ಬೆಂಗಳೂರು(ಜು.22): ರಾಜಧಾನಿಯಲ್ಲಿ ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯುವ ಆ್ಯಂಬುಲೆನ್ಸ್‌ಗಳಿಗೆ ಚಾಲಕರ ಕೊರತೆ ಉಂಟಾದರೆ, ಬಿಎಂಟಿಸಿ ಚಾಲಕರನ್ನು ಆ ಕಾರ್ಯಕ್ಕೆ ಬಳಸಿಕೊಳ್ಳಲು ಬಿಬಿಎಂಪಿ ಚಿಂತಿಸಿದ್ದು, ಈ ಸಂಬಂಧ ಬಿಎಂಟಿಸಿಯ ಉನ್ನತಾಧಿಕಾರಿಗಳೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ.

ರಾಜಧಾನಿಯಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಆಸ್ಪತ್ರೆಗಳಿಗೆ ಸಾಗಿಸಲು ಬಿಬಿಎಂಪಿ ಸರ್ಕಾರಿ ಆ್ಯಂಬುಲೆನ್ಸ್‌ಗಳ ಜೊತೆಗೆ ಖಾಸಗಿ ಆ್ಯಂಬುಲೆನ್ಸ್‌ ಹಾಗೂ ಟೆಂಪೋ ಟ್ರಾವೆಲರ್‌ಗಳನ್ನು ಬಾಡಿಗೆ ಪಡೆಯಲು ಮುಂದಾಗಿದೆ.

ಮೊದಲ ಪುಟದಲ್ಲಿ ಮಾಸ್ಕ್, ಶ್ರೀನಗರ ದಿನ ಪತ್ರಿಕೆಯ ವಿಶೇಷ ಪ್ರಯತ್ನಕ್ಕೆ ಮೆಚ್ಚುಗೆ!

ಸದ್ಯಕ್ಕೆ ಆ್ಯಂಬುಲೆನ್ಸ್‌ ಚಾಲಕರ ಕೊರತೆ ಇಲ್ಲ. ಮುಂದಿನ ದಿನಗಳಲ್ಲಿ ಕೊರತೆಯಾದರೆ ಆ ಕಾರ್ಯಕ್ಕೆ ಬಿಎಂಟಿಸಿ ಚಾಲಕರನ್ನು ಬಳಸಿಕೊಳ್ಳುವ ಉದ್ದೇಶದಿಂದ ಬಿಎಂಟಿಸಿಯೊಂದಿಗೆ ಮಾತುಕತೆ ನಡೆಸಲಾಗಿದೆ.

ಬಿಎಂಟಿಸಿ ಚಾಲಕರು ಈ ಕಾರ್ಯದಲ್ಲಿ ಕೈಜೋಡಿಸಲು ಸಿದ್ಧರಿದ್ದಾರೆ. ಆದರೆ, ಸುರಕ್ಷಿತ ಪರಿಕರಗಳನ್ನು ನೀಡಬೇಕು. ಅದರಲ್ಲೂ ಮುಖ್ಯವಾಗಿ ಪಿಪಿಇ ಕಿಟ್‌ ನೀಡಬೇಕು. ಒಂದು ವೇಳೆ ತಮಗೆ ಸೋಂಕು ತಗುಲಿದರೆ ಅಗತ್ಯ ಚಿಕಿತ್ಸೆ ಕೊಡಿಸಬೇಕು ಮತ್ತು ತಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.