ಬೆಂಗಳೂರು: ಬಿಟಿಎಂ ಲೇಔಟ್‌ ಮೆಟ್ರೋ ನಿಲ್ದಾಣ ರಸ್ತೆ ಸಂಚಾರಕ್ಕೆ ಮುಕ್ತ

ಮೆಟ್ರೋ ನಿಲ್ದಾಣ ನಿರ್ಮಾಣ ಕಾಮಗಾರಿಗಾಗಿ ಬಂದ್‌ ಆಗಿದ್ದ ರಸ್ತೆ, ಈಗ ವಹನ ಸಂಚಾರ ಸುಗಮ

BTM Layout Metro Station Open in Bengaluru grg

ಬೆಂಗಳೂರು(ಡಿ.02):  ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗುತ್ತಿದ್ದ ಬಿಟಿಎಂ ಲೇಔಟ್‌ ಮೆಟ್ರೋ ನಿಲ್ದಾಣದ ಬಳಿ ದ್ವಿಮುಖ ರಸ್ತೆಯನ್ನು ವಾಹನ ಸಂಚಾರಕ್ಕೆ ಗುರುವಾರ ಮುಕ್ತಗೊಳಿಸಲಾಗಿದೆ. ಬಿಟಿಎಂ ಲೇಔಟ್‌ನ 16ನೇ ಮುಖ್ಯರಸ್ತೆಯಲ್ಲಿ ಮೆಟ್ರೋ ರೈಲು ಮಾರ್ಗ ಕಾಮಗಾರಿ ನಡೆಯುತ್ತಿದೆ. ಇಲ್ಲಿನ ಮೆಟ್ರೋ ನಿಲ್ದಾಣ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ದ್ವಿಮುಖ ರಸ್ತೆಯನ್ನು ಬಂದ್‌ ಮಾಡಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚಿಸಲಾಗಿತ್ತು. ಸರ್ವಿಸ್‌ ರಸ್ತೆ ಮಾದರಿಯ ಈ ರಸ್ತೆ ಚಿಕ್ಕದಾಗಿದ್ದರಿಂದ ವಾಹನ ಸಂಚಾರ ದಟ್ಟಣೆ ಉಂಟಾಗಿ ಸವಾರರು ಕಿರಿಕಿರಿ ಅನುಭವಿಸುತ್ತಿದ್ದರು.

ಈ ಹಿನ್ನೆಲೆಯಲ್ಲಿ ಮೈಕೋ ಲೇಔಟ್‌ ಸಂಚಾರ ಠಾಣೆ ಪೊಲೀಸರು, ಬಿಎಂಆರ್‌ಸಿಎಲ್‌ ಅಧಿಕಾರಿಗಳೊಂದಿಗೆ ಚರ್ಚಿಸಿ ಮೆಟ್ರೋ ನಿಲ್ದಾಣದ ಕೆಳ ಭಾಗದ ದ್ವಿಮುಖ ರಸ್ತೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದರು. ಹೀಗಾಗಿ ಬಿಟಿಎಂ ಲೇಔಟ್‌ 16ನೇ ಮುಖ್ಯರಸ್ತೆ ಮೆಟ್ರೋ ನಿಲ್ದಾಣದ ಕಡೆಯಿಂದ ಈಸ್ಟ್‌ ಎಂಡ್‌ ರಸ್ತೆ ಕಡೆಗೆ ಹಾಗೂ ಸಿಲ್ಕ್‌ ಬೋರ್ಡ್‌ಗೆ ಸಂಚರಿಸುವ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ತಗ್ಗಿದೆ. ಅಷ್ಟೇ ಅಲ್ಲದೆ, ಬಿಟಿಎಂ ಲೇಔಟ್‌ ಮೆಟ್ರೋ ನಿಲ್ದಾಣದ ಬಳಿ ಸಂಚಾರ ನಿರ್ವಹಣೆಗೆ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Namma Metro phase-3: ಮೆಟ್ರೋ ಮೂರನೇ ಹಂತಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಬಿಟಿಎಂ ಮೆಟ್ರೋ ನಿಲ್ದಾಣದ ಬಳಿ ವಾಹನ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸಿದ ಬಿಎಂಆರ್‌ಸಿಎಲ್‌ಗೆ ನಗರ ಸಂಚಾರ ವಿಭಾಗದ ವಿಶೇಷ ಆಯುಕ್ತ ಡಾ.ಎಂ.ಎ.ಸಲೀಂ ಟ್ವಿಟರ್‌ನಲ್ಲಿ ಧನ್ಯವಾದ ಅರ್ಪಿಸಿದ್ದಾರೆ. ಇದರಿಂದ ವಾಹನ ಸುಗಮ ಸಂಚಾರಕ್ಕೆ ಸಹಾಯವಾಗಲಿದೆ ಎಂದಿದ್ದಾರೆ.
 

Latest Videos
Follow Us:
Download App:
  • android
  • ios