ಭಾರತ ಐಕ್ಯತಾ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸುವ ಯಾವುದೇ ನೈತಿಕ ಹಕ್ಕು ಕಂದಾಯ ಸಚಿವ ಆರ್‌.ಅಶೋಕ್‌ ಹಾಗೂ ಮಾಜಿ ಸಚಿವ ರೇಣುಕಾಚಾರ್ಯ ಅವರಿಗೆ ಇಲ್ಲ ಎಂದು ಮದ್ದೂರು ಕ್ಷೇತ್ರದ ಕಾಂಗ್ರೆಸ್‌ ಸಂಭವನೀಯ ಅಭ್ಯರ್ಥಿ ಎಸ್‌.ಗುರುಚರಣ್‌ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು.

ಮದ್ದೂರು (ಅ.15): ಭಾರತ ಐಕ್ಯತಾ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸುವ ಯಾವುದೇ ನೈತಿಕ ಹಕ್ಕು ಕಂದಾಯ ಸಚಿವ ಆರ್‌.ಅಶೋಕ್‌ ಹಾಗೂ ಮಾಜಿ ಸಚಿವ ರೇಣುಕಾಚಾರ್ಯ ಅವರಿಗೆ ಇಲ್ಲ ಎಂದು ಮದ್ದೂರು ಕ್ಷೇತ್ರದ ಕಾಂಗ್ರೆಸ್‌ ಸಂಭವನೀಯ ಅಭ್ಯರ್ಥಿ ಎಸ್‌.ಗುರುಚರಣ್‌ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಗೊರವನಹಳ್ಳಿ (Goravanahalli) ಗ್ರಾಪಂ ವ್ಯಾಪ್ತಿಯ ಚನ್ನಸಂದ್ರ, ಮರಕಾಡದೊಡ್ಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮನೆಮನೆಗೆ ಕಾಂಗ್ರೆಸ್‌ (Congress) ನಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಹುಲ್ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆಗೆ ಯಾವುದೇ ಗಂಭೀರತೆ ಇಲ್ಲ. ರಾಹುಲ್ ಕೇವಲ ಬೊಜ್ಜು ಮತ್ತು ಕೊಬ್ಬು ಕರಗಿಸಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಸಚಿವ ಆರ್‌.ಅಶೋಕ್‌ ಮತ್ತು ರೇಣುಕಾಚಾರ್ಯ ಟೀಕಿಸಿರುವುದಕ್ಕೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕರ ಕೊಬ್ಬನ್ನು ರಾಜ್ಯದ ಜನ ಕರಗಿಸುತ್ತಾರೆ ಎಂದು ತಿರುಗೇಟು ನೀಡಿದರು.

ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಮೋದಿ ಪ್ರಧಾನಿಯಾದ ಮೇಲೆ ಹೇಟ್ ಪಾಲಿಟಿಕ್ಸ್ ಜಾಸ್ತಿ ಆಗಿದೆ. ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ. ರಾಯಚೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ.

ವಿಜಯಪುರ: ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಪೋಸ್ಟ್‌: ಪೊಲೀಸ್‌ ಕಾನ್ಸಟೇಬಲ್ ಸಸ್ಪೆಂಡ್‌

