ಯಾದಗಿರಿ(ಮಾ.10): ಟೈರ್ ಸುಡುವ ಸ್ಟಿಮ್ ಬಾಯ್ಲರ್ ಸ್ಫೋಟಗೊಂಡ ಪರಿಣಾಮ 8 ಜನರಿಗೆ ಗಾಯವಾದ ಘಟನೆ ತಾಲೂಕಿನ ಕಡೆಚೂರ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ಇಂದು(ಮಂಗಳವಾರ) ನಡೆದಿದೆ. 

ಸ್ಟಿಮ್ ಬಾಯ್ಲರ್ ಎಸ್.ಬಿ ಕಂಪನಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ. ಈ ಕಂಪನಿಯಲ್ಲಿ ಟೈರ್ ಸುಟ್ಟು ಆಯಿಲ್ ತೆಗೆಯಲಾಗುತ್ತದೆ. ಕಳೆದ 15 ದಿನಗಳ ಹಿಂದಷ್ಟೇ ಕಂಪನಿ ಆರಂಭವಾಗಿತ್ತು ಎಂದು ತಿಳಿದು ಬಂದಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಸ್ಟಿಮ್ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ನಾಲ್ವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಗಾಯಾಳುಗಳನ್ನ ರಾಯಚೂರನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಸೈದಾಪುರ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.