Asianet Suvarna News Asianet Suvarna News

Karnataka Politics: ಸ್ಪಷ್ಟ ಬಹುಮತ ಗಳಿಸಿ ಅಧಿಕಾರಕ್ಕೇರಲಿರುವ ಬಿಜೆಪಿ : ನಾರಾಯಣಗೌಡ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟಬಹುಮತಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ವಿಶ್ವಾಸ ವ್ಯಕ್ತಪಡಿಸಿದರು

BJP will come to power with a clear majority snr
Author
First Published Dec 13, 2022, 5:48 AM IST

 ಮೈಸೂರು (ಡಿ.13):  ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟಬಹುಮತಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ (Mysuru)  ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್‌ನಂತೆ ಕರ್ನಾಟಕದಲ್ಲೂ (Karnataka)  ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಹಿಮಾಚಲ ಪ್ರದೇಶದಲ್ಲಿ ಕೆಲವೊಂದು ಕಾರಣಗಳಿಂದ ಸೋಲಾಗಿದೆ. ಸ್ಥಳೀಯ ಕಾರಣಗಳಿಂದ ಅಲ್ಲಿ ಬಿಜೆಪಿಗೆ ಸೋಲಾಗಿದೆ ಎಂದರು.

ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲೂ ಜನಸಂಕಲ್ಪ ಯಾತ್ರೆ ನಡೆಯಲಿದೆ. ಸಚ್ಚಿದಾನಂದ ಈಗಾಗಲೇ ಬಿಜೆಪಿ ಸೇರಿದ್ದಾರೆ. ಮಂಡ್ಯ ಜಿಲ್ಲೆಯ ಮತ್ತಷ್ಟುನಾಯಕರು ಬಿಜೆಪಿಗೆ ಸೇರಲಿದ್ದಾರೆ. ಯಾವೆಲ್ಲಾ ನಾಯಕರು ಬಿಜೆಪಿ ಸೇರಲಿದ್ದಾರೆ ಎಂಬುದನ್ನು ಬಹಿರಂಗಪಡಿಸಲಾಗುವುದಿಲ್ಲ ಎಂದು ಅವರು ಹೇಳಿದರು.

ಬಿಜೆಪಿ ತೊರೆಯಲ್ಲ, ಕಾಂಗ್ರೆಸ್‌ಗೆ ಹೋಗಲ್ಲ:

ನಾವು 17 ಶಾಸಕರು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ. ಬಿಜೆಪಿ ಸೇರ್ಪಡೆ ಆದ ಬಳಿಕ ನಮ್ಮನ್ನು ಪಕ್ಷ ಚೆನ್ನಾಗಿ ನಡೆಸಿಕೊಂಡಿದೆ. ಸಚಿವ ಸ್ಥಾನ ಕೊಟ್ಟು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ, ನಾವು ಬಿಜೆಪಿ ತೊರೆಯುವುದಿಲ್ಲ. ಬಿಜೆಪಿಯಲ್ಲೇ ಮುಂದುವರೆಯುತ್ತೇವೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ರೌಡಿಶೀಟರ್‌ಗಳನ್ನು ಪಕ್ಷ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ಅವರು, ಗೂಂಡಾಗಳನ್ನು ಹುಟ್ಟು ಹಾಕಿದ್ದು ಯಾರು? ಗೂಂಡಾಗಳನ್ನು ಹುಟ್ಟು ಹಾಕಿದ್ದೇ ಕಾಂಗ್ರೆಸ್‌. ಕಾಂಗ್ರೆಸ್‌ನಲ್ಲಿ ಎಷ್ಟುಜನ ಗೂಂಡಾಗಳಿಲ್ಲ ಹೇಳಿ? ಅವರನ್ನು ಏಕೆ ಓಡಿಸಿಲ್ಲ. ಅಲ್ಲಿ ಟ್ರೈನಿಂಗ್‌ ಕೊಟ್ಟು ಯಾವಾಗಲೂ ಗೂಂಡಾಗಳೇ ಆಗಿರ್ತಾರೆ ಎನ್ನೋದು ಸರಿಯಲ್ಲ ಎಂದರು.

