ಮೋದಿ ಪದಗ್ರಹಣ ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿದ ಐವರು ಮುಸ್ಲಿಂ ಆರೋಪಿಗಳ ಬಂಧನ
ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಪದಗ್ರಹಣ ಸ್ವೀಕಾರದ ನಂತರ ಮಂಗಳೂರಿನ ಬೋಳಿಯಾರುನಲ್ಲಿ ವಿಜಯೋತ್ಸವದ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿದ ಐವರು ಮುಸ್ಲಿಂ ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ (ಜೂ.10): ದಕ್ಷಿಣ ಕನ್ನಡದ ಬೋಳಿಯಾರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗುತ್ತಾ ವಿಜಯೋತ್ಸವ ಆಚರಣೆ ಮಾಡಿದ್ದಕ್ಕಾಗಿ ಇಬ್ಬರಿಗೆ ಚೂರಿ ಇರಿದ ಮುಸ್ಲಿಂ ಗುಂಪಿನ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ವೇಳೆ ರಾಜ್ಯದ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯ ಬೋಳಿಯಾರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡುತ್ತಾ ಭಾರತ ಮಾತಾಕಿ ಜೈ ಎಂದು ಘೋಷಣೆ ಕೂಗುತ್ತಾ ಬೈಕ್‌ನಲ್ಲಿ ಹೋಗಿದ್ದಾರೆ. ಅವರನ್ನು ಹಿಂಬಾಲಿಸಿಕೊಂಡು ಸುಮಾರು 20-25 ಜನರ ಮುಸ್ಲಿಮರ ಗುಂಪು ಬೆನ್ನಟ್ಟಿ ಇಬ್ಬರಿಗೆ ಚೂರಿ ಇರಿದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಘಟನೆ ಬೆನ್ನಲ್ಲಿಯೇ ಸಿಸಿಟಿವಿ ಕ್ಯಾಮೆರಾ ಅಧರಿಸಿ ಕೊಣಾಜೆ ಪೊಲೀಸರು ಐವರು ಮುಸ್ಲಿಂ ಆರೋಪಿಗಳನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ: ಮೋದಿ ಪದಗ್ರಹಣ. ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ
ಕೊಣಾಜೆ ಠಾಣೆ ಪೊಲೀಸರು ಶಾಕೀರ್(28), ಅಬ್ದುಲ್ ರಜಾಕ್(40), ಅಬೂಬಕ್ಕರ್ ಸಿದ್ದಿಕ್ (35), ಸವಾದ್(18) ಹಾಗೂ ಹಫೀಝ್ (24) ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಣಾಜೆ ಠಾಣಾ ವ್ಯಾಪ್ತಿಯ ಬೊಳಿಯಾರ್ ಬಾರ್‌ನ ಮುಂಭಾಗದಲ್ಲಿ ಅಳವಡಿಕೆ ಮಾಡಿದ್ದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಈ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಈ ಘಟನೆ ಸಂಬಂಧ ಇನ್ನೂ ಹಲವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಘಟನೆಯ ಹಿನ್ನೆಲೆಯೇನು?
ಭಾನುವಾರ ಸಂಜೆ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪದಗ್ರಹಣ ಸ್ವೀಕರಿಸಿದರು. ಇದಾದ ನಂತರ ರಾಜ್ಯದ ಐವರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ದೇಶದಲ್ಲಿ ಬಿಜೆಪಿ ಸರ್ಕಾರ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಖುಷಿಯಲ್ಲಿ ಬಿಜೆಪಿಯ ಮೂವರು ಕಾರ್ಯಕರ್ತರು ಬೋಳಿಯಾರು ಗ್ರಾಮದಲ್ಲಿ ಭಾರತ ಮಾತಾಕಿ ಜೈ ಎಂದು ಘೋಷಣೆ ಕೂಗುತ್ತಾ ಸಂಭ್ರಮಿಸಿದ್ದಾರೆ. ಜೊತೆಗೆ, ಮೂವರು ಬಿಜೆಪಿ ಕಾರ್ಯಕರ್ತರು ಬೈಕ್‌ನಲ್ಲಿ ಹೋಗುತ್ತಾ ಬೋಳಿಯಾರ್ ಮಸೀದಿಯ ಮುಂದೆ ಹಾದು ಹೋಗುವಾಗ ಬಿಜೆಪಿಗೆ ಜೈಕಾರ ಹಾಕುತ್ತಾ ಹಾಗೂ ಭಾರತ ಮಾತಾ ಕಿ ಜೈ ಎಂದು ಘೋಷಣೆ ಹಾಕುತ್ತಾ ಹೋಗಿದ್ದಾರೆ.
ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಮಂಜುನಾಥ್ ಗೆದ್ದಿದ್ದಕ್ಕೆ ಮಲೆ ಮಾದಪ್ಪನಿಗೆ ಹರಕೆ ತೀರಿಸಿದ ಮುಸ್ಲಿಂ ವ್ಯಕ್ತಿ!
ರಾತ್ರಿ ವೇಳೆ ಮಸೀದಿಯ ಬಳಿ ಸೇರಿದ್ದ ಸುಮಾರು 20-25 ಜನ ಮುಸ್ಲಿಮರ ಗುಂಪು ಬಿಜೆಪಿ ಕಾರ್ಯಕರ್ತರು ಹೋಗುತ್ತಿದ್ದ ಬೈಕ್ ಅನ್ನು ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಕೆಲವರು ಬೈಕ್ ಹಿಡಿದು ಮೂವರನ್ನು ಬೀಳಿಸಿ ಹಲ್ಲೆ ಮಾಡದ್ದಾರೆ. ಆದರೆ, ಚಾಕು ಮತ್ತು ಚೂರಿಗಳನ್ನು ಇಟ್ಟುಕೊಂಡಿದ್ದ ಕೆಲವು ಆರೋಪಿಗಳು ಹರೀಶ್ (41) ಹಾಗೂ ನಂದಕುಮಾರ್ (24) ಎನ್ನುವವರಿಗೆ ಮನಸೋ ಇಚ್ಛೆ ಚಾಕು ಇರಿದು ಕೊಲೆ ಮಾಡಲು ಮುಂದಾಗಿದ್ದಾರೆ. ಜೊತೆಗೆ, ಕೃಷ್ಣ ಕುಮಾರ್ ಎನ್ನುವ ವ್ಯಕ್ತಿಗೆ ಬದಲಿ ಚಾಕು ಇಲ್ಲದವರ ಕೈಗೆ ಸಿಕ್ಕಿಬಿದ್ದಿದ್ದು, ಆತನನ್ನು ಮನಸೋ ಇಚ್ಛೆ ಥಳಿಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.