ರಾಮನಗರ [ಡಿ.04]: ರಾಜ್ಯದಲ್ಲಿ 15 ಕ್ಷೇತ್ರಗಳ ಉಪ ಚುನಾವಣೆ ಇನ್ನು ಒಂದು ದಿನವಷ್ಟೆ ಬಾಕಿ ಉಳಿದಿದೆ. 

ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಡಿಸೆಂಬರ್‌ 5ರಂದು ನಡೆಯಲಿದೆ. ಚುನಾವಣೆಯನ್ನು ಶಾಂತಿ, ಮುಕ್ತ, ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ನಡೆಸಲು ಡಿಸೆಂಬರ್‌ 03ರಂದು ಸಂಜೆ 6 ಗಂಟೆಯಿಂದ ಡಿಸೆಂಬರ್‌ 6ರ ಬೆಳಿಗ್ಗೆ 6 ಗಂಟೆಯವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. 

ಬೆಂಗಳೂರಿನಲ್ಲಿ ಮದ್ಯ ನಿಷೇಧ : ಪೊಲೀಸ್ ಕಮಿಷನರ್ ಆದೇಶ...

 ಬೆಂಗಳೂರು ನಗರ ಜಿಲ್ಲೆಯ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಕುಂಬಳಗೂಡಿಂದ ರಾಮನಗರ ಜಿಲ್ಲೆಯ 5 ಕಿಲೋ ಮೀಟರ್‌ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಮದ್ಯದ ಸನ್ನದುಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ, ಹಂಚಿಕೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಎಸ್‌. ಅರ್ಚನಾ ಅವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನ ಯಶವಂತಪುರ, ಶಿವಾಜಿನಗರ, ಮಹಾಲಕ್ಷ್ಮೀ ಲೇಔಟ್ , ಕೆಆರ್ ಪುರಂ ನಲ್ಲಿ ಚುನಾವಣೆ ನಡೆಯುತ್ತಿದೆ. ಇನ್ನು ಬೆಂಗಳೂರು ಗ್ರಾಮಾಂತರದಲ್ಲಿ ಹೊಸಕೋಟೆ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ. 

ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯಲಿದ್ದು, ಡಿಸೆಂಬರ್ 9 ರಂದು ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.