ಶಿರಾ (ನ.10): ಬಿಜೆಪಿ ಕಾರ್ಯಕರ್ತರ ಪರಿಶ್ರಮದಿಂದ ಮತದಾರರು ಸ್ಪಂದನೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಶಿರಾದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸುತ್ತದೆ. ಮುಂದಿನ ಎರಡೂವರೆ ವರ್ಷದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

 ತಾಲೂಕಿನ ಕಳ್ಳಂಬೆಳ್ಳ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿದ ಅವರು, ಕೆರೆಯಲ್ಲಿ ಆಟವಾಡಲು ಹೋಗಿ ಮೃತಪಟ್ಟಿದ್ದ ಸಹೋದರಿಯರ ಕುಟುಂಬಕ್ಕೆ ಸಾಂತ್ವನ ಹೇಳಿದರು.

 ನ.10 ರಂದು ಪ್ರಕಟವಾಗುವ ಉಪಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ರಾಜೇಶ್‌ಗೌಡ 20 ಸಾವಿರಕ್ಕೂ ಹೆಚ್ಚು ನಂತರದ ಗೆಲುವು ಸಾಧಿಸುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ ಎಂದರು. 

RR ನಗರ : ಫಲಿತಾಂಶಕ್ಕೂ ಮೊದಲೇ ಸೋಲೊಪ್ಪಿಕೊಂಡರಾ ಡಿಕೆಶಿ?

ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿದ ಸಹೋದರಿಯರ ಕುಟುಂಬಕ್ಕೆ ಸರಕಾರದಿಂದ ನೆರವು ನೀಡಿ, ಅವರ ಕುಟುಂಬಕ್ಕೆ ಆಸರೆಯಾಗಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದೇವೆ. ಆದಷ್ಟುಶೀಘ್ರದಲ್ಲಿ ಅವರಿಗೆ ಪರಿಹಾರ ಒದಗಿಸುವ ಭರವಸೆ ಇದೆ ಎಂದರು.