Asianet Suvarna News Asianet Suvarna News

ವಿದೇಶಿಗರಿಗೆ ಮನೆ ನೀಡುವಾಗ ಸಿ ಫಾರ್ಮ್ ಕಡ್ಡಾಯ: ಪೊಲೀಸ್ ಆಯುಕ್ತ ದಯಾನಂದ

ನಗರದಲ್ಲಿ ವಿದೇಶಿ ಪ್ರಜೆಗಳಿಗೆ ಬಾಡಿಗೆಗೆ ಮನೆ ನೀಡುವಾಗ ಮನೆ ಮಾಲೀಕರು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ 'ಸಿ ಫಾರ್ಮ್' ಭರ್ತಿ ಮಾಡಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸೂಚಿಸಿದ್ದಾರೆ. 

C form mandatory while giving house to foreigners Says Police Commissioner b dayananda gvd
Author
First Published Jul 28, 2024, 12:32 PM IST | Last Updated Jul 29, 2024, 11:17 AM IST

ಬೆಂಗಳೂರು (ಜು.28): ನಗರದಲ್ಲಿ ವಿದೇಶಿ ಪ್ರಜೆಗಳಿಗೆ ಬಾಡಿಗೆಗೆ ಮನೆ ನೀಡುವಾಗ ಮನೆ ಮಾಲೀಕರು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ 'ಸಿ ಫಾರ್ಮ್' ಭರ್ತಿ ಮಾಡಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸೂಚಿಸಿದ್ದಾರೆ. ನಗರದ ಕಸ್ತೂರಿ ನಗರದ ನ್ಯೂ ಹಾರಿಜನ್ ಕಾಲೇಜಿನಲ್ಲಿ ಶನಿವಾರ ನಡೆದ ಮಾಸಿಕ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ವಿದೇಶಿ ಪ್ರಜೆಗಳು ನಗರದಲ್ಲಿ ಮಾದಕವಸ್ತು ಮಾರಾಟ, ಸಾಗಣೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ದೂರುಗಳು ಬರುತ್ತಿವೆ. 

ಹೀಗಾಗಿ ಮನೆ ಮಾಲೀಕರು ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ನೀಡುವಾಗ ಅವರ ಮಾಹಿತಿ ಸಂಗ್ರಹಿಸಿ ಸ್ಥಳೀಯ ಪೊಲೀಸರಿಗೆ ನೀಡಬೇಕು. ಇದರಿಂದ ಅವರ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಹಾಯವಾಗುತ್ತದೆ ಎಂದರು. ಈಗಾಗಲೇ ಹೋಟೆಲ್, ಪಿಜಿಮಾಲೀಕ ರಿಗೆ ವಿದೇಶಿ ಪ್ರಜೆಗಳಿಗೆ ಮನೆ, ರೂಮ್ ಬಾಡಿಗೆಗೆ ನೀಡುವಾಗ ಸಿ ಫಾರ್ಮ್ ಭರ್ತಿ ಮಾಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದೇವೆ. ಆದರೆ, ಬಹು ತೇಕರು ಇದನ್ನು ಪಾಲಿಸುತ್ತಿಲ್ಲ. 

ಅಂತಹ ಹೋಟೆಲ್ ಮಾಲೀಕರು, ಪಿಜಿ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಮನೆ ಮಾಲೀಕರು ಈ ವಿದೇಶಿ ಪ್ರಜೆಗಳ ಬಗ್ಗೆ ಮಾಹಿತಿ ನೀಡದಿದ್ದರೆ ಕಾನೂನು ಉಲ್ಲಂಘನೆಯಾಗುತ್ತದೆ. ಸಿ ಫಾರ್ಮ್ ಭರ್ತಿ ನಿಯಮ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು. ಇದೇ ವೇಳೆ ಇಂದಿರಾನಗರ, ದೊಮ್ಮಲೂರು, ಕಮ್ಮನಹಳ್ಳಿ, ಕಸ್ತೂರಿನಗರ, ಬೈಯಪ್ಪನಹಳ್ಳಿ ಸೇರಿದಂತೆ ಪೂರ್ವ ವಿಭಾಗದ ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆ ವಿವರಿಸಿದರು.

70ನೇ ವಯಸ್ಸಲ್ಲಿ ಸ್ಕೂಲಿಗೆ ಹೋದ್ರಾ ಸೂಪರ್​ಸ್ಟಾರ್?: ಮೊಮ್ಮಗನ ಜೊತೆ ಸ್ಕೂಲಿಗೆ ಹೋದ ರಜನಿಕಾಂತ್

₹6 ಕೋಟಿ ಡ್ರಗ್ಸ್‌ ಜಪ್ತಿ: ಬಟ್ಟೆ ವ್ಯಾಪಾರದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಅಕ್ರಮವಾಗಿ ಮಾದಕವಸ್ತು ಮಾರಾಟದಲ್ಲಿ ತೊಡಗಿದ್ದ ವಿದೇಶಿ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಮಾದಕವಸ್ತು ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ನೈಜೀರಿಯಾ ಪ್ರಜೆ ಚುಕುದ್ವೇಮ್‌ ಜಸ್ಟೀಸ್‌ ನ್ವಾಫಾರ್‌(41) ಬಂಧಿತ. ಆರೋಪಿಯಿಂದ ಸುಮಾರು ₹6 ಕೋಟಿ ಮೌಲ್ಯದ 4 ಕೆ.ಜಿ. ಎಂಡಿಎಂಎ ಕ್ರಿಸ್ಟೆಲ್‌ ಮಾದವಸ್ತು, ಎರಡು ಮೊಬೈಲ್‌ ಫೋನ್‌, ಒಂದು ತೂಕದ ಯಂತ್ರ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಇತ್ತೀಚೆಗೆ ಎಲೆಕ್ಟ್ರಾನಿಕ್‌ ಸಿಟಿಯ ಬೆಟ್ಟದಾಸನಪುರದ ಮನೆಯೊಂದರಲ್ಲಿ ವಿದೇಶಿ ಪ್ರಜೆಯೊಬ್ಬ ಅಕ್ರಮವಾಗಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios