ಹುಬ್ಬಳ್ಳಿ(ಸೆ.11): ಕೇಂದ್ರದಿಂದ ಈ ವರೆಗೂ ಪ್ರವಾಹ ಪರಿಹಾರಕ್ಕೆ ಹಣ ಬಿಡುಗಡೆಯಾಗಿಲ್ಲ. ಆದರೆ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಿ ಪರಿಶೀಲನೆ ನಡೆಸಿ ತೆರಳಿದ್ದಾರೆ. ಕೇಂದ್ರದ ಅಧ್ಯಯನ ತಂಡಗಳು ಸಮೀಕ್ಷೆ ನಡೆಸಿಕೊಂಡು ಹೋಗಿವೆ. ಶೀಘ್ರದಲ್ಲೇ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಕಾದು ನೋಡಿ ಮುಂದೇನಾಗುತ್ತೆ ಎಂದ ಸಚಿವ ಶೆಟ್ಟರ್

ಬೇರೆ ಅಭಿವೃದ್ಧಿ ಕಾರ್ಯಗಳ ಹಣವನ್ನು ಪ್ರವಾಹಪೀಡಿತ ಪ್ರದೇಶಗಳಲ್ಲಿ ಪರಿಹಾರಕ್ಕೆ ಬಳಸಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಬೆಳಗಾವಿ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಕೂಡಲೇ ನಿರಾಶ್ರಿತರಿಗೆ ಶೆಡ್ ಹಾಕಲು ಸೂಚನೆ ನೀಡಿದ್ದೇನೆ. ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣಕ್ಕೆ 5 ಲಕ್ಷ ನೀಡಲಾಗುತ್ತಿದೆ. ಈ ಹಣವನ್ನು ಹಂತ- ಹಂತವಾಗಿ ನೀಡಲಾಗುತ್ತಿದೆ ಎಂದಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಿಜೆಪಿ ಶಾಸಕ ಉಮೇಶ ಕತ್ತಿ ವೈಯಕ್ತಿಕ ಕಾರಣದಿಂದ ಬೆಳಗಾವಿಯಲ್ಲಿ ತಮ್ಮನ್ನು ಭೇಟಿ ಮಾಡಿಲ್ಲ. ಅವರು ಬೆಂಗಳೂರಲ್ಲಿದ್ದಾರೆ. ಅವರ ಜತೆ ಫೋನ್‌ನಲ್ಲಿ ಮಾತನಾಡಿದ್ದೇನೆ ಎಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್ ಡಿಕೆಶಿ ಬಂಧನಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಹೇಳಿಕೆಗೆ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸಾಮಾನ್ಯ ಜ್ಞಾನವಿಲ್ಲ ಎಂಬ ಟೀಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.