ಹಾಸನ(ಜು.24): ಬಿಜೆಪಿ ಜಗತ್ತಿನಲ್ಲೇ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜು ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸದಸ್ವತ್ವ ಅಭಿಯಾನದ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಕರೆ ಹಿನ್ನೆಲೆಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ರಾಜ್ಯದಲ್ಲಿ ಚಾಲನೆ ನೀಡಲಾಗಿದೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ ಮತ್ತು ಮಂಡಲಕ್ಕೆ ಸಂಚಾಲಕರನ್ನು ನೇಮಿಸಲಾಗುತ್ತಿದೆ ಎಂದರು.

ಸದಸ್ಯತ್ವ ಅಭಿಯಾನ:

ಪ್ರಧಾನಿ ಮೋದಿ ಅವರ ಆಡಳಿತ ಮೆಚ್ಚಿದ ಜನತೆ ಈಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ದೇಶವನ್ನು ಅಭಿವೃದ್ಧಿ ಪಥದತ್ತ ಮುನ್ನೆಡಿಸಿಕೊಂಡು ಹೋಗುತ್ತಾ, ಯುವಸಮೂಹ ಮುಖ್ಯವಾಹಿನಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಹೆಜ್ಜೆ ಇಡಲಾಗುತ್ತಿದೆ. ಆ ನಿಟ್ಟಿನಲ್ಲಿ ಸದಸ್ಯತ್ವ ಅಭಿಯಾನ ಮಾಡುತ್ತಿರುವುದಾಗಿ ತಿಳಿಸಿದರು.

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶಿವರಾಜ್‌ ಚೌಹಾಣ್‌ ಬಾಸ್‌

ಕರ್ನಾಟಕದಲ್ಲಿ ಈಗಾಗಲೇ 12ಲಕ್ಷ ಸದಸ್ಯತ್ವ:

ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಕರುಣಾಕರ್‌ ಮಾತನಾಡಿ, ದೇಶದ್ಯಾಂತ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಾರಂಭಿಸಿದೆ. ಆಗಸ್ಟ್‌ 6ರವರೆಗೂ ಅಭಿಯಾನ ನಡೆಯಲಿದೆ. ರಾಜ್ಯದಲ್ಲಿ 15 ಲಕ್ಷಕ್ಕಿಂತ ಹೆಚ್ಚಿನ ಯುವಕರು ಯುವ ಮೋರ್ಚಾ ಸದಸ್ಯರಾಗಲಿದ್ದಾರೆ. ಕಾಲೇಜು ವಿದ್ಯಾರ್ಥಿಗಳನ್ನು ಹಾಸ್ಟೆಲ್‌, ಬಸ್‌ನಿಲ್ದಾಣ ಇತರೆ ಜನ ಸೇರುವ ಪ್ರದೇಶದಲ್ಲಿಯುವ ಮೋರ್ಚಾಕ್ಕೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಅಭಿಯಾನ ನಡೆಸಲಾಗುತ್ತಿದೆ. ಎಲ್ಲಾ ವಿಧಾನಸಭಾ ಕ್ಷೇತ್ರದ ಮಂಡಳಿಗಳಿಗೆ ಸಂಚಾಲಕರು ಮತ್ತು ಸಹ ಸಂಚಾಲಕರನ್ನು ನೇಮಿಸಲಾಗುತ್ತಿದೆ. ಈಗಾಗಲೇ ಕರ್ನಾಟಕದಲ್ಲಿ 12 ಲಕ್ಷ ಜನ ಸದಸ್ಯತ್ವ ಪಡೆದಿದ್ದಾರೆ. ಇವರಲ್ಲಿ ಶೇ.50 ರಷ್ಟುಯುವಕರೇ ಇದ್ದಾರೆ ಎಂದರು.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಚ್‌.ಎನ್‌. ನಾಗೇಶ್‌, ಮಾಜಿ ಅಧ್ಯಕ್ಷ ಎಚ್‌.ಎನ್‌. ನಾಗೇಶ್‌, ಉಪಾಧ್ಯಕ್ಷ ಲೋಕೇಶ್‌, ಪ್ರೇಮ್‌ ಕುಮಾರ್‌ ಇತರರು ಇದ್ದರು.