2023ರವರೆಗೂ ಯಡಿಯೂರಪ್ಪನವರೇ ಮುಖ್ಯಮಂತ್ರಿ: ಸಚಿವ ಮುರುಗೇಶ್‌ ನಿರಾಣಿ

* ಪ್ರವಾಹ ಎದುರಿಸಲು ಸರ್ವ ಸನ್ನದ್ದ 
* ಕೆಲವರು ವೈಯಕ್ತಿಕ ಕಾರಣಗಳಿಗಾಗಿ ದೆಹಲಿಗೆ ಹೋಗಬಹುದು
* ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ 

BS Yediyurappa Will be Continue As CM in Karnataka Says Murugesh Nirani grg

ಕಲಬುರಗಿ(ಜು.10): ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಹಲವಾರು ಮಂದಿ ತುದಿಗಾಲಲ್ಲಿ ನಿಂತಿದ್ದಾರೆ.  ಸದ್ಯಕ್ಕೆ ನಮ್ಮ ಪಕ್ಷದಿಂದ ಮುಖ್ಯಮಂತ್ರಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾರೆ. 2023ರವರೆಗೂ ಅವರೇ ಮುಂದುವರೆಯುತ್ತಾರೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಗೊಂದಲ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್‌ ನಿರಾಣಿ ಸ್ಪಷ್ಟಪಡಿಸಿದ್ದಾರೆ. 

ಇಂದು(ಶನಿವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರ್ಯಾರು ಮುಖ್ಯಮಂತ್ರಿ  ಆಗುತ್ತಾರೆ ಎಂಬುದಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿಯೂ ಇಲ್ಲ. ಯಡಿಯೂರಪ್ಪ ಉತ್ತಮವಾಗಿ ಆಡಳಿತ ನಡೆಸುತ್ತಿರುವುದರಿಂದ ಅವರ ನಾಯಕತ್ವವು ಅಬಾಧಿತವಾಗಿದೆ. ಈ ಬಗ್ಗೆ ಮಾತನಾಡುವುದರಲ್ಲಿ  ಯಾವ ಅರ್ಥವೂ ಇಲ್ಲ ಎಂದು ಸೂಚ್ಯವಾಗಿ ಹೇಳಿದ್ದಾರೆ. 

2023ರ ಚುನಾವಣೆ ನಂತರ ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗ ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂಬುದರ ಬಗ್ಗೆ ಚರ್ಚೆ ಮಾಡೋಣ. ಕೆಲವರು ವೈಯಕ್ತಿಕ ಕಾರಣಗಳಿಗಾಗಿ ದೆಹಲಿಗೆ ಹೋಗಬಹುದು. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು. 

ಸುಮಲತಾ ದಾಖಲೆ ನೀಡಿದ್ರೆ ಅಕ್ರಮ ಗಣಿಗಾರಿಕೆ ತನಿಖೆ: ಸಚಿವ ನಿರಾಣಿ

ನನಗೆ ಯಾರೇ ಒಳ್ಳೆಯ ಸಲಹೆ ನೀಡಿದರೆ ಅದನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುವ ಗುಣವನ್ನು ಚಿಕ್ಕಂದಿನಿಂದಲೇ ಬೆಳೆಸಿಕೊಂಡಿದ್ದೇನೆ.ಈಗಲೂ ಅಷ್ಟೇ ಯಾರೇ ನನಗೆ ಒಳ್ಳೆಯದನ್ನು ಹೇಳಿದರೆ ಖಂಡಿತವಾಗಿಯೂ ಸ್ವೀಕರಿಸುತ್ತೇನೆ ಎಂದು  ಹೇಳಿದರು. 

ಸರ್ವ ಸನ್ನದ್ದ 

ಕಲಬುರಗಿ ಜಿಲ್ಲೆಯಲ್ಲಿ ಮುಂದಿನ ಏಳು ದಿನಗಳವರೆಗೆ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ. ಪ್ರವಾಹ ಬಂದರೆ ಬೋಟ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.  ಪ್ರವಾಹ ಬಂದರೆ ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಜೊತೆಗೆ ಕಾರವಾರದಿಂದ ಬೋಟ್ ತರಿಸುವುದಕ್ಕೆ ತೀರ್ಮಾನಿಸಲಾಗಿದೆ ಎಂದರು. 

ಪ್ರವಾಹ ಬಂದ ಸಂದರ್ಭದಲ್ಲಿ ಜನರನ್ನ ಬೇರೆಡೆ ಸ್ಥಳಾಂತರಿಸಲು ಯೋಜಿಸಲಾಗಿದೆ. ದನಕರುಗಳಿಗೆ ಮೇವಿನ ವ್ಯವಸ್ಥೆ ಮಾಡಲಾಗುವುದು. ಮಹಾರಾಷ್ಟ್ರದ ವಿವಿಧ ಅಣೆಕಟ್ಟೆಗಳಿಂದ ನೀರು ಹರಿಸುವುದರ ಬಗ್ಗೆ ನಮ್ಮ ಅಧಿಕಾರಿಗಳು ಮಹಾರಾಷ್ಟ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ  ಎಂದು ಹೇಳಿದರು.
 

Latest Videos
Follow Us:
Download App:
  • android
  • ios