ಮದ್ದೂರು (ಅ.11): ಬಿಜೆಪಿ ಕಾಂಗ್ರೆಸ್‌ ಬೆಂಬಲದೊಂದಿಗೆ ಪ್ರಥಮ ಬಾರಿಗೆ ಟಿಎಪಿಸಿಎಂಎಸ್‌ನಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದೆ. ಮುಂದಿನ ಪುರಸಭೆ ಚುನಾವಣೆಯಲ್ಲೂ ಇದೇ ಫಲಿತಾಂಶ ಪುನಾರಾವರ್ತನೆಯಾಗುತ್ತದೆ ಎಂದು ಮನ್ಮುಲ್‌ ನಿರ್ದೇಶಕ ಎಸ್‌ .ಪಿ.ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. 

ಟಿಎಪಿಸಿಎಂಎಸ್‌ ಚುನಾವಣೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದ ಮಹದೇವು, ರಾಘವ ಅವರನ್ನು ಅಭಿನಂದಿಸಿ ಮಾತನಾಡಿ, ಚುನಾವಣೆಯಲ್ಲಿ ಬಹುಮತವಿಲ್ಲದಿದ್ದರೂ ಜೆಡಿಎಸ್‌ ಅವಕಾಶವಾದಿ ರಾಜಕಾರಣ ಮಾಡಲು ಹುನ್ನಾರ ನಡೆಸಿತ್ತು. ಇದಕ್ಕೆ ತಕ್ಕಪಾಠ ಕಲಿಸಲು ಬಿಜೆಪಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದರು.

'ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ' .

ಮುಂದಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಈಗಿನಿಂದಲೇ ಕಾರ್ಯತಂತ್ರ ರೂಪಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ಮೋರ್ಚಾ ಅಧ್ಯಕ್ಷ ಪಣ್ಣೆದೊಡ್ಡಿ ರಘು, ರೈತಮೋರ್ಚಾ ಅಧ್ಯಕ್ಷ ಶಿವದಾಸ್‌ ಸತೀಶ್‌ , ಎಪಿಎಂಸಿ ಅಧ್ಯಕ್ಷ ಜಿ.ಸಿ.ಮಹೇಂದ್ರ, ಜಿಪಂ ಸದಸ್ಯೆ ಸುಚಿತ್ರ ಮನುಮಾರ್‌ , ಕಾಂಗ್ರೆಸ್‌ ಮುಖಂಡರಾದ ಪಿ.ಸಂದರ್ಶ, ಅರುಣ ಹಾಗೂ ಬಿಜೆಪಿ, ಕಾಂಗ್ರೆಸ್‌ ಬೆಂಬಲಿತ ಸದಸ್ಯರು ಇದ್ದರು.