ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ 18ನೇ ಆರೋಪಿ ಝಾಕೀರ್ ಸವಣೂರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಹತ್ಯೆಯ ಸಂಚಿನಲ್ಲಿ ನೇರವಾಗಿ ಭಾಗಿಯಾಗಿದ್ದ ಈತನನ್ನು 2022ರ ಜುಲೈನಲ್ಲಿ ಬಂಧಿಸಲಾಗಿತ್ತು.
ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹಂತಕರ ಪೈಕಿ ಮತ್ತೋರ್ವ ಪ್ರಮುಖ ಆರೋಪಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಝಾಕೀರ್ ಸವಣೂರು (35) ಜಾಮೀನು ಪಡೆದ ಆರೋಪಿ. ಈತ ಪ್ರಕರಣದ 18ನೇ ಆರೋಪಿಯಾಗಿದ್ದ.
ತನಿಖೆ ಆರಂಭದಲ್ಲೇ ಬಂಧಿಸಲ್ಪಟ್ಟ ಆರೋಪಿ
ಪ್ರವೀಣ್ ನೆಟ್ಟಾರ್ ಹತ್ಯೆ ಸಂಚಿನಲ್ಲಿ ನೇರವಾಗಿ ಭಾಗಿಯಾದವರಲ್ಲಿ ಈತನೂ ಒಬ್ಬನಾಗಿದ್ದ. ಈ ಪ್ರಕರಣದಲ್ಲಿ ಆರಂಭದಲ್ಲೇ ಬಂಧಿಸಲ್ಪಟ್ಟ ಇಬ್ಬರು ಪ್ರಮುಖ ಶಂಕಿತರಲ್ಲಿ ಝಾಕೀರ್ ಸವಣೂರು ಕೂಡ ಒಬ್ಬನು. ಈತನನ್ನು 2022 ಜು.28 ರಂದು ಬೆಳ್ಳಾರೆಯ ಶಫೀಕ್‌ನೊಂದಿಗೆ ಪೊಲೀಸರು ವಶಕ್ಕೆ ಪಡೆದಿದ್ದರು.
ಈ ಹಿಂದೆ ಪ್ರಕರಣದ 26ನೇ ಆರೋಪಿಯಾಗಿರುವ ಸೋಮವಾರ ಪೇಟೆಯ ಎಚ್.ವೈ. ರಿಯಾಜ್ ಎಂಬಾತನಿಗೆ ಜಾಮೀನು ಲಭಿಸಿತ್ತು. ಈತ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ್ದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದ.
ಇದನ್ನೂ ಓದಿ: ಬಿಜೆಪಿ ಮುಖಂಡನ ಪುತ್ರನಿಂದ ಪುತ್ತೂರು ಯುವತಿಗೆ ವಂಚನೆ: ರಾಜೀ ಸಂಧಾನಕ್ಕೆ ಪ್ರಸ್ತಾಪ
ಏನಿದು ಪ್ರಕರಣ?
2022 ಜುಲೈ 26 ರಂದು ಬೆಳ್ಳಾರೆಯ ಅಕ್ಷಯ್ ಚಿಕನ್ ಸೆಂಟರ್ ಎದುರು ಪ್ರವೀಣ್ ನೆಟ್ಟಾರ್ ಅವರನ್ನು ದುಷ್ಕರ್ಮಿಗಳು ಮಾರಕಾಯುಧದಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣವನ್ನು ಎನ್ ಐಎ ಗೆ ವಹಿಸಲಾಗಿತ್ತು. 26 ಮಂದಿಯನ್ನು ತನಿಖಾಧಿಕಾರಿಗಳು ಬಂಧಿಸಿದ್ದರು.
ಇದನ್ನೂ ಓದಿ: ಮೀನಕಳಿಯದಲ್ಲಿ ಕಡಲ್ಕೊರೆತ ತಡೆಗೆ ಸ್ಯಾಂಡ್‌ಬ್ಯಾಗ್; ಮರವಂತೆ ಮಾದರಿ ಬ್ರೇಕ್ ವಾಟರ್‌ಗೆ ಒತ್ತಾಯ


