ನಮ್ಮ ಸಂಸ್ಕಾರ. ಇದು ಪಕ್ಷದ ನಿಯಮವೂ ಹೌದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಕುರಿತು ಶಾಸಕ ಬಸನಗೌಡ ಪಾಟೀಲ ಯತ್ನಾಳ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು. ಯಾವುದೇ ಹೇಳಿಕೆ ನೀಡಿದರೂ ಅದು ಅವರ ವೈಯಕ್ತಿಕ ವಿಚಾರವಾಗಲಿದೆ. ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಪಕ್ಷ ಈಗಾಗಲೇ ಇದನ್ನು ಸ್ಪಷ್ಟಪಡಿಸಿದೆ ಎನ್ನುವ ಮೂಲಕ ಯತ್ನಾಳ ಹೇಳಿಕೆಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜ್ಯದ 30 ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಮಾಡುತ್ತಿಲ್ಲ ಎಲ್ಲ ಜಿಲ್ಲೆಗಳಿಗೂ ಭೇಟಿ ಕೊಡುತ್ತಿದ್ದೇನೆ. ಎಲ್ಲ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿದ್ದು ಪಕ್ಷವನ್ನು ಇನ್ನಷ್ಟುಬಲಪಡಿಸುವ ಉದ್ದೇಶದಿಂದ ಪಕ್ಷದ ಸಂಘಟನೆಯಲ್ಲಿ ಹೆಚ್ಚು ಯುವಕರಿಗೆ ಅವಕಾಶ ಕೊಡಲಾಗುತ್ತಿದೆ ಎಂದರು.