ರಾಜ್ಯಾದ್ಯಂತ ಆರ್‌ಎಸ್‌ಎಸ್‌ ಚಡ್ಡಿ ಸುಡುವ ಅಭಿಯಾನ ನಡೆಸುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿ, ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷರ ನೇತೃತ್ವದಲ್ಲಿ ತುಮಕೂರಿನಲ್ಲಿ ಚಡ್ಡಿ ರವಾನಿಸುವ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ತುಮಕೂರು (ಜೂ.10): ರಾಜ್ಯಾದ್ಯಂತ ಆರ್‌ಎಸ್‌ಎಸ್‌ ಚಡ್ಡಿ ಸುಡುವ ಅಭಿಯಾನ ನಡೆಸುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿ, ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಓಂಕಾರ್‌ ನೇತೃತ್ವದಲ್ಲಿ ತುಮಕೂರಿನಲ್ಲಿ ಚಡ್ಡಿ ರವಾನಿಸುವ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ತುಮಕೂರಿನ ಟೌನ್‌ಹಾಲ್‌ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೇರಿದ್ದ ಬಿಜೆಪಿ ಹಿರಿಯ, ಕಿರಿಯ ಮುಖಂಡರು ಹಾಗೂ ಎಸ್ಸಿ ಮೋರ್ಚಾದ ಪದಾಧಿಕಾರಿಗಳು, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಓಂಕಾರ್‌, ಬಿಜೆಪಿಗೆ ಆರ್‌ಎಸ್‌ಎಸ್‌ ಮಾತೃ ಸಮಾನ. ನನ್ನಂತಹ ಲಕ್ಷಾಂತರ ಜನರನ್ನು ಬೆಳೆಸಿ, ಪಕ್ಷದಲ್ಲಿ ಹಲವು ಹುದ್ದೆಗಳನ್ನು ನೀಡಿದೆ. ಇದರ ಅರಿವಿಲ್ಲದ ಸಿದ್ದರಾಮಯ್ಯ ಆರ್‌ಎಸ್‌ಎಸ್‌ನಲ್ಲಿ ದಲಿತರನ್ನು ಕೀಳಾಗಿ ಕಾಣಲಾಗುತ್ತಿದೆ. ನಿಮ್ಮ ಯೋಗ್ಯತೆ ಇಷ್ಟೇ ಎಂದು ಚಡ್ಡಿ ರವಾನೆ ಆಂದೋಲನದ ನೇತೃತ್ವ ವಹಿಸಿರುವ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡಿರುವುದು ಖಂಡನೀಯ ಎಂದರು.

ಖಾಲಿ ಬ್ಯಾಲೆಟ್ ಪೇಪರ್ ಹಾಕಿದ್ದರೆ ರಾಜಕೀಯದಿಂದ ನಿವೃತ್ತಿ ಹೊಂದುವೆ : Gubbi Srinivas

ಸಿದ್ದರಾಮಯ್ಯ ಅವರು ತಮ್ಮ ಓಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ಮುಸ್ಲಿಂರನ್ನು ಓಲೈಸಿ, ದಲಿತರು, ಹಿಂದುಳಿದವರನ್ನು ಹೀನಾಯವಾಗಿ ಕಾಣುತ್ತಿದ್ದಾರೆ. ಇದು ಸರಿಯಲ್ಲ. ನೀವು ಮುಸ್ಲಿಮರನ್ನು ಓಲೈಸುವ ಕೆಲಸವನ್ನು ಮುಂದುವರೆಸಿ, ಆದರೆ ಆರ್‌ಎಸ್‌ಎಸ್‌ ತಂಟೆಗೆ ಬರಬೇಡಿ, ಇದೇ ಚಾಳಿಯನ್ನು ಮುಂದುವರೆಸಿದರೆ ನಿಮ್ಮಗೆ ಕಂಡಲ್ಲಿ ಘೇರಾವ್‌ ಹಾಕುವ ಪ್ರತಿಭಟನೆಯನ್ನು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಕಾರ್ಯಕರ್ತರು ಮಾಡಬೇಕಾಗುತ್ತದೆ ಎಂದು ಓಂಕಾರ್‌ ತಿಳಿಸಿದರು.

