ಸರ್ಕಾರಿ ಅತಿಥಿ ಗೃಹದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರಿಂದ ಹುಟ್ಟುಹಬ್ಬ ಆಚರಣೆ| ಬೆಳಗಾವಿ ನಗರದ ಸರ್ಕೀಟ್ ಹೌಸ್‌ನಲ್ಲಿ ಬಿಜೆಪಿ ಕಾರ್ಯಕರ್ತೆ ಪ್ರೇಮಾ ಭಂಡಾರಿ ಅವರ ಹುಟ್ಟುಹಬ್ಬ ಆಚರಣೆ| ಸರ್ಕಾರಿ ಕಚೇರಿಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಲು ಅನುಮತಿ ಅನುಮತಿ ಕೊಟ್ಟೋರು ಯಾರು?|
ಬೆಳಗಾವಿ(ಮಾ.06): ಸರ್ಕಾರಿ ಅತಿಥಿ ಗೃಹದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರಿಂದ ಬರ್ತ್ ಡೇ ಪಾರ್ಟಿ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿವೆ.

ಬಿಜೆಪಿ ಕಾರ್ಯಕರ್ತೆ ಪ್ರೇಮಾ ಭಂಡಾರಿ ಅವರ ಹುಟ್ಟುಹಬ್ಬವನ್ನ ನಗರದ ಸರ್ಕೀಟ್ ಹೌಸ್‌ನಲ್ಲಿ ಆಚರಣೆ ಮಾಡಿದ್ದಾರೆ. ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಸವಿತಾ ಗುಡ್ಡಾಕಾಯಿ, ಲಿನಾ ಟೋಪಣ್ಣವರ್, ಮಾಜಿ ಅಧ್ಯಕ್ಷೆ ಉಜ್ವಲಾ ಬಡವಣಾಚೆ ಸೇರಿ ಅನೇಕರು ಭಾಗಿಯಾಗಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ'

ಪ್ರೇಮಾ ಭಂಡಾರಿ ಹುಟ್ಟುಹಬ್ಬವನ್ನ ಕಾರ್ಯಕರ್ತೆಯರು ಕೇಕ್ ಕಟ್ ಮಾಡಿ ಸಂಭ್ರಮಾಚರಣೆ ಮಾಡಿದ್ದಾರೆ.ಸರ್ಕಾರಿ ಅತಿಥಿ ಗೃಹದಲ್ಲಿ ಹುಟ್ಟು ಹಬ್ಬದ ಆಚರಣೆ ಮಾಡಿದ್ದಕ್ಕೆ ಸಾರ್ವಜನಿಕರು ಆಕ್ರೋಷ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಕಚೇರಿಯಲ್ಲಿ ಇವರಿಗೆ ಹುಟ್ಟುಹಬ್ಬ ಆಚರಣೆ ಮಾಡಲು ಅನುಮತಿ ಅನುಮತಿ ಕೊಟ್ಟೋರು ಯಾರು ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಮಾಹಿತಿ ಇದ್ದರೂ ಕ್ರಮ ಕೈಗೊಳ್ಳದೇ ಅಧಿಕಾರಿಗಳು ಮೌನ ವಹಿಸಿದ್ರಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಹೀಗಾಗಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಷ ವ್ಯಕ್ತಪಡಿಸಿದ್ದಾರೆ.
