ಗ್ಯಾರಂಟಿ ಜಾರಿಯಿಂದ ಸಮಾನ ಸಮಾಜ ನಿರ್ಮಾಣ: ದಿನೇಶ್‌ ಗುಂಡೂರಾವ್‌

ಅಂಗನವಾಡಿಗಳಲ್ಲಿ ಸನ್‌ಫ್ಲವರ್‌ ಎಣ್ಣೆ: ಕರಾವಳಿ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳು ಸಾಕಷ್ಟು ಉತ್ಸುಕರಾಗಿದ್ದು, ಜಿಲ್ಲೆಗೆ ಹೆಚ್ಚಿನ ಅನುದಾನ ನೀಡಲಿದ್ದಾರೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಪರಿವರ್ತಿಸಿ ಮತ್ತಷ್ಟು ತಾಲೂಕುಗಳನ್ನು ಸೇರ್ಪಡೆಗೊಳಿಸಿ ಹೆಚ್ಚಿನ ಅನುದಾನ ನೀಡುವ ಚಿಂತನೆ ನಡೆಸಲಾಗಿದೆ: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌

Building an Equitable Society through Guarantee Implement Says Dinesh Gundu Rao grg

ಪುತ್ತೂರು(ಆ.12): ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳು ಏನೇ ಅಪಪ್ರಚಾರ ಮಾಡಿದರೂ ಜನತೆ ಗ್ಯಾರಂಟಿಗಳನ್ನು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷದ ಗ್ಯಾರಂಟಿಯ ಉದ್ದೇಶ ಸಮಾನ ಸಮಾಜ ನಿರ್ಮಾಣ. ಪ್ರತಿಯೊಬ್ಬ ವ್ಯಕ್ತಿಯ ತಲಾ ಆದಾಯ ಹೆಚ್ಚಾಗಬೇಕು. ಆಗ ದೇಶ ನಿಜವಾಗಿಯೂ ಅಭಿವೃದ್ಧಿಯಾಗುತ್ತದೆ ಎನ್ನುವುದು ನಮ್ಮ ಕನಸು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಶುಕ್ರವಾರ ಪುತ್ತೂರು ಪುರಭವನದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯಾದ 200 ಯುನಿಟ್‌ವರೆಗಿನ ಉಚಿತ ವಿದ್ಯುತ್‌ ಗೃಹಜ್ಯೋತಿ ಯೋಜನೆಗೆ ಜಿಲ್ಲಾ ಮಟ್ಟದಲ್ಲಿ ಚಾಲನೆ ನೀಡಿ ಮಾತನಾಡಿದರು.ಅಂಗನವಾಡಿಗಳಲ್ಲಿ ಸನ್‌ಫ್ಲವರ್‌ ಎಣ್ಣೆ: ಕರಾವಳಿ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳು ಸಾಕಷ್ಟು ಉತ್ಸುಕರಾಗಿದ್ದು, ಜಿಲ್ಲೆಗೆ ಹೆಚ್ಚಿನ ಅನುದಾನ ನೀಡಲಿದ್ದಾರೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಪರಿವರ್ತಿಸಿ ಮತ್ತಷ್ಟು ತಾಲೂಕುಗಳನ್ನು ಸೇರ್ಪಡೆಗೊಳಿಸಿ ಹೆಚ್ಚಿನ ಅನುದಾನ ನೀಡುವ ಚಿಂತನೆ ನಡೆಸಲಾಗಿದೆ. ರಾಜ್ಯದ 15 ಆಸ್ಪತ್ರೆಗಳಲ್ಲಿ ಜನಾರೋಗ್ಯ ದೃಷ್ಟಿಯಿಂದ ಉಚಿತವಾಗಿ ಎಂಆರ್‌ಐ ಮತ್ತು ಸಿಟಿಸ್ಕ್ಯಾ‌ನ್‌ ವ್ಯವಸ್ಥೆ, ಮಕ್ಕಳ ಆರೋಗ್ಯಕ್ಕಾಗಿ ಅಂಗನವಾಡಿಗಳಲ್ಲಿ ಪಾಮೋಲಿನ್‌ ಎಣ್ಣೆ ಬದಲು ಸನ್‌ಫ್ಲವರ್‌ ಬಳಸಲಾಗುವುದು. ಜತೆಗೆ ಇನ್ನಷ್ಟುಕಾರ್ಯಕ್ರಮಗಳನ್ನುಜಾಾರಿಗೊಳಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದರು.

