ಮಸ್ಕಿ(ಏ.09): ಅಖಂಡ ವೀರಶೈವ-ಲಿಂಗಾಯತ ಧರ್ಮ ಒಡೆಯಲು ಒಳ ಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್‌ ಹಾಗೂ ಅದರ ನಾಯಕರಿಗೆ ವೀರಶೈವ ಲಿಂಗಾಯತ ಸಮಾಜದ ಬಂಧುಗಳು ತಕ್ಕ ಪಾಠ ಕಲಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಗುರುವಾರ ಪಟ್ಟಣದ ಬಾಳೇಕಾಯಿ ಮಿಲ್‌ನಲ್ಲಿ ನಡೆದ ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು ‘ವೀರಶೈವ ಲಿಂಗಾಯತ ಸಮಾಜ ಒಡೆಯುವುದಕ್ಕೆ ಕೈ ಹಾಕಿದವರು ಯಾರೂ ಅಧಿಕಾರದಲ್ಲಿ ಉಳಿದಿಲ್ಲ. ಕಳೆದ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ವೀರಶೈವ ಸಮಾಜವನ್ನು ಒಡೆಯಲು ಹೋಗಿ ಮನೆ ಸೇರಿದ್ದು ಇತಿಹಾಸ ಎಂದರು.

'ಕಾಂಗ್ರೆಸ್ಸಿಗರು ನಿಜವಾದ ರಾಮ ಭಕ್ತರು'

ಬಿ.ಎಸ್‌.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಜೆಡಿಎಸ್‌ನೊಂದಿಗೆ ಒಳ ಒಪ್ಪಂದ ಮಾಡಿಕೊಂಡ ಕಾಂಗ್ರೆಸ್‌ ರಾಜ್ಯದ ಜನರು ನೀಡಿದ್ದ ಜನಾದೇಶಕ್ಕೆ ವಿರುದ್ಧವಾಗಿ ನಡೆದುಕೊಂಡಿತು. ಸತತ ಹೋರಾಟದ ಮೂಲಕ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ಯಡಿಯೂರಪ್ಪ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದ್ದಾರೆ. ಇದು ಕಾಂಗ್ರೆಸ್‌ ಮುಖಂಡರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.