ದೇಶ ರಕ್ಷಣೆಗಾಗಿ ರಾಹುಲ್ ಗಾಂಧಿಯಿಂದ ಭಾರತ್ ಜೋಡೋ ಯಾತ್ರೆ: ಬಿ.ಕೆ.ಹರಿಪ್ರಸಾದ್
ಸುಮಾರು 120 ವರ್ಷಗಳ ಕಾಲ ರಾಷ್ಟ್ರದ ಬಡಜನರ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ದೀನದಲಿತ, ಶೋಷಿತರ ಪರವಾಗಿ ಕಾರ್ಯನಿರ್ವಹಿಸಿದ ಕಾಂಗ್ರೆಸ್ ಪಕ್ಷ ಅಧಿಕಾರದಿಂದ ವಂಚಿತವಾಗಿದೆ.
ಚಳ್ಳಕೆರೆ (ಸೆ.20): ಸುಮಾರು 120 ವರ್ಷಗಳ ಕಾಲ ರಾಷ್ಟ್ರದ ಬಡಜನರ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ದೀನದಲಿತ, ಶೋಷಿತರ ಪರವಾಗಿ ಕಾರ್ಯನಿರ್ವಹಿಸಿದ ಕಾಂಗ್ರೆಸ್ ಪಕ್ಷ ಅಧಿಕಾರದಿಂದ ವಂಚಿತವಾಗಿದೆ. ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರದತ್ತ ತರಲು ಎಲ್ಲರೂ ಶ್ರಮವಹಿಸಬೇಕಿದೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಕೊಂದ ಸಂತತಿಯವರು ದೇಶವನ್ನು ಆಳುತ್ತಿದ್ದು, ಅವರಿಂದ ದೇಶವನ್ನು ರಕ್ಷಿಸಲು ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಾರೆಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ತಿಳಿಸಿದರು.
ಭಾನುವಾರ ಸಂಜೆ ಶಾಸಕ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅ. 11ರಿಂದ 17ರ ತನಕ ಭಾರತ್ ಜೋಡೋ ಯಾತ್ರೆ ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದೆ. ಜಿಲ್ಲೆಯ ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು ಮೂಲಕ ಬಳ್ಳಾರಿ ಜಿಲ್ಲೆಗೆ ತೆರಳಿದ್ದು, ಭಾರತ್ ಜೋಡೋ ಯಾತ್ರೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಶ್ರಮ ವಹಿಸಿ ಎಂದರು. ಎಲ್ಲರಿಗೂ ಸಮಾನತೆಯ ಬದುಕು ರೂಪಿಸಲು ಸಂವಿಧಾನಕ್ಕೆ ಒದಗಬಹುದಾದ ಅಪಾಯವನ್ನು ತಪ್ಪಿಸಲು, ಮತಿಯ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಲು ಈ ಯಾತ್ರೆ ಕೈಗೊಂಡಿದ್ದು, ಕಾಂಗ್ರೆಸ್ ಪಕ್ಷದ ಎಲ್ಲರೂ ಈ ಯಾತ್ರೆಯನ್ನು ಯಶಸ್ವಿಗೊಳಿಸಿದರೆ ಮಾತ್ರ ಮುಂದಿನ ಭವಿಷ್ಯದ ಜನಾಂಗ ಉತ್ತಮವಾಗಿ ಬಾಳಲು ಸಾಧ್ಯ ಎಂದು ಹೇಳಿದರು.
ಪಿಎಸ್‌ಐ ಕೇಸಲ್ಲಿ ಆರಗ ಕೂಡ ಜೈಲಿಗೆ ಹೋಗ್ತಾರೆ: ಹರಿಪ್ರಸಾದ್
ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಚಿತ್ರದುರ್ಗ ಜಿಲ್ಲೆಗೆ ಆಗಮಿಸುವ ಭಾರತ್ ಜೋಡೋ ಯಾತ್ರೆ ಯಶಸ್ವಿಗೊಳಿಸಲು ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಸಾಗುವ ಯಾತ್ರೆಗೆ ರಾಜ್ಯದ ಬೇರೆ, ಬೇರೆ ಕಡೆಯಿಂದ ಆಗಮಿಸುವ ಎಲ್ಲಾ ಕಾರ್ಯಕರ್ತರಿಗೆ ಸೌಲಭ್ಯ ಒದಗಿಸಲಾಗುವುದು. ಯಾತ್ರೆ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಪಕ್ಷದ ಎಲ್ಲಾ ಹಂತದ ಕಾರ್ಯಕರ್ತರಿಗೆ ಮನವಿ ಮಾಡಿದ್ದು, ಪ್ರತಿಯೊಬ್ಬ ಕಾರ್ಯಕರ್ತರನೂ ಯಾತ್ರೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುತ್ತಾರೆ ಎಂದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ. ಸುಧಾಕರ್, ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ, ಕೆಪಿಸಿಸಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧು ಬಂಗಾರಪ್ಪ, ಮಾಜಿ ಸಚಿವ ಎಚ್.ಆಂಜನೇಯ, ಗೀತಾ ನಂದಿನಿಗೌಡ, ಕೆ.ಸಿ.ವೇಣುಗೋಪಾಲ್, ಮಂಜಪ್ಪ, ಡಾ.ಯೋಗೇಶ್‌ಬಾಬು, ತಾಜ್‌ಪೀರ್, ಡಿ.ಎನ್ ಮೈಲಾರಪ್ಪ ಮುಂತಾದವರು ಇದ್ದರು.
