ಮಾಗಡಿ (ಡಿ.11): ಬಿಜೆಪಿ ಕಾರ್ಯಕರ್ತರೊಬ್ಬರು ವೇದಿಕೆಯಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಾಗಡಿ ಪಟ್ಟಣದಲ್ಲಿ ನಡೆದಿದೆ.

ಶಿವರಾಜು ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಅವರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಪಟ್ಟಣದ ಕೆಂಪೇಗೌಡ ಬಯಲು ರಂಗಮಂದಿರದಲ್ಲಿ ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್‌.ಎಂ.ಕೃಷ್ಣಮೂರ್ತಿ ಅವರು ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥ ನಾರಾ​ಯಣ ಪಾಲ್ಗೊಂಡಿ​ದ್ದರು. 

ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಪಾಸ್: ಇಲ್ಲಿವೆ ಕಾಯ್ದೆಯಲ್ಲಿರುವ 25 ಅಂಶಗಳು ..

ಕಾರ್ಯಕ್ರಮ ಮುಗಿಸಿ, ಅಶ್ವ​ತ್ಥ​ನಾ​ರಾ​ಯಣ ತೆರಳಿದ ನಂತರ ಸುಮಾರು 10.30ರ ಸಮಯದಲ್ಲಿ ವೇದಿಕೆಯ ಮೇಲಿದ್ದ ಬಿಜೆಪಿ ಕಾರ್ಯ​ಕರ್ತ ಶಿವರಾಜು (48) ಕುಸಿದು ಬಿದ್ದಿದ್ದಾರೆ.

 ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿಯೇ ಕೊನೆ​ಯು​ಸಿ​ರೆ​ಳೆ​ದಿ​ದ್ದಾ​ರೆ. ಮೃತ ಶಿವರಾಜು ತಿಪ್ಪಸಂದ್ರ ಹೋಬಳಿಯ ಹೆಬ್ಬಳಲು ಗ್ರಾಮದವರಾಗಿದ್ದು, ಹೋಟೆಲ್ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು, ಇವರಿಗೆ ಕಳೆದ ವರ್ಷ ಹೃದಯ ಶಸ್ತ್ರಚಿಕಿತ್ಸೆಯಾಗಿತ್ತು ಎಂದು ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.