ಬೆಂಗಳೂರು: ಫ್ಲೈಓವರ್ನಲ್ಲಿ ಬಿಎಂಟಿಸಿ ಬಸ್ ಪಲ್ಟಿ..!
ಘಟನೆ ವೇಳೆ ಬಸ್‌ನಲ್ಲಿ ಚಾಲನಾ ಸಿಬ್ಬಂದಿ ಹಾಗೂ 11 ಮಂದಿ ಪ್ರಯಾಣಿಕರು ಇದ್ದರು. ಚಾಲಕ ಮುನ್ನಾವರ್ ಷರೀಫ್, ಮಹಿಳೆ ಸೇರಿದಂತೆ ಐದಾರು ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ಉಳಿದಂತೆ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಬೆಂಗಳೂರು(ಆ.30): ಬೆಂಗಳೂರು-ಬಳ್ಳಾರಿ ರಸ್ತೆಯ ಬಿಡಿಎ ಮೇಲ್ಸೇತುವೆ ಬಳಿ ಬಿಎಂಟಿಸಿ ವಾಯುವಜ್ರ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಉರುಳಿ ರಸ್ತೆಗೆ ಬಿದ್ದಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಘಟನೆ ವೇಳೆ ಬಸ್‌ನಲ್ಲಿ ಚಾಲನಾ ಸಿಬ್ಬಂದಿ ಹಾಗೂ 11 ಮಂದಿ ಪ್ರಯಾಣಿಕರು ಇದ್ದರು. ಚಾಲಕ ಮುನ್ನಾವರ್ ಷರೀಫ್, ಮಹಿಳೆ ಸೇರಿದಂತೆ ಐದಾರು ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ಉಳಿದಂತೆ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಸಾತನೂರು ಬಳಿ ಕೆಎಸ್‌ಆರ್‌ಟಿಸಿ ಬಸ್-ಕಾರು ನಡುವೆ ಭೀಕರ ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು
ರಾತ್ರಿ 11.30ರ ಸುಮಾರಿಗೆ ಬಿಎಂಟಿಸಿಯ ವಾಯು ವಜ್ರ ಬಸ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ತೆರಳುತಿತ್ತು. ಈ ವೇಳೆ ಮಾರ್ಗ ಮಧ್ಯೆ ಬಿಡಿಎ ಮೇಲ್ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್, ಮೇಲ್ಸೇತುವೆ ಆರಂಭದ ಎಡಭಾಗದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಉರುಳಿ ಬಿದ್ದಿದೆ. ಈ ವೇಳೆ ಸ್ಥಳೀಯರು ಹಾಗೂ ವಾಹನ ಸವಾರರು ನೆರವಿಗೆ ಧಾವಿಸಿ, ಬಸ್‌ನ ಮುಂಭಾಗದ ಗಾಜು ಒಡೆದು ಚಾಲನಾ ಸಿಬ್ಬಂದಿ ಹಾಗೂ ಪ್ರಯಾಣಿಕರನ್ನು ಹೊರಗೆ ಕರೆತಂದಿದ್ದಾರೆ.
ಘಟನೆಯಲ್ಲಿ ಚಾಲಕ ಹಾಗೂ ಐದಾರು ಪ್ರಯಾಣಿಕರಿಗೆ ಸಣ್ಣಪುಟ್ಟಗಾಯಗಳಾಗಿದ್ದವು. ಸಮೀಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಈ ಸಂಬಂಧ ಸದಾಶಿವನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.