ಬೆಂಗಳೂರು ಸುಧಾರಣೆಗೆ ಫುಲ್‌ಟೈಮ್ ಉಸ್ತುವಾರಿ ಸಚಿವ ಬೇಕು: ಬೆಂಗಳೂರು ಸುಧಾರಣೆಗೆ ಪಾರ್ಚ್‌ಟೈಮ್ ಮುಖ್ಯಮಂತ್ರಿಗಳು ಸಾಕಾಗುವುದಿಲ್ಲ. ಶೀಘ್ರದಲ್ಲಿಯೇ ಸಮರ್ಥ ಉಸ್ತುವಾರಿ ಸಚಿವರೊಬ್ಬರನ್ನು ನೇಮಿಸಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದರು. ಇತ್ತೀಚೆಗೆ ಸುರಿದ ಮಳೆಯಿಂದ ಬೆಂಗಳೂರು ಆಗಿರುವ ಹಾನಿ ಬಗ್ಗೆ ವಿಧಾನಪರಿಷತ್ತನಲ್ಲಿ ಮಾತನಾಡಿದ ಅವರು, ‘ಬೆಂಗಳೂರು ಸಿಲಿಕಾನ್ ಸಿಟಿಯಾಗಿ ವಿಶ್ವವಿಖ್ಯಾತಿ ಪಡೆದಿದ್ದು, ತೆರಿಗೆ ಸಂಗ್ರಹದಲ್ಲಿ ಆರನೇ ಸ್ಥಾನದಲ್ಲಿದೆ. ಸದ್ಯ ನೆರೆಯಿಂದ ಬ್ರ್ಯಾಂಡ್ ಬೆಂಗಳೂರು ಹೆಸರಿಗೆ ಧಕ್ಕೆ ಬಂದಿದೆ.
ಶಾಲೆಗಳಲ್ಲಿ ಡಿಸೆಂಬರ್‌ನಿಂದ ಭಗವದ್ಗೀತೆ ಪಾಠ: ಸಚಿವ ನಾಗೇಶ್
ಈ ಕುರಿತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರೇ ಹೇಳಿಕೆ ನೀಡಿದ್ದಾರೆ. ಸೂಕ್ತ ಉಸ್ತುವಾರಿ ಸಚಿವರ ಕೊರತೆಯೇ ಈ ಸ್ಥಿತಿಗೆ ಕಾರಣವಾಗಿದೆ. ಮುಖ್ಯಮಂತ್ರಿಗಳೇ ಬೆಂಗಳೂರಿನ ಉಸ್ತುವಾರಿ ವಹಿಸಿಕೊಂಡಿರುವುದನ್ನು ಮೊಟ್ಟಮೊದಲ ಬಾರಿಗೆ ನೋಡುತ್ತಿದ್ದೇವೆ. ಮೂಲಸೌಕರ್ಯ ವ್ಯವಸ್ಥೆ ಕುಸಿದಿದ್ದು, ಸದ್ಯ ಬೆಂಗಳೂರು ಅನಾಥವಾಗಿದೆ. ಈ ಮಹಾನಗರ ಸುಧಾರಣೆಗೆ ಪಾರ್ಚ್‌ಟೈಮ್ ಮುಖ್ಯಮಂತ್ರಿಗಳು ಸಾಕಾಗುವುದಿಲ್ಲ. ಇನ್ನಾದರು ಉಸ್ತುವಾರಿಯನ್ನು ಸಮರ್ಥರಿಗೆ ಹಂಚಿಕೆ ಮಾಡಬೇಕು ಎಂದರು.