Asianet Suvarna News

'ಪಕ್ಷದಲ್ಲಿ ಅಸಮಾಧಾನ ಇಲ್ಲ, ಎಲ್ಲ 15 ಕ್ಷೇತ್ರದಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ'

15 ಕ್ಷೇತ್ರಗಳ ಉಪ ಚುನಾವಣೆ| ಇಂದು ನಾಮಪತ್ರ ವಾಪಸು ಪಡೆಯಲು ಕೊನೆಯ ದಿನ| ಇಂದು ಅಂತಿಮವಾಗಿ ಕಣದಲ್ಲಿ ಉಳಿಯುವವರ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದ ಗೋವಿಂದ ಕಾರಜೋಳ|ಯಡಿಯೂರಪ್ಪ ನವರ ನಾಯಕತ್ವದಲ್ಲಿ ಚುನಾವಣೆ ನಡೆಯುತ್ತಿದೆ| ಎಲ್ಲ 15 ಕ್ಷೇತ್ರದಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ| ಆಕಾಂಕ್ಷಿಗಳ ಸಂಖ್ಯೆ ಜಾಸ್ತಿ ಇರುವುದರಿಂದ ಸಮಸ್ಯೆಯಾಗಿದೆ| ಆಡಳಿತ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ಸಹಜ|

BJP will Be Win All 15 Assembly constituency
Author
Bengaluru, First Published Nov 21, 2019, 9:59 AM IST
  • Facebook
  • Twitter
  • Whatsapp

ಹುಬ್ಬಳ್ಳಿ(ನ.21): ರಾಜ್ಯದಲ್ಲಿ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಇಂದು(ಗುರುವಾರ) ನಾಮಪತ್ರ ವಾಪಸು ಪಡೆಯಲು ಕೊನೆಯ ದಿನವಾಗಿದೆ. ಇಂದು ಅಂತಿಮವಾಗಿ ಕಣದಲ್ಲಿ ಉಳಿಯುವವರ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ. 

ಗುರುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬಿ.ಎಸ್. ಯಡಿಯೂರಪ್ಪ ನವರ ನಾಯಕತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಎಲ್ಲ 15 ಕ್ಷೇತ್ರದಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ. ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಆಕಾಂಕ್ಷಿಗಳ ಸಂಖ್ಯೆ ಜಾಸ್ತಿ ಇರುವುದರಿಂದ ಸಮಸ್ಯೆಯಾಗಿದೆ. ಆಡಳಿತ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ಸಹಜ ಎಂದು ತಿಳಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಉಪಚುನಾವಣೆಯಲ್ಲಿ ಟಿಕೆಟ್ ಸಿಗದವರು ಪಕ್ಷಕ್ಕೆ ಹಾನಿ ಮಾಡುವುದಿಲ್ಲ. ಎಲ್ಲರೂ ಒಗ್ಗಟ್ಟಾಗಿ, ಒಟ್ಟಾಗಿ ಅಭ್ಯರ್ಥಿಗಳನ್ನು ಗೆಲ್ಲಿಸ್ತಾರೆ. ರಾಜ್ಯ ಸರ್ಕಾರ ಸಮರ್ಥವಾಗಿ ನೆರೆ ನಿರ್ವಹಣೆ ಮಾಡಿದೆ. ಸಂಕಷ್ಟಕ್ಕೆ ಸಿಲುಕಿದ ಜನರಿಗೆ 24 ಗಂಟೆಯೊಳಗೆ ಸ್ಪಂದಿಸಿ ಪರಿಹಾರ ನೀಡಲಾಗಿದೆ. ರಾಜ್ಯದ ಜನ ಯಡಿಯೂರಪ್ಪ ನವರ ಕಾರ್ಯವನ್ನು ಮೆಚ್ಚಿಕೊಂಡಿದ್ದಾರೆ. ಎನ್.ಡಿ.ಆರ್ ಎಫ್ ಹಾಗೂ ಎಸ್.ಡಿ.ಆರ್.ಎಫ್ ನಿಯಮಾವಳಿಗಿಂತ ದುಪ್ಪಟ್ಟು ಪರಿಹಾರ ನೀಡಲಾಗಿದೆ ಎಂದಿದ್ದಾರೆ. 

ಸಚಿವ ಮಾಧುಸ್ವಾಮಿ ಅವರ ಹೇಳಿಕೆ ಬಗ್ಗೆ ನನಗೇನೂ ಗೊತ್ತಿಲ್ಲ. ನನ್ನ ತಾಯಿ ವಿಧಿವಶರಾದ ಹಿನ್ನೆಲೆ ಮಾಧುಸ್ವಾಮಿ ಅವರ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ. 

Follow Us:
Download App:
  • android
  • ios