ರಾಹುಲ್ ಗಾಂಧಿಯವರ ಭಾರತ ಐಕ್ಯತಾ ಯಾತ್ರೆ ಅಂಗವಾಗಿ ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಸಿದ್ದರಾಮಯ್ಯನವರು ಮಾತನಾಡಿದರು. ಬಿಜೆಪಿ ಆಡಳಿತ ಬಂದ ಮೇಲೆ ದೇಶದ ಜನರ ಮನಸ್ಸುಗಳು ಒಡೆದಿವೆ. ದೇಶದಲ್ಲಿ ಅನೇಕ ಸಮಸ್ಯೆಗಳಿವೆ. ಅವಕ್ಕೆ ಪರಿಹಾರ ಕೊಡುವ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಅವರು ಕೊಟ್ಟ ಭರವಸೆಗಳನ್ನೂ ಈಡೇರುಸುತ್ತಿಲ್ಲ, ಇದನ್ನ ಮುಚ್ಚಿಕೊಳ್ಳಲು ಹಿಂದುತ್ವ ವಿಚಾರ ಮುನ್ನೆಲೆಗೆ ತರುತ್ತಿದ್ದಾರೆ. ಮುಂದಿನ ಚುನಾವಣೆಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ. ಕಳೆದ ತಿಂಗಳು 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾಗಿದೆ. ಈ ಯಾತ್ರೆ ಕಾಶ್ಮೀರದರೆಗೆ ನಡೆಯುತ್ತಿದೆ. ಒಟ್ಟು 3570 ಕಿ.ಮಿ 12 ರಾಜ್ಯ ಎರಡು ಕೇಂದ್ರಾಡಳಿತ ಪ್ರದೇಶದಲ್ಲಿ ಪಾದಯಾತ್ರೆ ನಡೆಯುತ್ತದೆ. ಹೀಗಾಗಿ ಇದು ಸ್ವಾತಂತ್ರ್ಯ ಬಳಿಕ ದೇಶದಲ್ಲಿ ಐತಿಹಾಸಿಕ ಪಾದಯಾತ್ರೆ ಆಗಲಿದೆ ಇಂದು ರೈತರು ಬಡವರು, ಅಲ್ಪಸಂಖ್ಯಾತರು ಭಯದಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ. ಇದನ್ನ ಜನರಿಗೆ ತಿಳಿಸಬೇಕು ನೈಜ ವಿಚಾರ ಜನರ ಮುಂದೆ ಇಡುವ ಸಲುವಾಗಿ ರಾಹುಲ್ ಗಾಂಧಿ ಪಾದಯಾತ್ರೆ ಮಾಡುತ್ತಿದ್ದಾರೆ. ಬೆಂಗಳೂರಿಂದ ಬಳ್ಳಾರಿ ಪಾದಯಾತ್ರೆ ನಮಗೆ ದೊಡ್ಡ ಕಸರತ್ತು ಆಗಿತ್ತು, ಇದು ಅದಕ್ಕಿಂತ ದೊಡ್ಡದು. ಅಕ್ಟೋಬರ್ 15 ರಂದು ಬಳ್ಳಾರಿಯಲ್ಲಿ ಮಧ್ಯಾಹ್ನ 1:30 ಕ್ಕೆ ಪಾದಯಾತ್ರೆ ನಡೆಯುತ್ತದೆ. ಅಲ್ಲಿ ಬೃಹತ್‌ ಸಮಾವೇಶ ಮಾಡಲು ನಿರ್ಧರಿಸಿದ್ದೇವೆ.

ಬಿಜೆಪಿ ನಾಯಕರು ಕೋಮುವಾದಿ ರಾಜಕಾರಣ ಮಾಡುವ ಮೂಲಕ ಜನರನ್ನು ಎತ್ತಿಕಟ್ಟಿಜಾತಿ ಸಂಘರ್ಷ ಉಂಟು ಮಾಡುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಂಪುಟ ಸಚಿವರು ಇದರಿಂದ ಹೊರತಾಗಿಲ್ಲ. ಕಾಂಗ್ರೆಸ್‌ ನಡೆಸುತ್ತಿರುವ ಜೋಡೋ ಯಾತ್ರೆಯಿಂದ ದಿನೇ ದಿನೇ ಪಕ್ಷದ ವರ್ಚಸ್ಸು ಜನಪ್ರಿಯತೆ ಪಡೆಯುತ್ತಿರುವುದರಿಂದ ಬಿಜೆಪಿ ನಾಯಕರಿಗೆ ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿ ಎದುರಾಗಿದೆ ಎಂದರು.

2023ರ ವಿಧಾನಸಭೆ, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟಬುತ್ತಿಯಾಗಿದೆ. ಇದರಿಂದ ಆತಂಕಗೊಂಡಿರುವ ಆ ಪಕ್ಷದ ನಾಯಕರುಗಳು ಪದೇ ಪದೇ ಆಂತರಿಕ ಸಮೀಕ್ಷೆ ನಡೆಸುತ್ತಿದ್ದಾರೆ ಕುಟುಕಿದರು.

ಕಾಂಗ್ರೆಸ್‌ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲು ಸಿದ್ಧವಾಗಿದೆ. ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಪಕ್ಷದ ನಾಯಕರು ಒಗ್ಗೂಡಿ ಕೇಂದ್ರ ಮತ್ತು ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾರೆ ಎಂದರು.

ಈ ವೇಳೆ ಮುಖಂಡರಾದ ಕದಲೂರು ರಾಮಕೃಷ್ಣ, ಯುವ ಕಾಂಗ್ರೆಸ್‌ ಅಧ್ಯಕ್ಷ ಕಿರಣ್‌ಕುಮಾರ್‌, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಪಿ.ಸಂದರ್ಶ, ಕಾಂಗ್ರೆಸ್‌ ವಕ್ತಾರ ಎಂ.ಪಿ. ಅಮರ್‌ಬಾಬು, ಟಿಎಪಿಸಿಎಂಎಸ್‌ ಉಪಾಧ್ಯಕ್ಷ ರಾಘವ್‌, ಮುಖಂಡರಾದ ಮಹೇಶ್‌, ಅರುಣ್‌, ಚಾವಿ, ಸತೀಶ್‌, ಡಾಬಾ ಮಹೇಶ್‌, ಮರಿದೇವರು ಮತ್ತಿತ್ತರರು ಇದ್ದರು.