ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿಯಲಾಗಿದೆ.  ಶೀಘ್ರ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ಘೆಲುವಿನ ಬಗ್ಗೆ ಮಾತನಾಡಲಾಗಿದೆ.

ಶಿವಮೊಗ್ಗ (ಅ.02): ರಾಜ್ಯ ವಿಧಾನಸಭೆಗೆ ಯಾವುದೇ ಸಂದರ್ಭದಲ್ಲಿ ಚುನಾವಣೆ ಎದುರಾದರೂ ಬಿಜೆಪಿಗೆ ಸ್ಪಷ್ಟಬಹುಮತ ಲಭಿಸುತ್ತದೆ. ಸ್ವತಂತ್ರವಾಗಿ ಅಧಿಕಾರ ಹಿಡಿಯುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. 

ಮಂಗಳವಾರ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಬಿಜೆಪಿ ಜಿಲ್ಲಾ ವಿಶೇಷ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪರ ಉತ್ತಮ ಆಡಳಿತ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರ ನೇತೃತ್ವದಲ್ಲಿ ಪಕ್ಷದ ಸಂಘಟನೆ ಮತ್ತಷ್ಟುಪ್ರಬಲವಾಗಿ ಬೆಳೆಯುತ್ತಿದೆ ಎಂದು ಹೇಳಿದರು.

ಕಟೀಲ್ ನೇತೃತ್ವದಲ್ಲಿ ಮತ್ತೊಮ್ಮೆ ಅಧಿಕಾರ

ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ರಾಜಕೀಯ ಬೆಳವಣಿಗೆಗೆ ಸ್ಪಷ್ಟವಾಗಿ ಹೆಜ್ಜೆಹಾಕಬೇಕು. ಸಂಘಟನೆ ಇನ್ನಷ್ಟುಶಕ್ತಿಶಾಲಿಯಾಗಬೇಕು. ಮುಂಬರುವ ಚುನಾವಣೆಯಲ್ಲೂ ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ರಾಜ್ಯದಲ್ಲಿ ಉಂಟಾದ ಭೀಕರ ಜಲಪ್ರಳಯದಿಂದ ಸಾಕಷ್ಟುಹಾನಿ ಸಂಭವಿಸಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜನತೆಯ ಸಂಕಷ್ಟನಿವಾರಿಸಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ಕೇಂದ್ರ ಸರ್ಕಾರದಿಂದ ಪರಿಹಾರ ಹಣ ಬಿಡುಗಡೆಯಾಗಿಲ್ಲ ಎಂಬುದು ನಿಜ. ಇನ್ನು ಮೂರ್ನಾಲ್ಕು ದಿನದಲ್ಲಿ ಕೇಂದ್ರ ಸರ್ಕಾರದಿಂದ ನೆರೆ ಪರಿಹಾರಕ್ಕೆಂದು ಅನುದಾನ ದೊರಕಲಿದೆ. ವಿರೋಧ ಪಕ್ಷಗಳ ಟೀಕೆಗೆ ಅದು ಉತ್ತರವಾಗಲಿದೆ ಎಂದು ಈಶ್ವ​ರಪ್ಪ ಹೇಳಿ​ದ​ರು.