ನೂತನ ವಿಜಯನಗರ ಜಿಲ್ಲೆಯಲ್ಲಿ ನೀರಿನಿಂದ ಸರಣಿ ಸಾವು: ಪರಿಹಾರ ಘೋಷಿಸಿದ ಸಿಎಂ
* ನೂತನ ಜಿಲ್ಲೆಯಾಗಿರುವ ವಿಜಯನಗರ ಜನರಲ್ಲಿ ಆತಂಕ
* ಕಲುಷಿತ ನೀರು ಸೇವಿಸಿ 6 ಜನ ಸಾವು
* ಆತಂಕಗೊಂಡ ಗ್ರಾಮವನ್ನೇ ತೊರೆಯುತ್ತುರುವ ಜನ
ವಿಜಯನಗರ, ಅ.04): ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ 6 ಜನ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.
ಲುಷಿತ ನೀರು ಸೇವಿಸಿ ಮೃತಪಟ್ಟ 6 ಜನ ಕುಟುಂಬಕ್ಕೆ ತಲಾ 3 ಲಕ್ಷ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಅ.05) ಘೋಷಿಸಿದರು.
ಕಲುಷಿತ ನೀರು ಸೇವಿಸಿ ಸರಣಿ ಸಾವು : ಅಧಿಕಾರಿಗಳು ಮಾತ್ರ ಡೋಂಟ್ ಕೇರ್
ಮನೀಷ್ ಮೌದ್ಗಿಲ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದೇವೆ. ಸೂಕ್ತ ತನಿಖೆ ಮಾಡಿ ವರದಿ ನೀಡುವಂತೆ ಸೂಚಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವನ್ನಪ್ಪಿರುವ ಕಾರಣ ಆತಂಕಗೊಂಡ ಕೆಲ ಕುಟುಂಬಗಳು ಗ್ರಾಮವನ್ನು ತೊರೆದು ಹೋಗಿವೆ. ಕೆಲ ಜನರು ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದಾರೆ.
ಅಸ್ವಸ್ಥಗೊಂಡ ಕೆಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಹುಬ್ಬಳ್ಳಿ, ದಾವಣಗೆರೆ, ಹಾವೇರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸರಣಿ ಸಾವಿನಿಂದ ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದ್ದು, ಮಕರಬ್ಬಿ ಗ್ರಾಮದಲ್ಲಿ ಶಾಲೆಗೆ ತಾತ್ಕಾಲಿಕವಾಗಿ ರಜೆ ಘೋಷಣೆ ಮಾಡಲಾಗಿದೆ.