ಅಪಪ್ರಚಾರ ಸರಿಯಲ್ಲ: ಬಿಜೆಪಿ ಉಪಾಧ್ಯಕ್ಷ ಶಿವಪ್ರಸಾದ್‌ ಮಾತನಾಡಿ, ಕಳೆದ ನಾಲ್ಕೈದು ವರ್ಷಗಳಲ್ಲಿ ಬಿಜೆಪಿಯ ಜನಪರತೆಯನ್ನು ನೋಡಿ, ಸಿದ್ದರಾಮಯ್ಯರ ಮಾತಿನ ದಾಟಿ ಮತ್ತು ಕಾರ್ಯವೈಖರಿ ಬದಲಾಗಿದೆ. ನೀವು ಅಧಿಕಾರಕ್ಕಾಗಿ ಏನು ಮಾಡಲು ಹೇಸುವವರಲ್ಲ. ರಾಜಕೀಯ ಜೀವನ ನೀಡಿದ ಜೆಡಿಎಸ್‌ಗೆ ದ್ರೋಹ ಬಗೆದು, ಕಾಂಗ್ರೆಸ್‌ನಲ್ಲಿ ಸಿಎಂ ಆಗಿ, ಈಗ ಅಲ್ಲಿಯೂ ಡಿಕೆಶಿ, ಡಾ.ಜಿ.ಪರಮೇಶ್ವರ್‌ ಅಂತಹವರಿಗೆ ದ್ರೋಹ ಬಗೆಯಲು ಹೊರಟಿದ್ದೀರಿ. ಅಧಿಕಾರಕ್ಕಾಗಿ ಎಂತಹ ಕೆಳಮಟ್ಟಕ್ಕೂ ಇಳಿಯಲು ಸಿದ್ದ ಎಂಬುದನ್ನು ನಿಮ್ಮ ರಾಜಕೀಯ ನಡೆಗಳೇ ಹೇಳುತ್ತವೆ. 

ವಿಧಾನಸಭೆಯಲ್ಲಿ ಮಾತನಾಡುವಾಗ ನಿಮ್ಮ ಪಂಜೆ ಉದುರಿದಾಗ, ನಿಮ್ಮ ಮಾನ ಕಾಪಾಡಿದ್ದು ಇದೇ ಚಡ್ಡಿ, ಅಂತಹ ಚಡ್ಡಿಯ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದರು. ಪ್ರತಿಭಟನೆಯಲ್ಲಿ ಮುಖಂಡರಾದ ಎಂ.ಬಿ.ನಂದೀಶ್‌, ಪಿ.ಲೋಕೇಶ್‌, ನರಸಿಂಹಮೂರ್ತಿ,ವೈ.ಎಚ್‌.ಹುಚ್ಚಯ್ಯ, ರಮೇಶ್‌, ಎಚ್‌.ಎನ್‌.ಚಂದ್ರಶೇಖರ್‌,ಕೆ.ಪಿ.ಮಹೇಶ್‌, ವರದಯ್ಯ, ಹನುಮಂತರಾಜು, ಆಟೋ ಯಡಿಯೂರಪ್ಪ, ಶಬ್ಬೀರ್‌, ಗಣೇಶ್‌.ಜಿ. ಪ್ರಸಾದ್‌, ಎಂ.ಗೋಪಿ ಇತರರು ಇದ್ದರು.

ಜೆಡಿಎಸ್‌ಗೇ ಮತ ಹಾಕ್ಬೇಕು ಅಂತ ಅಂದ್ಕೊಂಡಿದ್ದೇನೆ, ಕೊನೆ ಕ್ಷಣದಲ್ಲಿ ಏನ್‌ ಬೇಕಾದ್ರೂ ಆಗಬಹುದು: ಗುಬ್ಬಿ ಶಾಸಕ

ಸಿದ್ದರಾಮಯ್ಯರ ಅಸಂಬದ್ಧ ಹೇಳಿಕೆ ಸರಿಯಲ್ಲ: ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್‌.ಡಿ.ಭೈರಪ್ಪ ಮಾತನಾಡಿ, ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿಯ ಆಡಳಿತದಲ್ಲಿ ಫಲಾನುಭವಿಗಳಾಗಿರುವ ಲಕ್ಷಾಂತರ ಜನರು ನಮ್ಮ ಸಮಾವೇಶಗಳಲ್ಲಿ ಸೇರುತ್ತಿರುವುದನ್ನು ನೋಡಿ ಸಿದ್ದರಾಮಯ್ಯಗೆ ಸಹಿಸಲಾಗದೆ ಈ ರೀತಿಯ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದ ಸ್ಥಿತಿ ಎನು ಎಂಬುದನ್ನು ನೀವು ಅರ್ಥಮಾಡಿಕೊಳ್ಳಿ. ಕಳೆದ 10 ವರ್ಷದ ಹಿಂದೆ ಹುಟ್ಟಿದ ಪಕ್ಷವೂ 2 ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. 138 ವರ್ಷದ ಪಕ್ಷವಾಗಿರುವ ಕಾಂಗ್ರೆಸ್‌ ಸಹ 2 ರಾಜ್ಯಗಳಲ್ಲಿ ಅಧಿಕಾರ ಹಿಡಿದಿದೆ. ನಿಮ್ಮ ಹೇಳಿಕೆಗಳು ಹೀಗೆಯೇ ಮುಂದುವರೆದರೆ ಗಾಂಧಿ ಕಂಡ ಕಾಂಗ್ರೆಸ್‌ ಮುಕ್ತ ಭಾರತಕ್ಕೆ ನೀವೆ ನಾಂದಿ ಹಾಡಿದಂತಾಗುತ್ತದೆ ಎಂದರು.