ಶಾಂತಿ ಕದಡಿದ್ರೆ ಎಚ್ಚರ : ಅಲೋಕ್ ಕುಮಾರ್ ವಾರ್ನಿಂಗ್ !
ಪೌರತ್ವ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು ಈ ನಿಟ್ಟಿನಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ತಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ಕಲಬುರಗಿ [ಡಿ.20]: ರಾಜ್ಯದಲ್ಲಿ ಪೌರತ್ವ ಕಾಯ್ದೆ ವಿಚಾರವಾಗಿ ಪ್ರತಿಭಟನೆ ನಡೆದಿದ್ದು, ಹಲವೆಡೆ ಹಿಂಸಾ ರೂಪ ತಾಳಿತ್ತು. ಈ ನಿಟ್ಟಿನಲ್ಲಿ ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ಕಲಬುರಗಿಯಲ್ಲಿ ಮಾತನಾಡಿರುವ KSRP ADGP ಅಲೋಕ್ ಕುಮಾರ್ ಪರಿಸ್ಥಿತಿ ಅವಲೋಕಿಸಲು ನನ್ನನ್ನ ಇಲ್ಲಿಗೆ ನಿಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಯಾರೇ ಕಾನೂನು ಕೈಗೆತ್ತಿಕೊಂಡರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಆಗುತ್ತಿದೆ. ಪ್ರತಿಭಟನೆ ಹಿಂಸಾಚಾರದಿಂದ ಶಾಂತಿ ಸುವ್ಯವಸ್ಥೆಗೆ ಭಂಗ ತಂದಲ್ಲಿ ಕಟ್ಟುನಿಟ್ಟಿನ ಆ್ಯಕ್ಷನ್ ತೆಗೆದುಕೊಳ್ಳಲಾಗುತ್ತದೆ ಎಂದು ಅಲೋಕ್ ಕುಮಾರ್ ಹೇಳಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆದಿದ್ದು, ಮಂಗಳೂರಿನಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಅಲ್ಲದೇ ಹಲವೆಡೆ ಪ್ರತಿಭಟನೆ ಭುಗಿಲೆದ್ದ ಕಾರಣ ಸಾವಿರಾರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರತಿಭಟನೆ ಹಿಂಸಾಚಾರಗಳು ನಡೆಯದಂತೆ 144 ಸೆಕ್ಷನ್ ಮುಂದುವರಿಸಲಾಗಿದ್ದು, ಅಹಿತಕರ ಘಟನೆಗಳಾಗಂದತೆ ಎಚ್ಚರಿಕೆ ವಹಿಸಲಾಗಿದೆ.