ಧಾರವಾಡ(ಫೆ.28): ಇಲ್ಲಿನ ನವಲೂರು ಬಳಿ ಚಿಗರಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪ್ರಕರಣ ಗುರುವಾರ ಮಧ್ಯಾಹ್ನ ನಡೆದಿದೆ. 

ಮಧ್ಯಾಹ್ನ ಹುಬ್ಬಳ್ಳಿಯಿಂದ ಧಾರವಾಡಕ್ಕೆ ತೆರಳುತ್ತಿದ್ದ ವೇಳೆ ಮುಂಭಾಗದಿಂದ ಬಂದ ಮತ್ತೊಂದು ಚಿಗರಿ ಬಸ್‌ ಡಿಕ್ಕಿ ಹೊಡೆದಿದೆ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಕೆಲಕಾಲ ಗಾಬರಿಗೊಂಡಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆದರೆ, ಎರಡು ಬಸ್‌ಗಳಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳು ಆಗಿಲ್ಲ. ಈ ಕುರಿತು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.