ಬೆಂಗಳೂರು:(ಸೆ.20) ಇನ್ಮುಂದೆ ಪ್ರಯಾಣಿಕರು ಬಿಎಂಟಿಸಿ ಬಸ್‌ಗಳಲ್ಲಿ ಮೊಬೈಲ್‌ನಲ್ಲಿ ಲೌಡ್‌ ಸ್ಪೀಕರ್‌ನಲ್ಲಿ ಹಾಡು ಕೇಳುವಂತಿಲ್ಲ, ಹೌದು, ಬಸ್‌ಗಳಲ್ಲಿ ಮೊಬೈಲ್‌ನಲ್ಲಿ ಲೌಡ್‌ ಸ್ಪೀಕರ್‌ನಲ್ಲಿ ಹಾಡು ಕೇಳುವುದನ್ನು ನಿಷೇಧಿಸಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಗುರುವಾರ ಸುತ್ತೋಲೆ ಹೊರಡಿಸಲಾಗಿದೆ.

ನಾಲ್ವರು ಸಿಎಂಗಳ 62 ಸಿಟಿ ರೌಂಡ್ಸ್‌ಗೆ ಒಬ್ಬನೇ ಚಾಲಕ!

ಪ್ರಯಾಣಿಕರು ಬಸ್‌ಗಳಲ್ಲಿ ಪ್ರಯಾಣಿಸುವಾಗ ಮೊಬೈಲ್‌ಗಳ ಲೌಡ್‌ ಸ್ಪೀಕರ್‌ ಆನ್‌ ಮಾಡಿ ಹಾಡುಗಳನ್ನು ಕೇಳುವುದರಿಂದ ಶಬ್ದ ಮಾಲಿನ್ಯವಾಗುತ್ತಿದೆ. ಅಲ್ಲದೆ, ಸಹ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಇದು ಮೋಟಾರು ವಾಹನ ನಿಯಮ ಉಲ್ಲಂಘನೆಯಾಗುತ್ತದೆ. ಹೀಗಾಗಿ ಇನ್ಮುಂದೆ ಪ್ರಯಾಣದ ವೇಳೆ ಲೌಡ್‌ ಸ್ಪೀಕರ್‌ ಹಾಕುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ಚಾಲಕ ಮತ್ತು ನಿರ್ವಾಹಕರು ಇನ್ಮುಂದೆ ಬಸ್‌ಗಳಲ್ಲಿ ಲೌಡ್‌ ಸ್ಪೀಕರ್‌ ನಿರ್ಬಂಧದ ಬಗ್ಗೆ ಪ್ರಯಾಣಿಕರಿಗೆ ತಿಳಿವಳಿಕೆ ನೀಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ದಂಡಕ್ಕಿಂತ ಅಗ್ಗ: ಸ್ವಂತ ವಾಹನ ಬಿಟ್ಟು ಟ್ಯಾಕ್ಸಿ, ಬಿಎಂಟಿಸಿ ಬಸ್‌ಗಳಿಗೆ ಮೊರೆ?

ಬಸ್‌ಗಳಲ್ಲಿ ಮೊಬೈಲ್‌ ಲೌಡ್‌ ಸ್ಪೀಕರ್‌ ಆನ್‌ ಮಾಡಿ ಹಾಡು ಕೇಳುವುದರಿಂದ ಶಬ್ದ ಮಾಲಿನ್ಯದ ಜತೆಗೆ ಇತರೆ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಲೌಡ್‌ ಸ್ಪೀಕರ್‌ ನಿಷೇಧಿಸಿ ಸುತ್ತೋಲೆ ಹೊರಡಿಸಿದ್ದಾರೆ.