ಕೊಡಗಿನ ಹಾಲಿ ಶಾಸಕರಿಗೆ ಟಿಕೆಟ್ ಕೊಡುವುದಕ್ಕೆ ಕಾರ್ಯಕರ್ತರ ತೀವ್ರ ವಿರೋಧ!
ಕಳೆದ 20 ರಿಂದ 25 ವರ್ಷಗಳಿಂದಲೂ ಬಿಜೆಪಿ ಭದ್ರಕೋಟೆಯಾಗಿ ಕೊಡಗು ಜಿಲ್ಲೆ ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿದೆ. ಈ ಬಾರಿಯ ಚುನಾವಣೆಯಲ್ಲಿ ಹಾಲಿ ಶಾಸಕದ್ವಯರಿಗೆ ಟಿಕೆಟ್ ಕೊಡುವುದಕ್ಕೆ ಕಾರ್ಯಕರ್ತರು, ಮುಖಂಡರು ಸುತಾರಾಂ ಒಪ್ಪದೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ವರದಿ: ರವಿ ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್
ಕೊಡಗು (ಏ.2): ಕಳೆದ 20 ರಿಂದ 25 ವರ್ಷಗಳಿಂದಲೂ ಬಿಜೆಪಿ ಭದ್ರಕೋಟೆಯಾಗಿ ಕೊಡಗು ಜಿಲ್ಲೆ ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿದೆ. ಹೀಗಾಗಿಯೇ ಮಡಿಕೇರಿ ಕ್ಷೇತ್ರದಲ್ಲಿ ಐದು ಬಾರಿಯಿಂದ ಅಪ್ಪಚ್ಚು ರಂಜನ್ ಶಾಸಕರಾಗಿ ಆಯ್ಕೆ ಆಗಿದ್ದಾರೆ, ವಿರಾಪೇಟೆ ಕ್ಷೇತ್ರದಲ್ಲಿ ಕೆ.ಜಿ. ಬೋಪಯ್ಯ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಈ ಬಾರಿಯ ಚುನಾವಣೆಯಲ್ಲಿ ಹಾಲಿ ಶಾಸಕದ್ವಯರಿಗೆ ಟಿಕೆಟ್ ಕೊಡುವುದಕ್ಕೆ ಕಾರ್ಯಕರ್ತರು, ಮುಖಂಡರು ಸುತಾರಾಂ ಒಪ್ಪದೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನುವುದು ಗೊತ್ತಾಗಿದೆ.
ಬಿಜೆಪಿಯ ಭದ್ರಕೋಟೆಲ್ಲೂ ಟಿಕೆಟ್ ಹಂಚಿಕೆಗೆ ಭಾರೀ ಕಸರತ್ತು ನಡೆಯುತ್ತಿದ್ದು, ಮಾರ್ಚಿ 31 ರಂದು ಯಾರಿಗೆ ಟಿಕೆಟ್ ಕೊಡಬೇಕು ಎಂದು ಅಭ್ಯರ್ಥಿಗಳ ಕುರಿತು ರಾಜ್ಯ ಬಿಜೆಪಿ ಅಭಿಪ್ರಾಯ ಸಂಗ್ರಹಿಸಿದೆ. ಈ ವೇಳೆ ಶಾಸಕರ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ ಎನ್ನಲಾಗುತ್ತಿದೆ. ಶಕ್ತಿ ಕೇಂದ್ರದ ಅಧ್ಯಕ್ಷರು, ಮಂಡಲ ಸಮಿತಿಗಳ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಕಾರ್ಯಕರ್ತರು ಮಾಡಿರುವ ಮತದಾನದಲ್ಲಿ ಶಾಸಕರ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ ಎನ್ನುವುದು ಬಹಿರಂಗವಾಗಿದೆ ಎನ್ನಲಾಗಿದೆ.
ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್, ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯಗೆ ಟಿಕೆಟ್ ಕೊಡುವುದಕ್ಕೆ ಕಾರ್ಯಕರ್ತರು ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮತದಾನದ ಮೂಲಕ ಅಭಿಪ್ರಾಯ ಸಂಗ್ರಹಿಸುವ ದಿನವೂ ಕೂಡ ಹಾಲಿ ಶಾಸಕರಿಗೆ ಟಿಕೆಟ್ ಕೊಡುವುದಕ್ಕೆ ನಮ್ಮ ಒಪ್ಪಿಗೆ ಇಲ್ಲವೆಂದು ಸಂಘದ ಪ್ರಮುಖರು ಬಿಜೆಪಿ ಜಿಲ್ಲಾ ಮುಖಂಡರೂ ಆಗಿರುವ ಜಿ.ಎಲ್. ನಾಗರಾಜು ಅವರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. 20, 25 ವರ್ಷದಿಂದ ಒಬ್ಬರಿಗೆ ಟಿಕೆಟ್ ನೀಡಲಾಗಿದೆ.
