Asianet Suvarna News Asianet Suvarna News

ಇ-ಆಫೀಸ್‌ನಿಂದ ಜನರ ಅಲೆದಾಟಕ್ಕೆ ಬ್ರೇಕ್‌: ಸಚಿವ ಕೃಷ್ಣ ಬೈರೇಗೌಡ

ಸಾರ್ವಜನಿಕರ ಕೆಲಸಗಳನ್ನು ಅತಿ ಜರೂರಾಗಿ ಮಾಡಿಕೊಡುವ ಉದ್ದೇಶದಿಂದ ತಾಲೂಕು ಕಚೇರಿಯಲ್ಲಿ ಇ-ಆಫೀಸ್ ವ್ಯವಸ್ಥೆಯನ್ನು ಅತಿ ಶೀಘ್ರವಾಗಿ ಅಳವಡಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು. 

Break to people wandering from e office Says minister krishna byre gowda gvd
Author
First Published Oct 11, 2023, 9:43 PM IST

ಹೊಸದುರ್ಗ (ಅ.11): ಸಾರ್ವಜನಿಕರ ಕೆಲಸಗಳನ್ನು ಅತಿ ಜರೂರಾಗಿ ಮಾಡಿಕೊಡುವ ಉದ್ದೇಶದಿಂದ ತಾಲೂಕು ಕಚೇರಿಯಲ್ಲಿ ಇ-ಆಫೀಸ್ ವ್ಯವಸ್ಥೆಯನ್ನು ಅತಿ ಶೀಘ್ರವಾಗಿ ಅಳವಡಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಾಲೂಕು ಕಚೇರಿಗೆ ಭೇಟಿ ನೀಡಿದ ಸಚಿವರು, ಕಂದಾಯ ಶಾಖೆ, ರವಾನೆ ವಿಭಾಗ, ಕೇಂದ್ರ ದಾಖಲೆ ವಿಭಾಗದ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಪರಿಶೀಲನೆ ನಡೆಸಿ ಇ-ಆಫೀಸ್ ಸಾಫ್ಟ್‌ವೇರ್ ಅನುಷ್ಠಾನ ಕುರಿತು ಮಾಹಿತಿ ಪಡೆದುಕೊಂಡು ಅಗತ್ಯವಾದ ಸೂಚನೆಗಳನ್ನು ನೀಡಿದರು.

ರಾಜ್ಯದಾದ್ಯಂತ ಎಲ್ಲಾ ತಾಲೂಕು ಕಚೇರಿಯಲ್ಲಿ ಇ-ಆಫೀಸ್ ವ್ಯವಸ್ಥೆ ಅಳವಡಿಸಿಕೊಳ್ಳುವಂತೆ ಈಗಾಗಲೇ ಸೂಚನೆ ನೀಡಿದ್ದರೂ ಹೊಸದುರ್ಗದಲ್ಲಿ ಇನ್ನು ಮ್ಯಾನ್ಯೂಯಲ್ ಕಡತಗಳ ವಿಲೇವಾರಿ ಇರುವುದನ್ನು ಕಂಡು ಬೇಸರ ವ್ಯಕ್ತಪಡಿಸಿದರು. ನಂತರ ದಾಖಲೆ ಕೊಠಡಿಗಳಿಗೆ ತೆರಳಿ ದಾಖಲೆಗಳನ್ನು ಪೆಂಡಿ ಕಟ್ಟಿರುವುದನ್ನು ನೋಡಿ ಕೂಡಲೇ ಎಲ್ಲಾ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡುವ ಮೂಲಕ ಡಿಜಿಟಲೈಜೇಷನ್ ಮಾಡುವಂತೆ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು. ಸಬ್ ರಿಜಿಸ್ಟರ್ ಕಚೇರಿಯಿಂದ ಮಿಟೇಶನ್‌ಗಳು ಮ್ಯಾನುಯೆಲ್ ಕಡತಗಳಲ್ಲಿ ಬರುತ್ತಿರುವುದನ್ನು ಕಂಡು ಇನ್ನು ಮುಂದೆ ಮ್ಯಾನುಯೆಲ್ ಕಡತಗಳು ಬಾರದಂತೆ ನೋಡಿಕೊಳ್ಳಿ ಎಂದು ಸಬ್‌ರಿಜಿಸ್ಟರ್ ಅವರಿಗೆ ತಾಕೀತು ಮಾಡಿದರು.