ಬಿಜೆಪಿ ಸೇರ್ಪಡೆ ಆಗುವವರನ್ನು ರೌಡಿಶೀಟರ್‌ ಎಂದು ಹೇಳುತ್ತಿದ್ದಾರೆ. ಬಿಜೆಪಿ ಸೇರುತ್ತಿರುವುದನ್ನು ಸಹಿಸಿಕೊಳ್ಳಲಾಗದೇ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಸೇರ್ಪಡೆಗೆ ಮುಂದಾಗಿರುವವರು ಅವರ ಪಕ್ಷದಲ್ಲಿ ಇರುವವರೆಗೂ ರೌಡಿಶೀಟರ್‌ಗಳಾಗಿರಲಿಲ್ಲವೇ? ರೌಡಿಶೀಟರ್‌ಗಳಿಗೆ ಮನಿ ಫÜಂಡ್‌ ಮಾಡುತ್ತಿದ್ದವರು ಯಾರು ಎಂದು ಪ್ರಶ್ನಿಸಿದರು.

ಬಿಜೆಪಿಯಲ್ಲಿ ಇರುವವರು ಪುಣ್ಯಾತ್ಮರು, ವಿದ್ಯಾವಂತರು, ತ್ಯಾಗಿಗಳು, ಆರ್‌ಎಸ್‌ಎಸ್‌ ಹಿನ್ನೆಲೆಯುಳ್ಳವರು. ಕುಡ್ಲು ಮಚ್ಚು ಹಿಡಿದಿರುವವರು ಬಿಜೆಪಿಯಲ್ಲಿಲ್ಲ. ಕುಡ್ಲು ಮಚ್ಚು ಹಿಡಿಯುವವರು ಯಾವ ಪಕ್ಷದಲ್ಲಿದ್ದಾರೆಂದು ಎಲ್ಲರಿಗೂ ಗೊತ್ತಿದೆ ಎಂದು ಅವರು ಹೇಳಿದರು.

ಪಕ್ಷ ಬಿಟ್ಟವರಿಗೆ ಕಾಂಗ್ರೆಸ್ ಗಾಳ

ಆನಂದ್‌ ಎಂ. ಸೌದಿ

ಯಾದಗಿರಿ(ಡಿ.10):  ಕಳೆದ ವಿಧಾನಸಭಾ ಚುನಾವಣೆ ನಂತರ ಕಾಂಗ್ರೆಸ್‌ ತೊರೆದು ವಿವಿಧ ಪಕ್ಷ ಸೇರಿದ್ದ ಹಿರಿತಲೆ ಮುಖಂಡರಿಗೆ ಮತ್ತೆ ಮೂಲ ಪಕ್ಷಕ್ಕೆ ವಾಪಸ್‌ ಕರೆತರಲು ‘ಕೈ’ ಪಡೆ ಗಂಭೀರ ಚಿಂತನ-ಮಂಥನ ನಡೆಸಿದೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಈ ಬೆಳವಣಿಗೆಗಳು ಕಾಂಗ್ರೆಸ್ಸಿಗೆ ವರದಾನವಾಗಲಿದೆ ಎಂಬ ಅಂಶಗಳನ್ನು ಆಂತರಿಕ ಸರ್ವೆಯಲ್ಲಿ ಕಂಡುಕೊಳ್ಳಲಾಗಿದೆ ಎನ್ನಲಾಗಿದೆ.

ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷರಾದ ಮೇಲೆ ಇಂತಹ ಚಟುವಟಿಕೆಗಳಿಗೆ ಮತ್ತಷ್ಟು ಜೀವ ಬಂದಿದೆ. ಇದಕ್ಕೆ ಅವರೂ ಸಹ ತಲೆಯಾಡಿಸಿದ್ದಾರೆನ್ನಲಾಗಿದ್ದು, ಮುಂಬರುವ ದಿನಗಳಲ್ಲಿ ‘ಘರ್‌ ವಾಪ್ಸಿ’ ಕಾರ್ಯಕ್ರಮಗಳು ನಡೆದರೆ ಅಚ್ಚರಿ ಪಡೆಬೇಕಿಲ್ಲ.

