ಬಿಬಿಎಂಪಿ ಆಸ್ತಿ ತೆರಿಗೆ ಸದ್ಯಕ್ಕೆ ಹೆಚ್ಚಳವಿಲ್ಲ; ಆತಂಕ ಬೇಡವೆಂದು ಸ್ಪಷ್ಟೀಕರಣ ಕೊಟ್ಟ ಪಾಲಿಕೆ
ಬಿಬಿಎಂಪಿ ವ್ಯಾಪ್ತಿಯಲ್ಲಿ 1ನೇ ಏಪ್ರಿಲ್ 2024ರಿಂದ ಆಸ್ತಿ ತೆರಿಗೆ ಹೆಚ್ಚಳವಾಗಲಿದೆ ಎಂಬ ಸುಳ್ಳು ವಿಡಿಯೋ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದಕ್ಕೆ ಕಿವಿಗೊಡಬೇಡಿ ಎಂದು ಪಾಲಿಕೆಯಿಂದ ಸ್ಪಷ್ಟೀಕರಣ ನಿಡಲಾಗಿದೆ.
ಬೆಂಗಳೂರು (ಮಾ.24): ಬಿಬಿಎಂಪಿ ವ್ಯಾಪ್ತಿಯಲ್ಲಿ 1ನೇ ಏಪ್ರಿಲ್ 2024ರಿಂದ ಆಸ್ತಿ ತೆರಿಗೆ ಹೆಚ್ಚಳವಾಗಲಿದೆ ಎಂಬ ಸುಳ್ಳು ಸುದ್ದಿಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಯಾವುದೇ ಆದೇಶವಿಲ್ಲದೇ ಬಿಬಿಎಂಪಿ ಆಸ್ತಿ ತೆರಿಗೆ ಮಾಡುತ್ತಿರುವುದಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಆದರೆ, ಈ ಬಗ್ಗೆ ಅಧಿಕಾರಿಗಳನ್ನು ವಿಚಾರಿಸಿದರೆ, ಯಾವುದೇ ತೆರಿಗೆ ಹೆಚ್ಚಳ ಮಾಡುವ ಪ್ರಸ್ತಾವನೆಯಾಗಲೀ, ಚಿಂತನೆಯಾಗಲೀ ಸದ್ಯಕ್ಕಿಲ್ಲ ಎಂದು ಹೇಳಿದ್ದಾರೆ. ಜೊತೆಗೆ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮಾಹಿತಿ ಸುಳ್ಳು ಎಂದು ಸ್ಪಷ್ಟೀಕರಣ ನೀಡಿದ್ದಾರೆ.
ಹೌದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 1ನೇ ಏಪ್ರಿಲ್ 2024ರಿಂದ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದು ಕೆಲವು ಸುಳ್ಳು ಸುದ್ದಿಯ ವಿಡಿಯೋಗಳು ಹರಿದಾಡುತ್ತಿದೆ. ಸುಳ್ಳು ಸುದ್ದಿ ಮುನ್ನೆಲೆಗೆ ಬರುತ್ತಿದ್ದಂತೆಯೇ ಎಚ್ಚತ್ತ ಬಿಬಿಎಂಪಿಯಿಂದ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಲ್ಲಿ ಯಾವುದೇ ಹೆಚ್ಚಳ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಕಾವೇರಿ ಪೈಪ್‌ಲೈನ್ ದುರಸ್ತಿಗೊಳಿಸಿ, ಬೆಂಗಳೂರಿಗೆ 1,000 ಎಂಎಲ್‌ಡಿ ನೀರು ಸರಬರಾಜ ವ್ಯತ್ಯಯ ತಪ್ಪಿಸಿದ ಜಲಮಂಡಳಿ
ಇನ್ನು ಸಾಮಾಜಿಕ ಜಾಲತಾಣ ಇನ್ಸ್‌ಸ್ಟಾಗ್ರಾಮ್‌ನ Index.daily ಎಂಬ ಪೇಜ್‌ನಲ್ಲಿ (https://www.instagram.com/reel/C4c-4klyOlJ/?igsh=ajc0dHVwdjJ3YTBr) ನಲ್ಲಿ ಅನುರಾಗ್ ಸಿಂಗ್ ಎಂಬುವವರು 13ನೇ ಮಾರ್ಚ್ 2024ರಂದು ಕರ್ನಾಟಕದಲ್ಲಿ ಬಾರಿ ತೆರಿಗೆ ಹೆಚ್ಚಳವಾಗಲಿದೆ ಎಂಬ ವೀಡಿಯೋ ಒಂದನ್ನು ಹರಿದುಬಿಟ್ಟಿದ್ದಾರೆ. ಸದರಿ ವಿಡಿಯೋದಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯು ಬಾಡಿಗೆ ಮನೆಗಳ ಮೇಲಿನ ಆಸ್ತಿ ತೆರಿಗೆಯನ್ನು 2 ಪಟ್ಟು ಮತ್ತು ವಾಣಿಜ್ಯ ಸಂಸ್ಥೆಗಳಿಗೆ 3-5 ಪಟ್ಟು ಹೆಚ್ಚಿಸುವುದು ಸೇರಿದಂತೆ ಇನ್ನಿತರೆ ವಿಷಗಳ ಕುರಿತು ಮಾತನಾಡಿರುತ್ತಾರೆ.
ಟಿಕೆಟ್ ಅತೃಪ್ತಿ ಶಮನಕ್ಕೆ ಅಪ್ಸರೆಯರನ್ನು ಕರೆಸಲು ಪಕ್ಷದ ಕಾರ್ಯಕರ್ತರಿಂದ ತೀರ್ಮಾನ!?
ಇನ್ಸ್ ಸ್ಟಾಗ್ರಾಮ್ ನಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ಹೇಳಿರುವ ಅಂಶಗಳು ಸತ್ಯಕ್ಕೆ ದೂರವಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 1ನೇ ಏಪ್ರಿಲ್ 2024ರಿಂದ ಯಾವುದೇ ಆಸ್ತಿ ತೆರಿಗೆ ಯನ್ನು ಹೆಚ್ಚಳ ಮಾಡುವುದಿಲ್ಲ. ಆಸ್ತಿ ತೆರಿಗೆಯನ್ನು 2016ರಲ್ಲಿ ಪರಿಷ್ಕರಿಸಲಾಗಿದ್ದು, ಆ ದರದಂತೆಯೇ ಪ್ರಸ್ತುತ ಆಸ್ತಿ ತೆರಿಗೆ ದರಗಳು ಚಾಲ್ತಿಯಲ್ಲಿರುತ್ತದೆ ಹಾಗೂ ಮುಂದುವರಿಯಲಿವೆ. ಸದರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸುಳ್ಳು ಸಿದ್ದಿ ಹರಿಬಿಡುವವರ ಮೇಲೆ ನಿಯಮಾನುಸಾರ ಕಾನೂನು ಕ್ರಮ ವಹಿಸಲು ಬೆಂಗಳೂರು ನಗರ ಪೋಲಿಸ್ ಆಯುಕ್ತರು ರವರಿಗೆ ಪತ್ರ ಬರೆಯಲಾಗಿದೆ. ನಾಗರೀಕರು ಇಂತಹ ಯಾವುದೇ ಸುಳ್ಳು ಸುದ್ದಿಗಳಿಗೆ ಕಿವಿಗೊಡದಿರಲು ಕೋರಿದೆ.