ಮೈಸೂರು(ಡಿ.06): ಹುಣಸೂರು ಉಪಚುನಾವಣೆ ಸಂದರ್ಭದಲ್ಲಿ ಹೊಸರಾಮೇನಹಳ್ಳಿಯಲ್ಲಿ ನಡೆದ ಪೊಲೀಸರೊಂದಿಗೆ ಅನುಚಿತ ವರ್ತನೆ ಘಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿದೆ.

ಉಪ ಚುನಾವಣೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಶಾಸಕ ಅನಿಲ್‌ ಚಿಕ್ಕಮಾದು ಅವರು, ಆಕ್ರಮ ಕೂಟ ಕಟ್ಟಿಕೊಂಡು ನಿಯಮ ಉಲ್ಲಂಘಿಸಿರುವುದರಿಂದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮುಖಕ್ಕೆ ಇರಿದ..!

ಮತದಾರರಲ್ಲದ ರಾಜಕೀಯ ಮುಖಂಡರು ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಮತ್ತು ಶಾಸಕರಿಗೆ ಬೆಂಬಲಿಸಿ ಗಲಭೆಗೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್‌ ಮೇಲೆ ಮೂರು ಪ್ರಕರಣ ದಾಖಲು ಮಾಡಲಾಗುತ್ತಿದೆ ಎಂದು ಡಿವೈಎಸ್ಪಿ ಸುಂದರ್‌ ರಾಜ್‌ ಮಾಹಿತಿ ನೀಡಿದ್ದಾರೆ.

ಬೈ ಎಲೆಕ್ಷನ್: ಸಿಎಂ ತವರಲ್ಲಿ ನೀತಿಸಂಹಿತೆ ಉಲ್ಲಂಘನೆ