ಇದು ಬದಲಾವಣೆ ಆಗಬೇಕಾಗಿರುವ ಸಮಯ ಎಂದಿದ್ದ ಜಿ,ಎಲ್ ನಾಗರಾಜು ಅವರು ಎರಡು ಕ್ಷೇತ್ರದಲ್ಲೂ ಹೊಸಬರಿಗೆ ಅವಕಾಶ ನೀಡಬೇಕು. ಮಡಿಕೇರಿ ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ಹಾಗೂ ದೀಪಕ್ ಕುಮಾರ್ ಇದ್ದಾರೆ. ಅವರಿಗೆ ಟಿಕೆಟ್ ನೀಡಬೇಕು ಎಂದು ಹೇಳಿದ್ದರು. ಅದು ಭಾರತೀಶ್ ಸ್ಹೇಹ ಬಳಗದಲ್ಲೂ ಕೂಡ ಹಾಲಿ ಶಾಸಕರಿಗೆ ಟಿಕೆಟ್ ಕೊಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಚರ್ಚೆಗಳು ನಡೆದಿರುವುದು ಬಹಿರಂಗವಾಗಿದೆ.
Hassan JDS Ticket Fight: ಹೆಚ್‌ಡಿಕೆ ಪಟ್ಟು, ರೇವಣ್ಣ ಸಿಟ್ಟು, ಗೌಡರ ಬಿಕ್ಕಟ್ಟು, ಇಲ್ಲಿದೆ ಕುಮಾರಣ್ಣನ
ರಾಜ್ಯ ಬಿಜೆಪಿ ಮತ್ತೆ ತಮಗೆ ಟಿಕೆಟ್ ನೀಡುವಂತೆ ಅಭಿಪ್ರಾಯ ಮೂಡಿಸುವುದಕ್ಕಾಗಿ ಹಾಲಿ ಶಾಸಕರು ತಮಗೆ ಓಟ್ ಮಾಡುವಂತೆ ಬಿಜೆಪಿ ಕಾರ್ಯಕರ್ತರಿಗೆ ಒತ್ತಡ ಹೇರಿದ್ದಾರೆ ಎಂದು ಚರ್ಚಿಸಲಾಗಿದೆ. ಅಷ್ಟೇ ಅಲ್ಲ ತಮಗೆ ಓಟ್ ಯಾರು ಓಟ್ ಮಾಡುವುದಿಲ್ಲವೋ ಅಂತಹವರಿಗೆ ಹಣದ ಆಮಿಷ ಒಡ್ಡಿ ತಮ್ಮ ಪರವಾಗಿ ಮತ ಚಲಾಯಿಸುವಂತೆ ಮಾಡಿದ್ದಾರೆ ಎಂದು ಚರ್ಚಿಸಲಾಗಿದೆ. ಹಾಗಾದರೆ ಒಂದು ವೇಳೆ ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ ಎಂದಾದರೆ ಕೊಡಗಿನ ಎರಡು ಕ್ಷೇತ್ರಗಳಲ್ಲಿ ಮತ್ಯಾರಿಗೆ ಟಿಕೆಟ್..? ಎನ್ನುವ ಪ್ರಶ್ನೆ ಮೂಡುತ್ತದೆ. ಹಾಗೆ ನೋಡುವುದಾದರೆ ಮಡಿಕೇರಿ ಕ್ಷೇತ್ರದಲ್ಲಿ ಕೊಡಗು ಬಿಜೆಪಿ ಜಿಲ್ಲಾ ಘಟಕ ಮಾಜಿ ಅಧ್ಯಕ್ಷ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾಗಿದ್ದ ಬಿ.ಬಿ. ಭಾರತೀಶ್ ಅವರಿಗೆ ಟಿಕೆಟ್ ಕೊಡಬೇಕು ಎನ್ನುವುದು ತೀವ್ರ ಚರ್ಚೆಯಲ್ಲಿ ಇದೆ ಎನ್ನಲಾಗುತ್ತಿದೆ.
15 ಜಿಲ್ಲೆಗಳ ಬಿಜೆಪಿ ಕೋರ್ ಕಮಿಟಿ ಸಭೆ, ಯಾವ ಕ್ಷೇತ್ರದಲ್ಲಿ ಟಿಕೆಟ್ ಫೈಟ್?
ಕಳೆದ 2018 ರ ಚುನಾವಣೆಯಲ್ಲೂ ಭಾರತೀಶ್ ಅವರ ಹೆಸರು ಕೇಳಿಬಂದಿತ್ತು. ಇನ್ನು ವಿರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಅವರ ಹೆಸರು ಮತ್ತು ಬಿಜೆಪಿ ರಾಜ್ಯ ಶಿಸ್ತುಪಾಲನಾ ಸಮಿತಿಯ ಸದಸ್ಯರಾಗಿರುವ ರೀನಾ ಪ್ರಕಾಶ್ ಅವರ ಹೆಸರುಗಳು ಮುನ್ನೆಲೆಗೆ ಬಂದಿವೆ. ಈ ಎಲ್ಲಾ ಬೆಳವಣಿಗೆಗಳನ್ನು ನೋಡಿದರೆ ಹಾಲಿ ಶಾಸಕರಿಗೆ ನಿಜವಾಗಿಯೂ ಟಿಕೆಟ್ ಸಿಗುವುದು ಡೌಟಾ ಎನ್ನುವ ಸಂಶಯ ಮೂಡಿದೆ. ಚುನಾವಣೆಗೆ ಒಂದು ತಿಂಗಳ ಏಳು ದಿನಗಳಷ್ಟೇ ಬಾಕಿ ಇರುವ ಈ ಸಂದರ್ಭ ರಾಜ್ಯ ಬಿಜೆಪಿ ಯಾವ ನಿರ್ಧಾರ ಕೈಗೊಳ್ಳುತ್ತದೆ ಕಾದು ನೋಡಬೇಕಾಗಿದೆ.