TICKET FIGHT: ಕುತೂಹಲ ಮೂಡಿಸಿರುವ ಯಾದಗಿರಿ ಜಿಲ್ಲೆಯ ರಾಜಕೀಯ ಜಿದ್ದಾಜಿದ್ದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಈಗಾಗಲೇ ಅನೇಕರನ್ನು ಸಂಪರ್ಕಿಸಿದ್ದು, ಮತ್ತೇ ಎಲ್ಲರೂ ಒಂದಾಗೋಣ ಎಂಬ ಸಂದೇಶ ಆಪ್ತ ವಲಯದಲ್ಲಿ ಹರಿದಾಡುತ್ತಿದೆ. ಕಾಂಗ್ರೆಸ್‌ ಪಕ್ಷ ತ್ಯಜಿಸಿ ವಿವಿಧ ಪಕ್ಷಗಳಿಗೆ ಪಕ್ಷಾಂತರಗೊಂಡವರನ್ನು ಮನ ಓಲೈಸಲಾಗುತ್ತಿದೆ. ಸಮಾನಮನಸ್ಕರು ಒಂದಾದರೆ ಮತ್ತೇ ಹಿಂದಿನ ವೈಭವ ಮರುಕಳಿಸಬಹುದು ಎಂಬ ಮಾತುಗಳಿಂದ ಪಕ್ಷಾಂತರಿಗಳಲ್ಲಿಯೂ ಹೊಸ ಆಶಾಭಾವ ಮೂಡಿ, ಮತ್ತೆ ಮೂಲನೆಲೆಗೆ ವಾಪಸ್ಸಾಗಲು ಸಿದ್ಧತೆ ನಡೆಸಿದಂತಿದೆ.

ಇದಕ್ಕೆ ಪುಷ್ಟಿ ನೀಡುವಂತೆ ಮಾಜಿ ಸಚಿವ ಡಾ. ಎ.ಬಿ. ಮಾಲಕರೆಡ್ಡಿ ಅವರನ್ನು ಸಂಪರ್ಕಿಸಿರುವ ಡಿಕೆಶಿ, ಕಾಂಗ್ರೆಸ್‌ ರಾಜಕೀಯಕ್ಕೆ ಮರಳುವಂತೆ ಕೋರಿದ್ದಾರೆ ಎಂಬ ದಟ್ಟವಾದ ಮಾತುಗಳಿವೆ. ಡಾ. ರೆಡ್ಡಿ ಅವರ ಪುತ್ರಿ ಡಾ. ಅನುರಾಗಾ ಮೂಲಕ ಇಲ್ಲಿ ಮತ್ತೆ ಕೈಪಡೆ ನೆಲೆಯೂರಲು ಪ್ರಯತ್ನ ಸಾಗಿದೆ.

Assembly Election: ಯಾದಗಿರಿ ಕಾಂಗ್ರೆಸ್ ಟಿಕೆಟ್‌ಗೆ 17 ಆಕಾಂಕ್ಷಿಗಳು ಅರ್ಜಿ ಸಲ್ಲಿಕೆ..!

ಯಾದಗಿರಿ ಕಾಂಗ್ರೆಸ್‌ ಟಿಕೆಟ್‌ಗಾಗಿ ಅನೇಕರು ಅರ್ಜಿ ಸಲ್ಲಿಸಿದ್ದಾರಾದರೂ, ‘ಕೈ’ ಕಮಾಂಡ್‌ ಡಾ. ರೆಡ್ಡಿ ಅವರ ಪುತ್ರಿಯ ಚುನಾವಣೆ ಸ್ಪರ್ಧಿಸುವ ಅರ್ಜಿಯನ್ನು ಕರೆದು ಪಡೆದಿದ್ದು ವಿಶೇಷ. ಹಿಂದಿನ ಮರೆತು ಖರ್ಗೆಯವರು ಇದಕ್ಕೆ ಹಸಿರು ನಿಶಾನೆ ತೋರುವರೇ ಎಂಬ ಕುತೂಹಲ ಮೂಡಿದೆ. ಹಿರಿತನ ಕಡೆಗೆಣಿಸಿದ್ದಕ್ಕೆ ಅಸಮಾಧಾನಗೊಂಡು ಕಾಂಗ್ರೆಸ್‌ ಬಿಟ್ಟಿದ್ದೆ ಎಂದಿರುವ ಡಾ. ಮಾಲಕರೆಡ್ಡಿ, ಖರ್ಗೆಯವರ ವಿಚಾರದಲ್ಲಿ ನನಾಗವ ವೈಯಕ್ತಿಕ ದ್ವೇಷವೇ ಇಲ್ಲ ಎಂದಿದ್ದಾರೆ.

Follow Us:
Download App:
  • android
  • ios