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುರುಡೆ ರಾಜ: ಶಾಸಕ ಎಚ್.ಸಿ.ಬಾಲಕೃಷ್ಣ

ಡಿಜಿಟಲೈಸೆಷನ್‌ಗೆ ಸಚಿವರ ಸಲಹೆ: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಾಗದ ರಹಿತ ವ್ಯವಹಾರ ನಡೆಸಲು ರಾಜ್ಯ ಸರ್ಕಾರ ಇ-ಆಫೀಸ್ ಎಂಬ ವೆಬ್ ಅಪ್ಲಿಕೇಷನ್ ಪರಿಚಯಿಸಿದೆ. ಇದರಿಂದ ಸಾರ್ವಜನಿಕ ಕಚೇರಿಯಲ್ಲಿ ಕಾಗದ ರಹಿತ ವ್ಯವಹಾರ ಜೊತೆ ಪಾರದರ್ಶಕ, ಜನಸ್ನೇಹಿ ಕಚೇರಿಯಾಗಿ ಪರಿವರ್ತಿಸಲು ಇದು ಸಹಕಾರಿಯಾಗಿದೆ. ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳು ಕ್ಲಿಯರ್ ಆಗಲು ಸಾಕಷ್ಟು ಸಮಯ ತೆಗೆದುಕೊಳ್ಳಲಾಗುತಿತ್ತು. ರೈತರು, ಸಾರ್ವಜನಿಕರು ಅರ್ಜಿ ವಿಲೇವಾರಿಗಾಗಿ ಕಚೇರಿಗೆ ಅಲೆದಾಡುತ್ತಿದ್ದರು. ಇ-ಆಫೀಸ್ ವ್ಯವಸ್ಥೆಯಿಂದ ಇದಕ್ಕೆ ಬ್ರೇಕ್ ಬೀಳಲಿದೆ ಎಂದರು.

ತಾಲೂಕು ಕಚೇರಿಗಳಲ್ಲಿ ಕಡತಗಳು ಹಾಳಾಗಿವೆ ಹಾಗಾಗಿ ಅವುಗಳನ್ನು ಸ್ಕ್ಯಾನಿಂಗ್ ಮಾಡುವುದರಿಂದ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ತಮ್ಮ ದಾಖಲೆಗಳನ್ನು ನೀಡಲು ಅನುಕೂಲವಾಗಲಿದೆ ಎಂದರು. ಇದಕ್ಕೂ ಮುನ್ನ ಮಾಡದಕೆರೆ ಹೋಬಳಿಯ ನಾಡಕಚೇರಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದೇನೆ ನಮ್ಮದು ಜನಪರವಾದ ಸರ್ಕಾರವಾಗಿದ್ದು, ಜನರಿಗೆ ಅತಿ ಶೀಘ್ರವಾಗಿ ಕೆಲಸಗಳನ್ನು ಮಾಡಿಕೊಡಬೇಕೆಂಬುದು ನಮ್ಮ ಉದ್ದೇಶವಾಗಿದೆ ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಡಿಕೆಶಿಯನ್ನು ಜೈಲಿಗೆ ಕಳುಹಿಸಲು ಕುಮಾರಸ್ವಾಮಿ ಸಂಚು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಪಟ್ಟಣದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ತಾಲೂಕು ಕಚೇರಿ ಕಟ್ಟಡ ಗುಡ್ಡದ ಮೇಲಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ ಎಂಬ ದೂರು ಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಅಲ್ಲಿ ನಿರ್ಮಿಸಿರುವುದು ಸರಿಯೋ ತಪ್ಪು ಗೊತ್ತಿಲ್ಲ ಆದರೆ ಈಗಾಗಲೇ ಕಾರ್ಯಾ ಆರಂಭ ಆಗಿದೆ ಅದನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದರು. ಈ ವೇಳೆ ಶಾಸಕ ಬಿ ಜಿ ಗೋವಿಂದಪ್ಪ, ಜಿಲ್ಲಾಧಿಕಾರಿ ದಿವ್ಯಾಪ್ರಭು, ತಹಸೀಲ್ದಾರ್ ತಿರುಪತಿ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

Follow Us:
Download App:
  • android
  • ios