'ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ '

 ರಾಜ್ಯದಲ್ಲಿ ಮುಂದಿನ ಚುನಾವಣೆ ಸಂದರ್ಭದಲ್ಲಿ 150ಕ್ಕೂ ಹೆಚ್ಚು ಸ್ಥಾನ ಗಳಿಸುವುದರ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯುವುದು ಖಚಿತ ಎಂದು ಭವಿಷ್ಯ ನುಡಿಯಲಾಗಿದೆ

BJP Will win 150 seats in next Karnataka Assembly Election says eshwarappa snr

ಶಿವಮೊಗ್ಗ(ಮಾ.03):  ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟಬಹುಮತ ಪಡೆಯಲಿದ್ದು, 150ಕ್ಕೂ ಹೆಚ್ಚು ಸ್ಥಾನ ಗಳಿಸುವುದರ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯುವುದು ಖಚಿತ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಶುಭ ಮಂಗಳ ಸಮುದಾಯ ಭವನದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರ ಶ್ರಮದಿಂದ ಬಹುತೇಕ ಗ್ರಾಮ ಪಂಚಾಯತ್‌ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಧಿಕಾರ ಗದ್ದುಗೆಯೇರಿದ್ದಾರೆ. ಚುನಾವಣೆಯಲ್ಲಿ ಗೆಲುವು ಪಡೆದವರು ಜನರ ಋುಣ ತೀರಿಸಬೇಕು. ಪರಾಜಿತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು. ಮುಂದಿನ ಚುನಾವಣೆಯಲ್ಲೂ ಪುನರಾಯ್ಕೆ ಆಗಬೇಕು. ಇದಕ್ಕಾಗಿ ಹೆಚ್ಚಿನ ಅನುದಾನ ಪಡೆಯಲು ಸಂಸದರು, ಶಾಸಕರ ಬಳಿ ಪ್ರಯತ್ನ ನಡೆಸಬೇಕೆಂದು ಸಲಹೆ ನೀಡಿದರು.

'ಯಾರ್ರೀ ಈಶ್ವರಪ್ಪ.. ವಿಶ್ವನಾಥ್.. ನಾಚಿಕೆ ಇಲ್ವಾ' ಕೆಂಡವಾದ ಬಿಜೆಪಿ ಸಂಸದ ...

ಕೇಂದ್ರ ಮತ್ತು ರಾಜ್ಯ ಸರ್ಕಾರ ವಿವಿಧ ಯೋಜನೆಯಡಿ ಗ್ರಾಮ ಪಂಚಾಯಿತಿಗಳಿಗೆ ಅನುದಾನ ಲಭಿಸುತ್ತದೆ. ಸ್ಥಳೀಯ ಗ್ರಾಮ ಪಂಚಾಯಿತಿಯಿಂದಲೂ ತೆರಿಗೆ ಸಂಗ್ರಹವಾಗುತ್ತದೆ. ಇದರ ಬಳಕೆ ಯಾವ ರೀತಿ ಮಾಡಬೇಕು, ಅನುದಾನ ಯಾವ ರೀತಿ ತರಬೇಕು ಎಂಬ ವಿಷಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಅಧ್ಯಕ್ಷ, ಉಪಾಧ್ಯಕ್ಷರಿಗೆ ರಾಜ್ಯದ ಒಟ್ಟು 285 ಕೇಂದ್ರಗಳಲ್ಲಿ ತರಬೇತಿ ನೀಡಲಾಗುವುದು. ಒಂದು ಕೇಂದ್ರದಲ್ಲಿ 40 ಜನರಿಗೆ ಅವಕಾಶವಿದೆ. ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಮೊದಲ ಆದ್ಯತೆæ ನೀಡಬೇಕು, ಶಾಲಾ ಮೈದಾನ, ಅಂಗನವಾಡಿ ರಿಪೇರಿ, ಕಾಂಪೌಂಡ್‌ ನಿರ್ಮಾಣಕ್ಕೆ ಸರ್ಕಾರ ಹಣ ನೀಡುತ್ತದೆ. ಅದನ್ನು ಬಳಕೆ ಮಾಡಿಕೊಳ್ಳಬೇಕು. ಜೊತೆಗೆ ಪಕ್ಷ ಸಂಘಟನೆಗೆ ಮತ್ತು ಪಕ್ಷದ ಕೆಲಸಕ್ಕೆ ಆದ್ಯತೆ ನೀಡಬೇಕು ಎಂದರು.

ಗ್ರಾಮಾಂತರ ಕ್ಷೇತ್ರ ಶಾಸಕ ಕೆ.ಬಿ. ಅಶೋಕ್‌ ನಾಯ್ಕ ಮಾತನಾಡಿ, ಕಟ್ಟಡಕ್ಕೆ ತಳಪಾಯ ಹೇಗೆ ಮುಖ್ಯವೋ, ಹಾಗೆಯೇ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮುಂದಿನ ಎಲ್ಲ ಚುನಾವಣೆಯಲ್ಲೂ ಗೆಲವು ಸಾಧಿಸಬಹುದು. ತಳಮಟ್ಟದಿಂದ ಪಕ್ಷದ ಸಂಘಟನೆ ಬಲವಾಗಿದೆ. ಬಹುತೇಕ ಎಲ್ಲ ಚುನಾವಣೆಗಳಲ್ಲೂ ಗೆಲವು ಸಾಧಿಸುತ್ತ ಬಂದಿದೆ. ಮುಂದಿನ ದಿನದಲ್ಲೂ ಪಕ್ಷ ಇನ್ನಷ್ಟಸಾಧನೆ ತೋರಬೇಕೆಂದರು.

ಇತ್ತೀಚಿನ ಚುನಾವಣೆ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದ್ದು, ಸರ್ಕಾರದ ಎಲ್ಲ ಯೋಜನೆಗಳನ್ನು ನಾಗರಿಕರಿಗೆ ಮುಟ್ಟಿಸುವ ಕಾರ್ಯ ಮಾಡಬೇಕು. ಜನತೆಯ ಪ್ರೀತಿ- ವಿಶ್ವಾಸ ಗಳಿಸಬೇಕೆಂದರು.

Latest Videos
Follow Us:
Download App:
  • android
  • ios