ಬಿಜೆಪಿ ಅಧಿಕಾರಕ್ಕೆ ಬರಲಿದೆ: ಕಾಗೇರಿ ವಿಶ್ವಾಸ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 27, Aug 2018, 5:40 PM IST
BJP will win more then 25 seats in Shivamogga City Corporation Election
Highlights

ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಮತದಾರರು ಬಿಜೆಪಿ ಗೆಲ್ಲಿಸಿದ್ದು ನಮ್ಮ ಗೆಲುವಿನ ವಿಶ್ವಾಸ ಇನ್ನಷ್ಟು ಹೆಚ್ಚಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಾಗಿ ಆಯ್ಕೆಯಾಗುವಂತೆ ನೋಡಿಕೊಂಡು ಅಧಿಕಾರಕ್ಕೆ ಬರುತ್ತೇವೆ ಎಂದು ಕಾಗೇರಿ ಹೇಳಿದ್ದಾರೆ. 

ಶಿವಮೊಗ್ಗ[ಆ.27]: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರೊಂದಿಗೆ ಬಿಜೆಪಿ ಪಕ್ಷವು ಅಧಿಕಾರ ಹಿಡಿಯಲಿದೆ ಎಂದು ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಮತದಾರರು ಬಿಜೆಪಿ ಗೆಲ್ಲಿಸಿದ್ದು ನಮ್ಮ ಗೆಲುವಿನ ವಿಶ್ವಾಸ ಇನ್ನಷ್ಟು ಹೆಚ್ಚಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಾಗಿ ಆಯ್ಕೆಯಾಗುವಂತೆ ನೋಡಿಕೊಂಡು ಅಧಿಕಾರಕ್ಕೆ ಬರುತ್ತೇವೆ ಎಂದು ಕಾಗೇರಿ ಹೇಳಿದ್ದಾರೆ. ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಬಹಳ ದಿನ ನಡೆಯೊಲ್ಲ. ಸಿಎಂ ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯದಲ್ಲಿ ಅಸ್ಥಿರ ವಾತಾವರಣ ಇದೆ. ಸಮ್ಮಿಶ್ರ ಸರ್ಕಾರದಿಂದ ಒಳ್ಳೆಯ ಆಡಳಿತ ನೀಡಲು ಸಾಧ್ಯವಿಲ್ಲ. ಆದಷ್ಟು ಶೀಘ್ರದಲ್ಲೇ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ. 

ರಾಜ್ಯದಲ್ಲಿ ನೆರೆ ಹಾವಳಿಗೆ ತುತ್ತಾದ ಪ್ರದೇಶದಲ್ಲಿ ತುರ್ತು ಪರಿಹಾರ ಕಾಮಗಾರಿ ಕೈಗೊಳ್ಳಲು ಹಣವಿಲ್ಲ. ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಗೆ ನೆರೆ ಪರಿಹಾರಕ್ಕೆ ತಕ್ಷಣ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಈ ಸರ್ಕಾರ ಭ್ರಮೆಯನ್ನು ಸೃಷ್ಟಿಸುತ್ತಿದೆ ಅಷ್ಟೇ, ರಾಜ್ಯದ ಜನತೆಯ ಅಭಿವೃದ್ಧಿಗೆ ಯಾವುದೇ ಕಾರ್ಯ ಕೈಗೊಳ್ಳುತ್ತಿಲ್ಲ. ರೈತರ ಸಾಲಮನ್ನಾ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು ಸಾಕಷ್ಟು ಗೊಂದಲ ಮೂಡಿಸಿದೆ ಎಂದು ಕಾಗೇರಿ ಆರೋಪಿಸಿದ್ದಾರೆ.

loader