ಮೈಸೂರು[ಆ.30]: ಕೆಆರ್‌ಎಸ್‌ ಜತೆಗೆ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಸಂಪ್ರದಾಯವನ್ನು ಹಿಂದಿನ ಮುಖ್ಯಮಂತ್ರಿಗಳು ಪಾಲಿಸಿಕೊಂಡು ಬಂದಿದ್ದರು. ಆದರೆ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆ ಸಂಪ್ರದಾಯವನ್ನು ಮುರಿದಿದ್ದಾರೆ.

ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದ ಕನ್ನಂಬಾಡಿ

ಸಾಮಾನ್ಯವಾಗಿ ಕೆಆರ್‌ಎಸ್‌ಗೆ ಜಲಾಶಯಕ್ಕೆ ಬಾಗಿನ ಅರ್ಪಿಸಿದ ದಿನ ಅಥವಾ ಅದಕ್ಕಿಂತ ಮುಂಚಿತವಾಗಿ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುತ್ತಿತ್ತು. ಆದರೆ ಈ ಬಾರಿ ಸಂಪ್ರದಾಯ ಪಾಲನೆಯಾಗಿಲ್ಲ.

ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಕಬಿನಿ ಮೊದಲಿಗೆ ಭರ್ತಿಯಾಗಿದ್ದರೂ ಗುರುವಾರ ಕೇವಲ ಕೆಆರ್‌ಎಸ್‌ ಜಲಾಶಯಕ್ಕೆ ಮಾತ್ರ ಬಾಗಿನ ಅರ್ಪಿಸಿದ ಯಡಿಯೂರಪ್ಪ ನಂತರ ಕೊಡಗಿಗೆ ತೆರಳಿದರು. ರಾಜ್ಯದಲ್ಲಿ ಮೊದಲು ಹಾಗೂ ವರ್ಷಕ್ಕೆರಡು ಬಾರಿ ಭರ್ತಿಯಾಗುವ ಪ್ರಮುಖ ಜಲಾಶಯ ಎಂಬ ಹೆಗ್ಗಳಿಕೆ ಹೊಂದಿರುವ ಮೈಸೂರು ಜಿಲ್ಲೆ ಎಚ್‌.ಡಿ ಕೋಟೆ ತಾಲೂಕು ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯಕ್ಕೆ ಹಾರಂಗಿ ಜಲಾಶಯದ ಜೊತೆಗೆ ಬಾಗಿನ ಅರ್ಪಿಸುವ ಸಾಧ್ಯತೆ ಇದೆ.

ಜಿಲ್ಲೆಯ ಜೀವನಾಡಿ ಕಾವೇರಿಗೆ 4ನೇ ಬಾರಿಗೆ ಬಾಗಿನ ಅರ್ಪಿಸಿದ ಸಿಎಂ