ಬೆಲೆ ಏರಿಕೆಗೆ ತತ್ತರಿಸಿದ್ದ ಜನರಿಗೆ 5 ಗ್ಯಾರಂಟಿ ಅನುಕೂಲ: ಸಚಿವ ದರ್ಶನಾಪೂರ್‌

ಜಿಲ್ಲೆಯಲ್ಲಿ ಕಂದಾಯ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಸಾಕಷ್ಟುಅರ್ಜಿಗಳು ವಿಲೇವಾರಿಯಾಗದೆ ವರ್ಷಾನುಗಟ್ಟಲೆ ಬಾಕಿ ಉಳಿದಿದೆ. ಇದರಿಂದ ಬಡ ಜನತೆಗೆ ತೊಂದರೆ ಹಾಗೂ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಂತಾಗಿದೆ. ಇಂತಹ ಬಾಕಿ ಉಳಿದಿರುವ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚನೆ ನೀಡಿದ ಸಚಿವ ದಿನೇಶ್‌ ಗುಂಡೂರಾವ್‌, ಜನರು ನೀಡಿದ ಯಾವುದೇ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕು. ಇದು ಜಿಲ್ಲಾಡಳಿತದ ಜವಾಬ್ದಾರಿ. ಮುಂದಿನ ದಿನಗಳಲ್ಲಿ ನಾನು ಕಾಲ ಕಾಲಕ್ಕೆ ಈ ಬಗ್ಗೆ ಮೌಲ್ಯಮಾಪನ ಮಾಡಲಿದ್ದೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ್‌ ರೈ ಮಾತನಾಡಿ, ರಾಜ್ಯದಲ್ಲಿ ಆಡಳಿತ ಪಡೆದ ಒಂದು ತಿಂಗಳಲ್ಲಿ ಭರವಸೆ ನೀಡಿದ 5 ಗ್ಯಾರಂಟಿಗಳಲ್ಲಿ 4ಕ್ಕೆ ಚಾಲನೆ ನೀಡಲಾಗಿದೆ. ಪುತ್ತೂರಿಗೆ ಕೆಎಂಎಫ್‌ ಪೂರ್ತಿಯಾಗಿ ಬರುವಂತಾಗಬೇಕು. ಕೊಯಿಲ ಪಶುಸಂಗೋಪನಾ ಫಾಮ್‌ರ್‍ನಲ್ಲಿ ನಿರ್ಮಿತವಾದ ಪಶುವೈದ್ಯಕೀಯ ಕಾಲೇಜಿಗೆ 20 ಕೋಟಿ ರು. ಅನುದಾನ ಮಂಜೂರಾಗಿದೆ ಎಂದು ಅವರು ಹೇಳಿದರು.

ಶಕ್ತಿ ಯೋಜನೆ ಎಫೆಕ್ಟ್: ಸಾರಿಗೆ ಸಿಬ್ಬಂದಿಗಿಲ್ಲ ವೇತನ ಗ್ಯಾರಂಟಿ, ಪಗಾರ ಸಿಗದೆ ಪರದಾಟ..!

ಪ್ರಾಸ್ತಾವಿಕವಾಗಿ ಮಾತನಾಡಿದ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಡಿ. ಪದ್ಮಾವತಿ ಗೃಹಜ್ಯೋತಿ ಯೋಜನೆಗೆ ರಾಜ್ಯದಲ್ಲಿ ಶೇ.93 ನೋಂದಣಿಯಾಗಿದೆ. ದಕ ಜಿಲ್ಲೆಯಲ್ಲಿ ಶೇ 79 ನೋಂದಣಿಯಾಗಿದೆ ಎಂದರು. ವೇದಿಕೆಯಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್‌, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್‌ ಕೆ., ಎಎಸ್ಪಿ ಧರ್ಮಪ್ಪ, ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್‌ ನಂದನ್‌, ಅಧೀಕ್ಷಕ ಎಂಜಿನಿಯರ್‌ ಕೃಷ್ಣರಾಜ್‌ ಉಪಸ್ಥಿತರಿದ್ದರು.

ಮೆಸ್ಕಾಂ ತಾಂತ್ರಿಕ ನಿರ್ದೇಶಕ ಎಚ್‌.ಜಿ. ರಮೇಶ್‌ ಸ್ವಾಗತಿಸಿದರು. ಮೆಸ್ಕಾಂ ಮುಖ್ಯ ಎಂಜಿನಿಯರ್‌ ಪುಷ್ಪಾ ಎಸ್‌.ಎ ವಂದಿಸಿದರು. ಶಿಕ್ಷಕ ಬಾಲಕೃಷ್ಣ ಪೊರ್ದಾಳ್‌ ಕಾರ್ಯಕ್ರಮ ನಿರೂಪಿಸಿದರು.

Latest Videos
Follow Us:
Download App:
  • android
  • ios