ರಾಯಚೂರು(ಡಿ.12): ಜಿಲ್ಲೆಯ ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಆರ್. ಬಸನಗೌಡ ತುರ್ವಿಹಾಳ ಅವರು ವಾಪಾಸ್ ಪಡೆದಿದ್ದಾರೆ. ಈ ಮೂಲಕ ಮಸ್ಕಿ ವಿಧಾನಸಭಾ ಉಪಚುನಾವಣೆ ಹಾದಿ ಇದೀಗ ಸುಗಮವಾದಂತಾಗಿದೆ.

"

2018ರ ವಿಧಾನಸಭೆ ಚುನಾವಣೆಯಲ್ಲಿ ಪ್ರತಾಪ್ ಗೌಡ ಅವರು ಬೋಗಸ್ ಮತದಾನ ಮಾಡಿಸಿದ್ದಾರೆ ಎಂದು ಆರೋಪಿಸಿ ಆರ್. ಬಸನಗೌಡ ತುರ್ವಿಹಾಳ ಅವರು ದೂರು ದಾಖಲಿಸಿದ್ದರು. ಕೆಳೆದ ವಿಧಾನಸಭೆ ಚುನಾವಣೆಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಪ್ರತಾಪ್ ಗೌಡ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ತುರ್ವಿಹಾಳ ಪರಾಭವ ಹೊಂದಿದ್ದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ನಂತರದ ದಿನಗಳಲ್ಲಿ ಸಮ್ಮಿಶ್ರದ ಸರ್ಕಾರದ ವಿರುದ್ಧ ಸಿಡಿದೆದ್ದು ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಒಟ್ಟು 17 ಶಾಸಕರು ರಾಜೀನಾಮೆ ನೀಡಿದ್ದರು. ಈ ಗುಂಪಿನಲ್ಲಿ ಪ್ರತಾಪ್ ಗೌಡ ಪಾಟೀಲ್ ಕೂಡ ಒಬ್ಬರು. ಆರ್. ಬಸನಗೌಡ ತುರ್ವಿಹಾಳ ಅವರು ದೂರು ದಾಖಲಿಸಿದ್ದರಿಂದ ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿರಲಿಲ್ಲ. 

ಆರ್. ಬಸನಗೌಡ ತುರ್ವಿಹಾಳ ಅವರಿಗೆ ದೂರು ವಾಪಾಸ್ ಪಡೆಯಲು ಮನಸ್ಸಿಲ್ಲದಿದ್ದರೂ ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಹೈಕೋರ್ಟ್‌ನಲ್ಲಿ ಬುಧವಾರ ಕೇಸ್‌ಅನ್ನು ವಾಪಸ್ ಪಡೆದಿದ್ದಾರೆ. 
ರಾಜರಾಜೇಶ್ವರಿ ನಗರ ಹಾಗೂ ಮಸ್ಕಿ ಕ್ಷೇತ್ರಗಳಿಗೆ ನಡೆದಿರಲಿಲ್ಲ ಉಪಚುನಾವಣೆ 

ಮೈತ್ರಿ ಸರ್ಕಾದ ವಿರುದ್ಧ ಸಿಡಿದೆದ್ದು ಕಾಂಗ್ರೆಸ್- ಜೆಡಿಎಸ್‌ನ 17 ಶಾಸಕರು ರಾಜೀನಾಮೆ ನೀಡಿದ್ದರು. ಹದಿನೇಳು ಕ್ಷೇತ್ರಗಳಲ್ಲಿಯೂ ಉಪಚುನಾವಣೆ ನಡೆಯುತ್ತದೆ ಎಂದು ನಿರೀಕ್ಷಿಸಲಾಗಿತ್ತು, ಆದರೆ 15 ಕ್ಷೇತ್ರಗಳಿಗೆ ಮಾತ್ರವೇ ಚುನಾವಣೆ ನಡೆದಿತ್ತು. ಈ ಉಪಚುನಾವಣೆಯಲ್ಲಿ ಬಿಜೆಪಿ 12, ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು. ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು.

ಉಪಚುನಾವಣೆ ನಡೆದಿತ್ತು. ರಾಜರಾಜೇಶ್ವರಿ ನಗರ ಹಾಗೂ ಮಸ್ಕಿ ಕ್ಷೇತ್ರಗಳಿಗೆ ಚುನಾವಣೆ ನಡೆದಿರಲಿಲ್ಲ. 

2018 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರತಾಪ್ ಗೌಡ ಪಾಟೀಲ್ ಅವರು ಬಿಜೆಪಿಯ ಬಸನಗೌಡ ತುರ್ವಿಹಾಳ ವಿರುದ್ಧ ಜಯಗಳಿದ್ದರು. ಆದರೆ, ಪ್ರತಾಪ್ ಗೌಡ ಪಾಟೀಲ್ ಅವರು ಚುನಾವಣೆ ವೇಳೆ ಬೋಗಸ್ ಮತ ಚೀಟಿ ಹಂಚಿ ಅಕ್ರಮ ಮತದಾನ ಮಾಡಿದ್ದಾರೆ ಎಂದು ಬಸನಗೌಡ ತುರ್ವಿಹಾಳ ಅವರು ಆರೋಪಿಸಿ ದೂರು ದಾಖಲಿಸಿದ್ದರು. ಹೀಗಾಗಿ ಮಸ್ಕಿ ವಿಧಾನಸಭೆ ಉಪಚುನಾವಣೆಯನ್ನು ತಡೆ ಹಿಡಿಯಲಾಗಿತ್ತು. 

ಇನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮುನಿರತ್ನ ಗೆದ್ದಿದ್ದರು. ಆದರೆ ಚುನಾವಣೆ ಸಮಯದಲ್ಲಿ ಕ್ಷೇತ್ರದಲ್ಲಿ ನಕಲಿ ಮತದಾರರ ಪಟ್ಟಿ ಸಿಕ್ಕಿತ್ತು, ಈ ಬಗ್ಗೆ ಮುನಿರತ್ನ ವಿರುದ್ಧ ದೂರು ದಾಖಲಾಗಿತ್ತು. ಇತ್ತೀಚೆಗೆ ಮುನಿರತ್ನ ಹೆಸರು ಚಾರ್ಜ್‌ಶೀಟ್‌ನಿಂದ ಕೈಬಿಡಲಾಗಿತ್ತು. ಆದರೆ ಬಿಜೆಪಿಯ ತುಳಸಿ ಮುನಿರಾಜು ಗೌಡ ಮನವಿಯಂತೆ ಮುನಿರತ್ನ ವಿರುದ್ಧ ತನಿಖೆ ಜಾರಿಯಲ್ಲಿದೆ. ನಕಲಿ ಮತದಾರರ ಪಟ್ಟಿ ದೊರೆತ ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ನ್ಯಾಯಾಲಯ ತಡೆ ನೀಡಿದೆ.