ಸಂಕೇಶ್ವರ(ಏ.22): ಕೊರೋನಾ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ, ಜನ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿರುವ ಹಿನ್ನೆಲೆಯಲ್ಲಿ ಮೂರು ಕಾಡುಕೋಣಗಳು ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣಕ್ಕೆ ಮಂಗಳವಾರ ಆಗಮಿಸಿದ್ದು, ಈ ಪೈಕಿ ಒಂದು ಕೋಣ ಅನಿರೀಕ್ಷಿತವಾಗಿ ಬಾವಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಬಾವಿಯಲ್ಲಿ ಬಿದ್ದಿದ್ದ ಕಾಡುಕೋಣವನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾದರು. ನಂತರ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ಸುತ್ತಾಡುತ್ತಿದ್ದ ಇನ್ನೆರಡು ಕಾಡು ಕೋಣಗಳನ್ನು ಪೊಲೀಸರು ಹಾಗೂ ಅರಣ್ಯ ಇಲಾಖೆ ಅ​ಧಿಕಾರಿಗಳು ಪಟಾಕಿ ಸಿಡಿಸಿ ಅರಣ್ಯ ಪ್ರದೇಶದತ್ತ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿ: ರೈಲಿಗೆ ಸಿಕ್ಕು ಎರಡು ಕಾಡುಕೋಣಗಳ ಸಾವು

ಕೊರೋನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಆಗಿರುವುದರಿಂದ ಜನ ಸಂಚಾರ ಸಂಪೂರ್ಣ ಸ್ತಬ್ದವಾಗಿತ್ತು. ಪರಿಣಾಮ ಸಂಕೇಶ್ವರ ಪಟ್ಟಣಕ್ಕೆ ಸುಮಾರು 25 ಕಿಮೀ ದೂರದ ಕಾಡಿನಿಂದ 3 ಕಾಡು ಕೋಣಗಳು ಆಗಮಿಸಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.